Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ವೈದ್ಯಕೀಯ ವಿದ್ಯಾರ್ಥಿಗಳಿಗೆ ಶವದೇಹವೇ ಮೊದಲ ಗುರು, ಮೊದಲ ರೋಗಿ: ಡಾ. ಮೇಘನಾ ಮುಕುಂದ್
    alvas nudisiri

    ವೈದ್ಯಕೀಯ ವಿದ್ಯಾರ್ಥಿಗಳಿಗೆ ಶವದೇಹವೇ ಮೊದಲ ಗುರು, ಮೊದಲ ರೋಗಿ: ಡಾ. ಮೇಘನಾ ಮುಕುಂದ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ
    : ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಕಾಲೇಜಿನ ಅಂಗರಚನಾಶಾಸ್ತ್ರ ವಿಭಾಗದ ವತಿಯಿಂದ ಪ್ರಥಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳಿಗಾಗಿ ಶವದೇಹ ಗೌರವ ಪ್ರತಿಜ್ಞಾ ಸಮಾರಂಭವು ಗುರುವಾರ ಮಿಜಾರು ಕ್ಯಾಂಪಸ್‌ನಲ್ಲಿ ನಡೆಯಿತು.

    Click Here

    Click Here

    Call us

    Click Here

    ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರಿನ ಯೆನೆಪೋಯ ವಿಶ್ವವಿದ್ಯಾಲಯದ ತುರ್ತು ಚಿಕಿತ್ಸಾ ವಿಭಾಗದ ಪ್ರಾಧ್ಯಾಪಕಿ ಹಾಗೂ ಸಿಮ್ಯುಲೇಶನ್ ಪ್ರಯೋಗಾಲಯದ ಸಂಯೋಜಕಿ ಡಾ. ಮೇಘನಾ ಮುಕುಂದ್, “ವೈದ್ಯಕೀಯ ವಿದ್ಯಾರ್ಥಿಗಳಿಗೆ ಶವದೇಹವೇ ಮೊದಲ ಗುರು. ಅದನ್ನು ಅತ್ಯಂತ ಗೌರವ ಮತ್ತು ಕೃತಜ್ಞತೆಯಿಂದ ಕಾಣುವುದು ಪ್ರತಿಯೊಬ್ಬ ವಿದ್ಯಾರ್ಥಿಯ ಕರ್ತವ್ಯ. ಮಾನವ ದೇಹದ ಅಂಗರಚನೆಯನ್ನು ಅರಿತುಕೊಳ್ಳಲು ಹಾಗೂ ವೈದ್ಯಕೀಯ ಜ್ಞಾನದ ಮೂಲಭೂತ ಅಂಶಗಳನ್ನು ಕಲಿಯಲು ಶವದೇಹಗಳ ಕೊಡುಗೆ ಅಪಾರ. ಈ ಅಪರೂಪದ ಕಲಿಕಾ ಅವಕಾಶವನ್ನು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

    ಆಳ್ವಾಸ್ ವೈದ್ಯಕೀಯ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ. ಮಹಾಬಲ ಶೆಟ್ಟಿ ಮಾತನಾಡಿ, “ತಮ್ಮ ದೇಹವನ್ನು ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನೆಗಾಗಿ ದಾನ ಮಾಡುವುದು ಸಾಮಾನ್ಯ ನಿರ್ಧಾರವಲ್ಲ. ಅದಕ್ಕೆ ಅಪಾರ ಉದಾರತೆ, ಮಾನವೀಯ ಕಾಳಜಿ ಹಾಗೂ ಸಮಾಜಸೇವೆಯ ಮನೋಭಾವ ಅಗತ್ಯ. ಮಾನವಕುಲದ ಒಳಿತಿಗಾಗಿ ವ್ಯಕ್ತಿಯೊಬ್ಬರು ನೀಡಬಹುದಾದ ಅತ್ಯಂತ ಶ್ರೇಷ್ಠ ಕೊಡುಗೆಗಳಲ್ಲಿ ದೇಹದಾನವೂ ಒಂದು. ವೈದ್ಯಕೀಯ ವಿದ್ಯಾರ್ಥಿಗಳಿಗೆ ಶವದೇಹವೇ ಮೊದಲ ರೋಗಿ ಹಾಗೂ ಮೊದಲ ಗುರು. ಮಾನವ ದೇಹದ ರಚನೆಯನ್ನು ಪ್ರಾಯೋಗಿಕವಾಗಿ ಅರಿತುಕೊಳ್ಳಲು ಮತ್ತು ಭವಿಷ್ಯದ ವೈದ್ಯಕೀಯ ವೃತ್ತಿಗೆ ಭದ್ರ ಬುನಾದಿ ಹಾಕಿಕೊಳ್ಳಲು ಇದು ಅಮೂಲ್ಯ ಅವಕಾಶವಾಗಿದೆ ಎಂದರು.

    ಈ ಸಂದರ್ಭದಲ್ಲಿ ಶವದೇಹಗಳಿಗೆ ಪುಷ್ಪನಮನ ಸಲ್ಲಿಸುವ ಮೂಲಕ ಗೌರವ ಹಾಗೂ ಕೃತಜ್ಞತೆ ಅರ್ಪಿಸಲಾಯಿತು. ಅಂಗರಚನಾಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಜಯಪ್ರಕಾಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

    ಕಾರ್ಯಕ್ರಮದಲ್ಲಿ ರಂಗೋಲಿ ಹಾಗೂ ಚಾರ್ಟ್ ತಯಾರಿಕಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

    Click here

    Click here

    Click here

    Call us

    Call us

    ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ, ಮ್ಯಾನೇಜಿಂಗ್ ಟ್ರಸ್ಟಿಗಳಾದ ಡಾ. ವಿನಯ್ ಆಳ್ವ, ಡಾ. ಹನಾ ಶೆಟ್ಟಿ, ಡಾ. ಗ್ರೀಷ್ಮಾ ವಿವೇಕ್ ಆಳ್ವ, ಜನರಲ್ ಮೆಡಿಸಿನ್ ವಿಭಾಗದ ಡಾ. ಸದಾನಂದ ನಾಯಕ್ ಹಾಗೂ ಮಕ್ಕಳ ವಿಭಾಗದ ಡಾ. ವಸಂತ್ ಉಪಸ್ಥಿತರಿದ್ದರು. ಡಾ. ಸಂಜನಾ ಎಮ್ ಕೆ ಕಾರ್ಯಕ್ರಮ ನಿರೂಪಿಸಿ, ಡಾ ಅಡ್ವoಟಿನಾ ರೋಡ್ರಿಗಸ್ ಸ್ವಾಗತಿಸಿ, ಡಾ ಬಾಲಕೃಷ್ಣ ವೈ ಸಿ ವಂದಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಗೀತಾ ನಾಯಕ್‌ಗೆ ’ಸ್ವರ್ಣ ಶ್ರೀ’ ರಾಷ್ಟ್ರೀಯ ಪ್ರಶಸ್ತಿ

    06/11/2026

    ಗಂಗೊಳ್ಳಿ ಎಸ್‌.ವಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಂಗೊಳ್ಳಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಉದ್ಘಾಟನೆ

    05/11/2026

    ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್ ಶಾಲೆಗೆ 26 ಪದಕಗಳು – 12 ಕ್ರೀಡಾಪಟುಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

    05/11/2026
    Leave A Reply Cancel Reply

    18 − 1 =

    Call us

    Click Here

    Call us

    Call us

    Call us
    Highest Viewed Recently
    • ಬೈಂದೂರು ಸಮುದಾಯ ಆರೋಗ್ಯ ಕೇಂದ್ರ – ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೆ. ಸರಕಾರದಿಂದ ಅನುಮೋದನೆ
    • ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ಗೀತಾ ನಾಯಕ್‌ಗೆ ’ಸ್ವರ್ಣ ಶ್ರೀ’ ರಾಷ್ಟ್ರೀಯ ಪ್ರಶಸ್ತಿ
    • ಹೋಲಿ ಕ್ರಾಸ್‌ ಶಾಲೆಯಲ್ಲಿ ಶಿರೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸಂಪನ್ನ
    • ವೈದ್ಯಕೀಯ ವಿದ್ಯಾರ್ಥಿಗಳಿಗೆ ಶವದೇಹವೇ ಮೊದಲ ಗುರು, ಮೊದಲ ರೋಗಿ: ಡಾ. ಮೇಘನಾ ಮುಕುಂದ್
    • ಉಡುಪಿ: ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.