Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಆಳ್ವಾಸ್: ಆರೋಗ್ಯಕರ ನಡವಳಿಕೆ ಹಾಗೂ ಎಚ್‌ಐವಿ ಏಡ್ಸ್ ಕುರಿತು ಜಾಗೃತಿ ಉಪನ್ಯಾಸ
    alvas nudisiri

    ಆಳ್ವಾಸ್: ಆರೋಗ್ಯಕರ ನಡವಳಿಕೆ ಹಾಗೂ ಎಚ್‌ಐವಿ ಏಡ್ಸ್ ಕುರಿತು ಜಾಗೃತಿ ಉಪನ್ಯಾಸ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಆಳ್ವಾಸ್ ಪದವಿಪೂರ್ವ ಕಾಲೇಜಿನ ಮಕ್ಕಳ ಹಕ್ಕುಗಳ ಸಂಘದ ವತಿಯಿಂದ ಆರೋಗ್ಯಕರ ನಡವಳಿಕೆ ಹಾಗೂ ಎಚ್‌ಐವಿ  ಏಡ್ಸ್ ಕುರಿತು ಜಾಗೃತಿ ಉಪನ್ಯಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

    Click Here

    Click Here

    Call us

    Click Here

    ಆಳ್ವಾಸ್ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕಿ ಡಾ. ಸುರೇಖಾ ಪೈ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಎಚ್‌ಐವಿ  ಏಡ್ಸ್ ಹಾಗೂ ಆರೋಗ್ಯಕರ ಜೀವನಶೈಲಿಯ ಕುರಿತು ಮಾಹಿತಿ ನೀಡಿದರು.

    ಉತ್ತಮ ಆಹಾರ ಪದ್ಧತಿ, ನಿಯಮಿತ ವ್ಯಾಯಾಮ ಮತ್ತು ಸಮರ್ಪಕ ವಿಶ್ರಾಂತಿಯು ಆರೋಗ್ಯಕರ ಜೀವನದ ಪ್ರಮುಖ ಆಧಾರಗಳಾಗಿವೆ. ಇವು ವಿದ್ಯಾರ್ಥಿಗಳಲ್ಲಿ ಮಾನಸಿಕ ಸ್ತೈರ್ಯ ಹಾಗೂ ಬೌದ್ಧಿಕ ಸಾಮರ್ಥ್ಯವನ್ನು ವೃದ್ಧಿಸುತ್ತವೆ ಎಂದರು.  ಆಧುನಿಕ ಆಹಾರ ಪದ್ಧತಿ ಹಾಗೂ ಒತ್ತಡದ ಜೀವನಶೈಲಿಯಿಂದಾಗಿ ಯುವಜನರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳು ಉಂಟಾಗುತ್ತಿವೆ.

    ಎಚ್‌ಐವಿ ಎಡ್ಸ್ನಂತಹ ಸಾಂಕ್ರಾಮಿಕ ಕಾಯಿಲೆಗಳ ಕುರಿತು ಸಮಾಜದಲ್ಲಿರುವ ತಪ್ಪು ಕಲ್ಪನೆ, ಭಯ ಮತ್ತು ಅಜ್ಞಾನವನ್ನು ಹೋಗಲಾಡಿಸುವ ಅಗತ್ಯವಿದೆ ಎಂದರು. ಎಚ್‌ಐವಿ ಸೋಂಕಿತ ವ್ಯಕ್ತಿಗಳೊಂದಿಗೆ ಮಾತನಾಡುವುದು, ಆಹಾರ ಹಂಚಿಕೊಳ್ಳುವುದು ಅಥವಾ ಸಾಮಾನ್ಯ ಸಾಮಾಜಿಕ ಒಡನಾಟ ಹೊಂದುವುದರಿಂದ ಸೋಂಕು ಹರಡುವುದಿಲ್ಲ. ಬದಲಾಗಿ, ಅವರೊಂದಿಗೆ ಮಾನವೀಯತೆ, ಗೌರವ ಹಾಗೂ ಸಹಾನುಭೂತಿಯಿಂದ ವರ್ತಿಸುವ ಮೂಲಕ ಅವರಲ್ಲಿನ ಕೀಳರಿಮೆ ಮತ್ತು ಸಾಮಾಜಿಕ ಕಳಂಕವನ್ನು ಕಡಿಮೆ ಮಾಡಬಹುದು ಎಂದು ಪ್ರಶ್ನೋತ್ತರಗಳ ಮೂಲಕ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಟ್ಟರು. ಅತಿಯಾದ ಕೊಬ್ಬು, ಸಕ್ಕರೆ ಹಾಗೂ ಉಪ್ಪಿನ ಅಂಶ ಹೊಂದಿರುವ ಆಹಾರ ಮತ್ತು ಫಾಸ್ಟ್ಫುಡ್‌ಗಳ ಸೇವನೆಯಿಂದ ದೂರವಿದ್ದು, ಪೌಷ್ಟಿಕ ಆಹಾರ ಪದ್ಧತಿಯನ್ನು ರೂಢಿಸಿಕೊಳ್ಳಬೇಕು. ಉತ್ತಮ ಆಹಾರವು ದೀರ್ಘಕಾಲದ ಆರೋಗ್ಯ ಮತ್ತು ಆಯುಷ್ಯಕ್ಕೆ ಪೂರಕವಾಗಿದೆ ಎಂದರು.

    ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಂಡು ಉತ್ತಮ ಬದುಕು ಕಟ್ಟಿಕೊಳ್ಳುವಂತೆ ಕರೆ ನೀಡಿದ ಅವರು, ಪ್ರತಿದಿನ ಹದಿನೈದು ನಿಮಿಷಗಳ ವ್ಯಾಯಾಮ, ದೇಹಕ್ಕೆ ಅಗತ್ಯವಿರುವಷ್ಟು ನಿದ್ರೆ ಹಾಗೂ ದೇಹದ ತೂಕವನ್ನು ಸಮತೋಲನದಲ್ಲಿಟ್ಟುಕೊಳ್ಳುವ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ತಿಳಿಸಿದರು.

    Click here

    Click here

    Click here

    Call us

    Call us

    ಕಾಲೇಜಿನ ಉಪಪ್ರಾಂಶುಪಾಲೆ  ಝಾನ್ಸಿ ಪಿ.ಎನ್. ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕಿ ಹಾಗೂ ಮಕ್ಕಳ ಸುರಕ್ಷತಾ ಸಮಿತಿಯ ಸಂಚಾಲಕಿ ಮಲ್ಲಿಕಾ ಎಂ.ಆರ್. ಇದ್ದರು. ಕಾಲೇಜಿನ ವಿದ್ಯಾರ್ಥಿ ಆಪ್ತ ಸಮಾಲೋಚಕಿ ರೇನಿಟಾ ಡಿ’ಸೋಜಾ ಕಾರ್ಯಕ್ರಮ ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ʼವಿಕ್ಟರಿ 2026ʼ ಉದ್ಘಾಟನೆ

    05/11/2026

    ಬಾಲ್ ಬ್ಯಾಡ್ಮಿಂಟನ್: ಗಂಗೊಳ್ಳಿ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

    04/11/2026

    ರಾಜ್ಯ ಮಟ್ಟದ ಬಾಲಕಿಯರ ಖೋ-ಖೋ ಪಂದ್ಯಾಟ: ಆಳ್ವಾಸ್‌ ಬಾಲಕಿಯರ ತಂಡ ಚಾಂಪಿಯನ್

    04/11/2026
    Leave A Reply Cancel Reply

    19 + nine =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಶ್ರೀ ವೆಂಕಟರಮಣ ಪ.ಪೂ ಕಾಲೇಜಿನಲ್ಲಿ ʼವಿಕ್ಟರಿ 2026ʼ ಉದ್ಘಾಟನೆ
    • ಆಳ್ವಾಸ್: ಆರೋಗ್ಯಕರ ನಡವಳಿಕೆ ಹಾಗೂ ಎಚ್‌ಐವಿ ಏಡ್ಸ್ ಕುರಿತು ಜಾಗೃತಿ ಉಪನ್ಯಾಸ
    • ವಿದ್ಯಾರ್ಥಿಗಳಿಗೆ ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ: ತನ್ವೀರ್ ಸೇಠ್
    • ಕೋಟ: ಹಣ ದುಪ್ಪಟ್ಟು ಮಾಡುವ ಆಮಿಷವೊಡ್ಡಿ ಹೊಟೇಲ್ ಉದ್ಯಮಿಗೆ 5.76 ಲಕ್ಷ ರೂ. ವಂಚನೆ
    • ಮೂಡ್ಲಕಟ್ಟೆ: ʼಇನೋವೆಷನ್ ಅಂಡ್‌ ಡಿಸೈನ್ ಥಿಂಕಿಂಗ್ʼ ವಿಷಯದ ಕುರಿತು ವಿಶೇಷ ಉಪನ್ಯಾಸ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.