Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡದ ಅಸ್ಮಿತೆಯ ಅನಾವರಣಕ್ಕೆ ಯುವಶಕ್ತಿಯೇ ಆಶಾಕಿರಣ: ಡಾ. ಎಚ್.ಎಸ್. ಸತ್ಯನಾರಾಯಣ
    ಊರ್ಮನೆ ಸಮಾಚಾರ

    ಕನ್ನಡದ ಅಸ್ಮಿತೆಯ ಅನಾವರಣಕ್ಕೆ ಯುವಶಕ್ತಿಯೇ ಆಶಾಕಿರಣ: ಡಾ. ಎಚ್.ಎಸ್. ಸತ್ಯನಾರಾಯಣ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಇಲ್ಲಿನ ಕಾರ್ಕಳದ  ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನ ಸಪ್ತಸ್ವರ ವೇದಿಕೆಯಲ್ಲಿ ವಿದ್ಯಾರ್ಥಿಗಳಿಗಾಗಿ “ಪ್ರಸ್ತುತ ಕನ್ನಡ ನಾಡು–ನುಡಿಯ ಅಸ್ಮಿತೆಯಲ್ಲಿ ವಿದ್ಯಾರ್ಥಿಗಳ ಪಾತ್ರ” ಎಂಬ ವಿಷಯದ ಕುರಿತು ಸ್ಫೂರ್ತಿದಾಯಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು.

    Click Here

    Click Here

    Call us

    Click Here

    ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಡಾ. ಎಚ್.ಎಸ್. ಸತ್ಯನಾರಾಯಣ ಅವರು ಮಾತನಾಡಿ, ಕನ್ನಡ ಭಾಷೆ ಕೇವಲ ಸಂವಹನದ ಮಾಧ್ಯಮವಲ್ಲ, ಅದು ನಮ್ಮ ಸಂಸ್ಕೃತಿ, ಪರಂಪರೆ, ಇತಿಹಾಸ ಮತ್ತು ಅಸ್ಮಿತೆಯ ಪ್ರತೀಕವಾಗಿದೆ. ಆಧುನಿಕತೆ ಮತ್ತು ಜಾಗತೀಕರಣದ ಪ್ರಭಾವದ ನಡುವೆಯೂ ಕನ್ನಡ ಭಾಷೆಯ ಮೇಲಿನ ಅಭಿಮಾನವನ್ನು ಉಳಿಸಿಕೊಳ್ಳುವುದು ಇಂದಿನ ಯುವಜನತೆಯ ಜವಾಬ್ದಾರಿಯಾಗಿದೆ ಎಂದು ಹೇಳುತ್ತಾ ವಿದ್ಯಾರ್ಥಿಗಳಲ್ಲಿ ಕನ್ನಡ ಭಾಷೆ ಮತ್ತು ನೆಲದ ಬಗೆಗಿನ ಅಭಿಮಾನವನ್ನು ಜಾಗೃತಗೊಳಿಸಿದರು.

    ಕನ್ನಡ ಭಾಷೆ ಸಾವಿರಾರು ವರ್ಷಗಳ ಇತಿಹಾಸ, ಶ್ರೀಮಂತ ಸಾಹಿತ್ಯ ಪರಂಪರೆ ಹಾಗೂ ವೈವಿಧ್ಯಮಯ ಸಂಸ್ಕೃತಿಯನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿರುವ ಹೆಮ್ಮೆಯ ಭಾಷೆಯಾಗಿದೆ.ಇಂದಿನ ಯುಗದಲ್ಲಿ ಇಂಗ್ಲಿಷ್ ಸೇರಿದಂತೆ ಅನೇಕ ಭಾಷೆಗಳನ್ನು ಕಲಿಯುವುದು ಅಗತ್ಯವೇ ಹೊರತು, ಅದಕ್ಕಾಗಿ ಮಾತೃಭಾಷೆಯನ್ನು ಕಡೆಗಣಿಸಬಾರದು. ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ವಿದ್ಯಾರ್ಥಿಗಳು ತಮ್ಮ ಜ್ಞಾನವನ್ನು ಕನ್ನಡದಲ್ಲಿಯೂ ಅಭಿವ್ಯಕ್ತಿಸುವ ಪ್ರಯತ್ನ ಮಾಡಬೇಕು.

    ಡಿಜಿಟಲ್ ಮಾಧ್ಯಮ, ಸಾಮಾಜಿಕ ಜಾಲತಾಣಗಳು ಹಾಗೂ ಆಧುನಿಕ ತಂತ್ರಜ್ಞಾನವನ್ನು ಕನ್ನಡದ ಪ್ರಚಾರ ಮತ್ತು ಪ್ರಸಾರಕ್ಕೆ ಸಮರ್ಥವಾಗಿ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು. ಇಂತಹ ಭಾಷೆಯ ವಾರಸುದಾರರಾದ ನಾವುಗಳು ಕನ್ನಡದ ಉಳಿವು ಮತ್ತು ಬೆಳವಣಿಗೆಯ ಹೊಣೆಗಾರಿಕೆಯನ್ನು ಅರಿತುಕೊಳ್ಳಬೇಕು ಎಂದು ತಿಳಿಸಿದರು. ಕನ್ನಡ ನಾಡು, ನುಡಿ, ನೆಲ ಹಾಗೂ ಸಂಸ್ಕೃತಿಯ ಕುರಿತಾದ ಅನೇಕ ಸಂರಕ್ಷಣೆಯಲ್ಲಿ ಯುವಜನತೆ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಸ್ಫೂರ್ತಿದಾಯಕವಾಗಿ ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಕಾಲೇಜಿನ ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಅವರು ಮಾತನಾಡಿ, ಕನ್ನಡವೆಂದರೆ ಕೇವಲ ಮಾತನಾಡುವ ಭಾಷೆಯಲ್ಲ, ಅದು ನಮ್ಮ ನೆಲದ ಇತಿಹಾಸ, ಜನಜೀವನ, ಆಚಾರ-ವಿಚಾರ, ಕಲೆ, ಸಾಹಿತ್ಯ, ಪರಂಪರೆ ಮತ್ತು ಸ್ವಾಭಿಮಾನದ ಸಂಕೇತ. ಕನ್ನಡದ ನೆಲ, ಭಾಷೆ ಹಾಗೂ ಸಂಸ್ಕೃತಿಯ ಸಂರಕ್ಷಣೆ ಕೇವಲ ಸರ್ಕಾರದ ಅಥವಾ ಸಂಘಟನೆಗಳ ಜವಾಬ್ದಾರಿಯಲ್ಲ. ಪ್ರತಿಯೊಬ್ಬ ಕನ್ನಡಿಗನ ಕರ್ತವ್ಯವೂ ಹೌದು ಎಂದು ತಿಳಿಸಿದರು.

    Click here

    Click here

    Click here

    Call us

    Call us

    ಕನ್ನಡ ಉಳಿದರೆ ಸಂಸ್ಕೃತಿ ಉಳಿಯುತ್ತದೆ, ಸಂಸ್ಕೃತಿ ಉಳಿದರೆ ನಮ್ಮ ಅಸ್ಮಿತೆ ಉಳಿಯುತ್ತದೆ. ಕನ್ನಡದ ಭವಿಷ್ಯ ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ ಎಂಬ ಆಶಯದೊಂದಿಗೆ ಕಾರ್ಯಕ್ರಮವು ಸಾರ್ಥಕತೆಯನ್ನು ಪಡೆದುಕೊಂಡಿತು.

    ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥರಾದ ಶಿವಕುಮಾರ್, ಭೋದಕ ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಕನ್ನಡ ಉಪನ್ಯಾಸಕರಾದ ಲಕ್ಷ್ಮಿಕಾಂತ್ ಸ್ವಾಗತಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ದೀಪಾವಳಿ ಪ್ರಯುಕ್ತ ಆಳ್ವಾಸ್ ಆಯುರ್ವೇದ ಆಸ್ಪತ್ರೆಯಲ್ಲಿ ಅಭ್ಯಂಗ ಸಪ್ತಾಹ ಶಿಬಿರ ಆರಂಭ

    10/11/2026

    ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಪ್ರತಿನಿಧಿಸಿದ ಆಳ್ವಾಸ್ ತಂಡ ಸಮಗ್ರ ಚಾಂಪಿಯನ್ಸ್

    09/11/2026

    ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ

    07/11/2026
    Leave A Reply Cancel Reply

    14 − 12 =

    Call us

    Click Here

    Call us

    Call us

    Call us
    Highest Viewed Recently
    • ದೀಪಾವಳಿ ಪ್ರಯುಕ್ತ ಆಳ್ವಾಸ್ ಆಯುರ್ವೇದ ಆಸ್ಪತ್ರೆಯಲ್ಲಿ ಅಭ್ಯಂಗ ಸಪ್ತಾಹ ಶಿಬಿರ ಆರಂಭ
    • ಕನ್ನಡದ ಅಸ್ಮಿತೆಯ ಅನಾವರಣಕ್ಕೆ ಯುವಶಕ್ತಿಯೇ ಆಶಾಕಿರಣ: ಡಾ. ಎಚ್.ಎಸ್. ಸತ್ಯನಾರಾಯಣ
    • ಗುಡ್ಡಗಾಡು ಓಟದ ಸ್ಪರ್ಧೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಪ್ರತಿನಿಧಿಸಿದ ಆಳ್ವಾಸ್ ತಂಡ ಸಮಗ್ರ ಚಾಂಪಿಯನ್ಸ್
    • ನಾಡೋಜ ಡಾ. ಜಿ. ಶಂಕರ್ ಅವರಿಗೆ ಪಂಚವರ್ಣ ರಾಜ್ಯೋತ್ಸವ ಗೌರವ ಪ್ರದಾನ
    • ರಾ.ಹೆ-66 ನಿರಂತರ ಅಪಘಾತ: ಸಂಸದ ಕೋಟ ಅವರಿಂದ ಬೆಂಗಳೂರಿನ ಆರ್.ಓ ಕಚೇರಿಯಲ್ಲಿ ತುರ್ತು ಸಭೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.