ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಗಡಿನಾಡು ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ ವತಿಯಿಂದ ನೀಡಲಾಗುವ 2026ನೇ ಸಾಲಿನ ಅಂತಾರಾಜ್ಯ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಡಾ. ಶಿಹಾನ್ ಸುಬ್ರಮಣ್ಯ ಪಿ. ಆಯ್ಕೆಯಾಗಿದ್ದು, ನ.1ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾಸರಗೋಡು ಕನ್ನಡ ಭವನದ ಕನ್ನಡ ಭುವನೇಶ್ವರಿ ವೇದಿಕೆಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಸಂಭ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಈ ವೇಳೆ ಕನ್ನಡ ಭವನದ ಸ್ಥಾಪಕ ಅಧ್ಯಕ್ಷ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿದ್ದರು.

ಡಾ. ಶಿಹಾನ್ ಸುಬ್ರಮಣ್ಯ ಪಿ. ಅವರು ಈಗಾಗಲೇ ಶಿಕ್ಷಕ ರತ್ನ ರಾಜ್ಯ ಪ್ರಶಸ್ತಿ, ಕರುನಾಡ ನಿಧಿ ರಾಜ್ಯ ಪ್ರಶಸ್ತಿ, ಹಿಂದೂ ರತ್ನ ರಾಷ್ಟ್ರೀಯ ಪ್ರಶಸ್ತಿ, ಬುಡೋ ಖಾನ್ ಅಂತಾರಾಷ್ಟ್ರೀಯ ಉತ್ತಮ ಕರಾಟೆ ಶಿಕ್ಷಕ ಪ್ರಶಸ್ತಿ, ಮಹಾತ್ಮ ಗಾಂಧಿ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವು ಗೌರವಗಳಿಗೆ ಪಾತ್ರರಾಗಿದ್ದಾರೆ. ಅಲ್ಲದೆ, ಭಾರತ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ, ಕರಾಟೆ ಗಿನ್ನೆಸ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಹಾಗೂ ಗೌರವ ಡಾಕ್ಟರೇಟ್ ಪ್ರಶಸ್ತಿಯನ್ನೂ ಪಡೆದಿದ್ದಾರೆ.












