Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಕೈ ಜೋಡಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಕೈ ಜೋಡಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸಲು ಪ್ರತಿಯೊಬ್ಬ್ಲರೂ ಕೈಜೋಡಿಸಬೇಕು. ಮಾದಕ ವಸ್ತುಗಳ ಮಾರಾಟ, ಬಳಕೆ ಮತ್ತಿತರ ಚಟುವಟಿಕೆಗಳು ಕಂಡುಬಂದಲ್ಲಿ ಸಾರ್ವಜನಿಕರು ಮಾಹಿತಿ ಸಂಗ್ರಹಕ್ಕೆ ಅಭಿವೃದ್ಧಿಪಡಿಸಿರುವ ಕ್ಯೂಆರ್ ಕೋಡ್‌ನ ಮೂಲಕ ಮಾಹಿತಿ ಹಂಚಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಕರೆ ನೀಡಿದರು.

    Click Here

    Click Here

    Call us

    Click Here

    ಅವರು ಶುಕ್ರವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎನ್.ಸಿ.ಓ.ಆರ್.ಡಿ (Narco Co-ordination Center)ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಾದಕ ವಸ್ತುಗಳ ಬಳಕೆಯಿಂದ ಮಾನವ ಆರೋಗ್ಯದ ಮೇಲೆ ದುಷ್ಪರಿಣಾಮಗಳು ಉಂಟಾಗಿ ಆರ್ಥಿಕ ನಷ್ಟದ ಜೊತೆಗೆ ಭವಿಷ್ಯದಲ್ಲಿ ಉತ್ತಮ ಜೀವನವನ್ನು ನಡೆಸಲು ವ್ಯತಿರಿಕ್ತ ಪರಿಣಾಮಗಳು ಉಂಟಾಗುತ್ತವೆ. ಪ್ರತಿಯೊಬ್ಬರೂ ಇವುಗಳಿಂದ ದೂರವಿರಬೇಕು. ಯುವಜನರು ಇಂತಹ ದುಶ್ಚಟಗಳಿಗೆ ಬಲಿಯಾಗಿ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುವ ಸಾಧ್ಯತೆ ಇರುತ್ತದೆ. ಸಮಾಜದಲ್ಲಿ ಇಂತಹವುಗಳಿಗೆ ಕಡಿವಾಣ ಹಾಕಲು ಪ್ರತಿಯೊಬ್ಬರೂ ಮುಂದಾಗಬೇಕು ಎಂದರು.

    ಮಾದಕ ದ್ರವ್ಯ ಸೇವನೆಗೆ ಬಲಿಯಾಗುವುದನ್ನು ತಡೆಯುವ ನಿಟ್ಟಿನಲ್ಲಿ ಅನಾಮಧೇಯ ಮಾಹಿತಿ ನೀಡಲು ಆರಕ್ಷಕರ ಇಲಾಖೆ ವತಿಯಿಂದ ಕ್ಯೂಆರ್ ಕೋಡ್ ಅನ್ನು ಅಭಿವೃದ್ದಿ ಪಡಿಸಲಾಗಿದೆ. ಮಾದಕ ವಸ್ತುಗಳ ಮಾರಾಟ, ಸಾಗಾಟ / ಸೇವನೆ ಕಂಡುಬಂದಲ್ಲಿ ಈ ಕ್ಯೂಆರ್ ಕೋಡ್ ಅನ್ನು ಸ್ಕಾö್ಯನ್ ಮಾಡಿ ಗೌಪ್ಯವಾಗಿ ಮಾಹಿತಿ ಹಂಚಿಕೊಳ್ಳಬಹುದು. ಮಾಹಿತಿ ಹಂಚಿಕೊಂಡ ಬಗ್ಗೆ ಗೌಪ್ಯತೆಯನ್ನು ಕಾಪಾಡಲಾಗುವುದು ಎಂದರು.

    ಔಷಧಿ ಅಂಗಡಿಗಳಲ್ಲಿ ಅಮಲು ಬರಿಸುವಂತಹ ಔಷಧಿಗಳನ್ನು ಸಾರ್ವಜನಿಕರಿಗೆ ಮಾರಾಟ ಮಾಡುವ ಹಾಗಿಲ್ಲ. “ವೈದ್ಯರ ನಿರ್ದೇಶನವಿಲ್ಲದೇ ಔಷಧ ಮಾರಾಟ ನಿಷೇಧ” ಎಂಬ ಸೂಚನಾ ಫಲಕಗಳನ್ನು ಕಡ್ಡಾಯವಾಗಿ ಪ್ರದರ್ಶಿಸಬೇಕು. ಔಷಧಿ ಅಂಗಡಿಗಳ ಸಿಸಿ ಟಿವಿ ನಿರಂತರವಾಗಿ ಚಾಲನೆಯಲ್ಲಿರುವುದರ ಜೊತೆಗೆ ಸಿಸಿಟಿವಿ ಫೂಟೇಜ್‌ಗಳು ಕನಿಷ್ಠ ಮೂರು ತಿಂಗಳ ವರೆಗೆ ಸಂಗ್ರಹಣೆ ಇರುವಂತೆ ನೋಡಿಕೊಳ್ಳಬೇಕು. ಔಷಧ ನಿಯಂತ್ರಕರು ಹಾಗೂ ಪೊಲೀಸ್ ಇಲಾಖೆಯವರು ಈ ಬಗ್ಗೆ ಕ್ರಮವಹಿಸಬೇಕು ಎಂದರು.

    ಶಾಲೆ-ಕಾಲೇಜು ವಸತಿ ನಿಲಯಗಳಲ್ಲಿ ರಕ್ತ ತಪಾಸಣೆ ನಡೆಸಲು ಅಧಿಕಾರಿಗಳು ಕ್ರಮವಹಿಸಬೇಕು. ಶೈಕ್ಷಣಿಕ ಸಂಸ್ಥೆಗಳಲ್ಲಿ ಕಡಿಮೆ ಹಾಜರಾತಿ ಹೊಂದಿದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಅವರಿಗೆ ಮತ್ತು ಅವರ ಪೋಷಕರಿಗೆ ಆಪ್ತ ಸಮಾಲೋಚನೆ ನೀಡಬೇಕು. ಮೆಡಿಕಲ್ ಶಾಪ್‌ಗಳಲ್ಲಿ ಸಂದೇಹಾಸ್ಪದವಾಗಿ ಕೆಮ್ಮಿನ ಔಷಧಿ ಖರೀದಿಸುವ ಬಗ್ಗೆ ನಿಗಾ ವಹಿಸಬೇಕು ಎಂದರು.

    Click here

    Click here

    Click here

    Call us

    Call us

    ಮಾದಕ ದ್ರವ್ಯ ಸೇವನೆ ಮತ್ತು ಮಾರಾಟದಿಂದ ಆಗುವ ಹಾನಿಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು. ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಬೀದಿ ನಾಟಕ, ಸಂಗೀತ, ಕಲೆ ಹಾಗೂ ಇನ್ನಿತರ ಚಟುವಟಿಕೆಗಳನ್ನು ನಡೆಸಿ ಜನರಲ್ಲಿ ಅರಿವು ಮೂಡಿಸಬೇಕು. ಜಿಲ್ಲೆಯ ಗ್ರಾಮ ಪಂಚಾಯಿತಿಗಳು ಗ್ರಾಮಗಳನ್ನು ತಂಬಾಕು ಮುಕ್ತವಾಗಿಸಬೇಕು. ಜಿಲ್ಲೆಯನ್ನು ಮಾದಕ ವ್ಯಸನ ಮುಕ್ತವಾಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

    ಕೃಷಿ, ತೋಟಗಾರಿಕೆ, ಅರಣ್ಯ ಇಲಾಖೆಯ ಸಿಬ್ಬಂದಿಗಳು ಕೃಷಿ ಜಮೀನುಗಳು, ತೋಟಗಳು ಹಾಗೂ ಕಾಡಂಚಿನಲ್ಲಿ ಗಾಂಜಾ ಬೆಳೆಗಳನ್ನು ಬೆಳೆಯುತ್ತಿರುವ ಬಗ್ಗೆ ಪರಿಶೀಲನೆ ನಡೆಸಬೇಕು. ರೈಲ್ವೆ ನಿಲ್ದಾಣಗಳಲ್ಲಿ ಸಾಗಾಟದ ಬಗ್ಗೆ ಎಚ್ಚರವಹಿಸುವುದರ ಜೊತೆಗೆ ಕ್ಯೂಆರ್ ಕೋಡ್ ಬಗ್ಗೆ ರೈಲ್ವೆ ನಿಲ್ದಾಣಗಳಲ್ಲಿ ಪ್ರಚಾರ ಕೈಗೊಳ್ಳಬೇಕು ಎಂದರು.

    ಮಾಹೆ ವಿಶ್ವ ವಿದ್ಯಾಲಯದ ಅಡಿಯಲ್ಲಿ 25 ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳಿವೆ. ಪ್ರತಿಯೊಂದು ಶಿಕ್ಷಣ ಸಂಸ್ಥೆಯಲ್ಲಿ ಮಾದಕ ವಸ್ತುಗಳ ಬಳಕೆ, ಅವುಗಳಿಂದ ಆಗುವ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಹೆಚ್ಚು ಮಾಡಬೇಕು. ಕ್ಯೂ ಆರ್ ಕೋಡ್ ಗಳನ್ನು ಪ್ರತಿಯೊಂದು ಶಾಲಾ-ಕಾಲೇಜುಗಳಲ್ಲಿ ಹಾಗೂ ಹಾಸ್ಟೆಲ್‌ಗಳಲ್ಲಿ ಎದ್ದುಕಾಣುವ ಜಾಗಗಳಲ್ಲಿ ಪ್ರದರ್ಶಿಸಬೇಕು ಎಂದರು.

    ಜಿಲ್ಲೆಯ ಶಾಲಾ ಕಾಲೇಜು, ಬಸ್ ನಿಲ್ದಾಣ, ಸರಕಾರಿ ಕಚೇರಿಗಳು, ಸಭಾಂಗಣಗಳು, ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳು, ಮೆಡಿಕಲ್ ಶಾಪ್‌ಗಳು ಸೇರಿದಂತೆ ಹೆಚ್ಚು ಜನರು ಸೇರುವ ಪ್ರದೇಶದಲ್ಲಿ ಎದ್ದು ಕಾಣುವ ರೀತಿಯಲ್ಲಿ ಕ್ಯೂ ಆರ್ ಕೋಡ್ ಗಳನ್ನು ಪ್ರದರ್ಶಿಸಬೇಕು ಎಂದ ಅವರು, ಕಳೆದ ಸಭೆಯಲ್ಲಿ ಈ ಬಗ್ಗೆ ಸೂಚನೆ ನೀಡಲಾಗಿದ್ದರೂ ಇದರ ಅನುಷ್ಠಾನ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ಈ ಬಗ್ಗೆ ಅಧಿಕಾರಿಗಳು ಕ್ರಮವಹಿಸಬೇಕು ಎಂದರು.

    ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಡಿ.ಹೆಚ್.ಓ ಡಾ. ಬಸವರಾಜ್ ಹುಬ್ಬಳ್ಳಿ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಉಡುಪಿ: ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ವಿವಿಧ ಹುದ್ದೆಗೆ ಅರ್ಜಿ ಆಹ್ವಾನ

    06/11/2026

    ವಿದ್ಯಾರ್ಥಿಗಳಿಗೆ ವಸತಿ ಶಾಲೆ ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ವಿದ್ಯಾಭ್ಯಾಸಕ್ಕೆ ಪೂರಕ ವಾತಾವರಣ ಕಲ್ಪಿಸಿ: ತನ್ವೀರ್ ಸೇಠ್

    05/11/2026

    ಉಡುಪಿ ಎಂಜಿಎಂ ಸಂಧ್ಯಾ ಕಾಲೇಜಿನಲ್ಲಿ ‘ಮೌಲ್ಯ ಚಿಂತನಾ ಶಿಬಿರ’

    04/11/2026
    Leave A Reply Cancel Reply

    9 − 3 =

    Call us

    Click Here

    Call us

    Call us

    Call us
    Highest Viewed Recently
    • 3 ಲಕ್ಷ ರೂ. ಮೊತ್ತದ ರೈತಪೀಠ ಪ್ರಶಸ್ತಿಗೆ ಅರ್ಜಿ ಆಹ್ವಾನ; ಅಧಿಕೃತ ಲೋಗೋ ಅನಾವರಣ
    • ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಕೈ ಜೋಡಿಸಿ: ಜಿಲ್ಲಾಧಿಕಾರಿ
    • ಡಿಸೆಂಬರ್ 12ರಂದು ಕುಂದಾಪುರ ಕೋಣಿಯಲ್ಲಿ ಯಕ್ಷರಾತ್ರಿ ಸೀಸನ್ 12
    • ಡಾ. ಶಿಹಾನ್ ಸುಬ್ರಮಣ್ಯ ಪಿ. ಅವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ
    • ಬೈಂದೂರು ಪ್ರೀತಿ ಮೊಬೈಲ್ಸ್‌ನಲ್ಲಿ ಸ್ಮಾರ್ಟ್‌ ಪೋನ್‌ ಖರೀದಿಸಿ – ಪಡೆಯಿರಿ ಖಚಿತ ಉಡುಗೊರೆ, ಬಂಪರ್‌ ಬಹುಮಾನಗಳು

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.