ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ನಾಟ್ಯ ಮಯೂರಿ ನೃತ್ಯ ಟ್ರಸ್ಟ್ ರಿ., ವಿರಾಜಪೇಟೆ, ಕೊಡಗು ಜಿಲ್ಲೆ ಇವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇವರ ಸಹಯೋಗದೊಂದಿಗೆ ಸಂಗೀತ ಹಾಗೂ ಚಿತ್ರಕಲೆ ಕ್ಷೇತ್ರದಲ್ಲಿ ಸಾಧನೆ ಮಾಡಿದ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಗೀತಾ ನಾಯಕ್ ಅವರಿಗೆ ’ಸ್ವರ್ಣ ಶ್ರೀ’ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ..
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ












