ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಅಜ್ಜರಕಾಡು ಇಲ್ಲಿ ನಡೆದ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ರೋಶನಿ ಪಿ. ದೇವಾಡಿಗ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.
ಅವರಿಗೆ, ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ಬೋಧಕ-ಬೋಧಕೇತರ ವರ್ಗದವರು ಅಭಿನಂದನೆ ಸಲ್ಲಿಸಿರುತ್ತಾರೆ.












