ಕುಂದಾಪ್ರ ಡಾಟ್ ಕಾಂ ಸುದ್ದಿ.
ಬೈಂದೂರು: ಇಲ್ಲಿನ ಪಡುವರಿಯ ಹೋಲಿ ಕ್ರಾಸ್ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಶಿರೂರು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ಕಾರ್ಯಕ್ರಮವು ಸಂಭ್ರಮದಿಂದ ಜರುಗಿತು.
ವಿದ್ಯಾರ್ಥಿಗಳಲ್ಲಿ ಅಡಗಿರುವ ಸೃಜನಶೀಲತೆ, ಕಲಾತ್ಮಕ ಅಭಿರುಚಿ ಹಾಗೂ ವಿವಿಧ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸಲು ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಹತ್ವದ ವೇದಿಕೆಯಾಗಿವೆ. ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಯನ್ನು ಮುಕ್ತವಾಗಿ ಅಭಿವ್ಯಕ್ತಪಡಿಸಲು ಇಂತಹ ಸ್ಪರ್ಧೆಗಳು ಅವಕಾಶ ಕಲ್ಪಿಸುತ್ತವೆ ಎಂದು ಕಾರ್ಯಕ್ರಮದಲ್ಲಿ ಅಭಿಪ್ರಾಯ ವ್ಯಕ್ತವಾಯಿತು. ಶಿರೂರು ಕ್ಲಸ್ಟರ್ ವ್ಯಾಪ್ತಿಯ ಸುಮಾರು 19 ಶಾಲೆಗಳ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮವನ್ನು ಬೈಂದೂರು ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ನಾಯ್ಕ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಗೌರವಿಸಿದರು. ಬೈಂದೂರಿನ ಹೋಲಿ ಕ್ರಾಸ್ ಶಾಲೆಯ ವ್ಯವಸ್ಥಾಪಕರಾದ ರೆವರೆಂಡ್ ಸಿಸ್ಟರ್ ಆನ್ಸಿ ಪೌಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಬೈಂದೂರು ಹೋಲಿ ಕ್ರಾಸ್ ಚರ್ಚ್ನ ರೆವರೆಂಡ್ ಫಾದರ್ ಡೆನಿಸ್ ಡಿಸೋಜಾ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೈಂದೂರು ಸಂಯೋಜಕರಾದ ಪ್ರದೀಪ್ ಕುಮಾರ್ ಶೆಟ್ಟಿ, ಶಿಕ್ಷಣ ಸಂಯೋಜಕರು ಹಾಗೂ ಪ್ರತಿಭಾ ಕಾರಂಜಿ ನೋಡಲ್ ಅಧಿಕಾರಿಯಾದ ಸತ್ಯನಾ ಕೋಡೇರಿ, ಶಿರೂರು ಕ್ಲಸ್ಟರ್ನ ಸಿಆರ್ಪಿ ಗಣೇಶ್ ಪೂಜಾರಿ ಹಾಗೂ ಬೈಂದೂರು ಶಿಕ್ಷಣ ಸಂಯೋಜಕ ರಾಜೇಶ್ ಉಪಸ್ಥಿತರಿದ್ದರು.
ಶಾಲಾ ಶಿಕ್ಷಕಿ ಅರ್ಪಿತಾ ಎಸ್. ಕಾರ್ಯಕ್ರಮ ನಿರೂಪಿಸಿ ಸ್ವಾಗತಿಸಿದರು. ಶಿಕ್ಷಕಿ ನಾಗರತ್ನ ವಂದಿಸಿದರು. ವಿದ್ಯಾರ್ಥಿಗಳ ಪ್ರತಿಭೆ, ಉತ್ಸಾಹ ಹಾಗೂ ಕಲಾಸಕ್ತಿಗೆ ವೇದಿಕೆಯಾದ ಈ ಕಾರ್ಯಕ್ರಮವು ಸಂಭ್ರಮದ ವಾತಾವರಣದಲ್ಲಿ ಯಶಸ್ವಿಯಾಗಿ ಸಂಪನ್ನಗೊಂಡಿತು.

















