ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮಣಿಪಾಲ ಜ್ಞಾನಸುಧಾ ಪದವಿ-ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಯುವ ಸಂಸತ್ – 2026 ಸ್ಪರ್ಧೆಯಲ್ಲಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಾಗರತ್ನ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳ ಇಲಾಖೆಗಳ ಆಶ್ರಯದಲ್ಲಿ ಸ್ಪರ್ಧೆ ನಡೆಯಿತು.
ನಾಗರತ್ನ ಪ್ರಸಿದ್ಧ ಯಕ್ಷಗಾನ ಕಲಾವಿದ ಆಜ್ರಿ ಉದಯ್ ಕುಮಾರ್ ಶೆಟ್ಟಿ, ಜ್ಯೋತಿ ಶೆಟ್ಟಿ ದಂಪತಿಯ ಪುತ್ರಿ. ಕುಂದಾಪುರ ಎಜುಕೇಶನ್ ಸೊಸೈಟಿ ಅಧ್ಯಕ್ಷ ಬಿ. ಎಂ. ಸುಕುಮಾರ್ ಶೆಟ್ಟಿ, ಸಂಸ್ಥೆಯ ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ ಅಭಿನಂದಿಸಿ, ಮುಂದಿನ ಸ್ಪರ್ಧೆಗೆ ಶುಭಕೋರಿದ್ದಾರೆ.












