ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ಶಂಕರನಾರಾಯಣ ಇದರ ಕಲಾ ವಿಭಾಗ ಸಾದರ ಪಡಿಸುವ ಆಹ್ವಾನಿತ ಪದವಿ ಪೂರ್ವ ಕಾಲೇಜುಗಳ ಸಾಂಸ್ಕೃತಿಕ ಸ್ಪರ್ಧೆ ಉನ್ಮೇಷ 2k26ರಲ್ಲಿ ಶ್ರೀ ಮೂಕಾಂಬಿಕಾ ದೇವಳದ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಯಲ್ಲಿ ಭಾಗವಹಿಸಿ ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದಿರುತ್ತಾರೆ .
ಇವರೆಲ್ಲರಿಗೂ ಕಾಲೇಜು ಆಡಳಿತ ಮಂಡಳಿ, ಶ್ರೀ ದೇವಳದ ಕಾರ್ಯನಿರ್ವಹಣಾಧಿಕಾರಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು ಅಭಿನಂದನೆಯನ್ನು ಸಲ್ಲಿಸಿರುತ್ತಾರೆ.ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಕಾಲೇಜಿನ ಸಾಂಸ್ಕೃತಿಕ ವಿಭಾಗದ ಮುಖ್ಯಸ್ಥ ವಾಸುದೇವ ಉಡುಪ ಉಪಸ್ಥಿತರಿದ್ದಾರೆ.












