ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ನಡೆದ 17ರ ವಯೋಮಾನದ ಬಾಲಕರ ರಾಜ್ಯಮಟ್ಟದ ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ ಕಾಲೇಜಿನ ಪ್ರೌಢಶಾಲಾ ವಿಭಾಗದ 9ನೇ ತರಗತಿಯ ನಿಹಾನ್ 79KG ವಿಭಾಗದಲ್ಲಿ ದ್ವಿತೀಯ ಸ್ಥಾನವನ್ನು ಪಡೆದಿರುತ್ತಾನೆ.
ಸಾಧಕ ವಿದ್ಯಾರ್ಥಿಗೆ, ತರಬೇತಿಗೊಳಿಸಿದ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರನ್ನು ಪ್ರೋತ್ಸಾಹ ನೀಡಿದ ಎಲ್ಲಾ ಮುಖ್ಯಸ್ಥರನ್ನು ಆಡಳಿತ ಮಂಡಳಿಯವರು ಅಭಿನಂದಿಸಿದ್ದಾರೆ












