ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ತಾಲೂಕಿನ ಬಹುಕಾಲದ ಬೇಡಿಕೆಯಾಗಿದ್ದ ತಾಲೂಕು ಆಸ್ಪತ್ರೆಯ ಬೇಡಿಕೆಗೆ ಸರಕಾರವು ಸ್ಪಂದಿಸಿ ಸದ್ಯ 50 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆ ಮಂಜೂರಾತಿಗೆ ಆದೇಶ ಮಾಡಿದೆ. ಪ್ರಸ್ತುತವಿರುವ ಸಮುದಾಯ ಆರೋಗ್ಯ ಕೇಂದ್ರವು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಗೆಜೇರಲಿದೆ. ಇದಕ್ಕಾಗಿ ಒಟ್ಟು 25 ಕೋಟಿ ರೂ ಅನುದಾನ ಮೀಸಲಿರಿಸಿದ್ದು, ಪ್ರಸ್ತುತ ಸಾಲಿನಲ್ಲಿ 2 ಕೋಟಿ ಬಿಡುಗಡೆಯಾಗಲಿದೆ.
ಬೈಂದೂರು ತಾಲೂಕಿನ ಬಡ ಜನರು ಆರೋಗ್ಯ ಸಮಸ್ಯೆಗಳಿಗಾಗಿ ಕುಂದಾಪುರ ಹಾಗೂ ಉಡುಪಿ ಭಾಗದ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ತೆರಳಬೇಕಾದ ಅನಿವಾರ್ಯತೆ ಇತ್ತು. ಹೊಸದಾಗಿ ರಚನೆಯಾದ ತಾಲೂಕಿನಲ್ಲಿ ಸಮುದಾಯ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಿ ಕನಿಷ್ಠ 100 ಹಾಸಿಗೆಗಳ ಸಾಮರ್ಥ್ಯದ ತಾಲೂಕು ಆಸ್ಪತ್ರೆಯನ್ನಾಗಿಸಬೇಕು ಎಂದು ಬೈಂದೂರು ಶಾಸಕರು ಹಾಗೂ ಮಾಜಿ ಶಾಸಕರುಗಳು ಸೇರಿದಂತೆ ವಿವಿಧ ಸಂಘಟನೆಗಳು ಬೇಡಿಕೆ ಇಟ್ಟಿದ್ದರು. ಇದರ ಫಲವಾಗಿ ಆಸ್ಪತ್ರೆ ಹೆಚ್ಚುವರಿಗೆ ಅಗತ್ಯಕ್ಕೆ ಬೇಕಾಗಿದ್ದ 2.11 ಎಕ್ರೆ ಸರಕಾರಿ ಜಾಗವನ್ನು ಈ ಹಿಂದೆ ಇಲಾಖೆ ಹೆಸರಿಗೆ ಮಂಜೂರು ಮಾಡಿಸಿಕೊಳ್ಳಲಾಗಿತ್ತು. ಬೈಂದೂರು ತಾಲೂಕು ಕೇಂದ್ರಕ್ಕೆ 100 ಹಾಸಿಗೆ ಸಾಮರ್ಥ್ಯದ ತಾಲೂಕು ಆಸ್ಪತ್ರೆಯ ಅವಶ್ಯಕತೆ ಬಗ್ಗೆ ಮನವಿ ಹಾಗೂ ಮನವರಿಕೆ ಮಾಡಲಾಗಿತ್ತು. ಇದರ ಫಲವಾಗಿ ಆಸ್ಪತ್ರೆ ಮೇಲ್ದರ್ಜೆಗೇರಿಸಲು ಆದೇಶ ಮಾಡಲಾಗಿದೆ.
- ಬೈಂದೂರು ಸಮುದಾಯ ಆರೋಗ್ಯ ಕೇಂದ್ರವನ್ನು 50 ಬೆಡ್ಗಳ ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಗೆಗೇರಿಸಿರುವುದಕ್ಕೆ ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರಿಗೆ ಧನ್ಯವಾದಗಳು. ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವಂತೆ ಈ ಹಿಂದಿನ ಹಾಗೂ ಹಾಲಿ ಮುಖ್ಯಮಂತ್ರಿಗಳು ಮತ್ತು ಆರೋಗ್ಯ ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಅಧಿವೇಶನದಲ್ಲಿಯೂ ಧ್ವನಿಎತ್ತಲಾಗಿತ್ತು. ಮುಂದಿನ ದಿನಗಳಲ್ಲಿ ಅಗತ್ಯ ಸಿಬ್ಬಂದಿ ನೇಮಕಾತಿಯೊಂದಿಗೆ ತಾಲೂಕು ಆಸ್ಪತ್ರೆಯನ್ನು ಪೂರ್ಣ ಪ್ರಮಾಣದಲ್ಲಿ 100 ಹಾಸಿಗೆಗಳಿಗೆ ಉನ್ನತಿಕರಿಸಲು ಮನವಿ ಮಾಡುತ್ತೇನೆ – ಗುರುರಾಜ್ ಗಂಟಿಹೊಳೆ, ಬೈಂದೂರು ಶಾಸಕರು
ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಹಾಗೂ ಆರೋಗ್ಯ ಸಚಿವರಾದ ಯು.ಟಿ ಖಾದರ್ ಅವರು ತಾಲೂಕು ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸಲು ಆದೇಶ ಮಾಡಿ, ಆಸ್ಪತ್ರೆಯ ಕಟ್ಟಡ ಹಾಗೂ ಇತರ ಮೂಲಭೂತ ಸೌಕರ್ಯಗಳ ಉನ್ನತಿಕರಣಕ್ಕಾಗಿ 2 5ಕೋಟಿ ಅನುದಾನ ಮೀಸಲಿರಿಸಲಾಗಿದೆ. ಮೊದಲ ಹಂತವಾಗಿ 2 ಕೋಟಿಯನ್ನು ಮಂಜೂರು ಮಾಡಲಾಗಿದೆ.












