Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೈಂಟ್ ಥಾಮಸ್ ಕಪ್–2026 ಅಂತರ ಶಾಲಾ ಥ್ರೋಬಾಲ್ ಪಂದ್ಯಾವಳಿ ಸಂಪನ್ನ
    ಊರ್ಮನೆ ಸಮಾಚಾರ

    ಸೈಂಟ್ ಥಾಮಸ್ ಕಪ್–2026 ಅಂತರ ಶಾಲಾ ಥ್ರೋಬಾಲ್ ಪಂದ್ಯಾವಳಿ ಸಂಪನ್ನ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಬೈಂದೂರು:
    ತಾಲೂಕಿನ ಸೈಂಟ್ ಥಾಮಸ್ ಸೆಂಟ್ರಲ್ ಸ್ಕೂಲ್‌ನ ಇದರ ಆಶ್ರಯದಲ್ಲಿ ಎಐಸಿಎಸ್ (AICS) ಅಂತರ ಶಾಲಾ ಥ್ರೋಬಾಲ್ ಪಂದ್ಯಾವಳಿ “ಸೈಂಟ್ ಥಾಮಸ್ ಕಪ್–2026” ಶಾಲಾ ಆವರಣದಲ್ಲಿ ವಿಜೃಂಭಣೆಯಿಂದ ನಡೆಯಿತು. ಸುಮಾರು 18 ಶಾಲೆಗಳ ಕ್ರೀಡಾಪಟುಗಳು ಭಾಗವಹಿಸಿ ತಮ್ಮ ಕ್ರೀಡಾ ಪ್ರತಿಭೆ, ತಂಡದ ಸಹಕಾರ ಹಾಗೂ ಕ್ರೀಡಾಸ್ಫೂರ್ತಿಯನ್ನು ಪ್ರದರ್ಶಿಸಿದರು.

    Click Here

    Click Here

    Call us

    Click Here

    ಪಂದ್ಯಾವಳಿಯ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಬೈಂದೂರಿನ ಮಾಜಿ ಶಾಸಕರಾದ ಗೋಪಾಲ ಪೂಜಾರಿ ಉಪಸ್ಥಿತರಿದ್ದರು. ಅವರು ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೂರಕವಾಗಿದ್ದು, ಶಿಸ್ತು, ಆತ್ಮವಿಶ್ವಾಸ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ವಿದ್ಯಾರ್ಥಿಗಳು ಸೋಲು-ಗೆಲುವನ್ನು ಸಮಾನವಾಗಿ ಸ್ವೀಕರಿಸಿ ಧೈರ್ಯದಿಂದ ಮುನ್ನಡೆಯಬೇಕು ಎಂದು ಪ್ರೇರಣಾದಾಯಕ ನುಡಿಗಳನ್ನಾಡಿದರು.

    ಗೌರವ ಅತಿಥಿಗಳಾದ ಉಡುಪಿಯ ಶಾರದಾ ರೆಸಿಡೆನ್ಷಿಯಲ್ ಶಾಲೆಯ ಪ್ರಾಂಶುಪಾಲರಾದ ಶ್ರೀ ವಿನ್ಸೆಂಟ್ ಡಿʼಕೋಸ್ಟಾ ಅವರು ಮಾತನಾಡಿ, ಕ್ರೀಡಾಪಟುಗಳು ದೈಹಿಕವಾಗಿ ಸದೃಢರಾಗುವುದರೊಂದಿಗೆ ಮಾನಸಿಕವಾಗಿಯೂ ಶಕ್ತಿಶಾಲಿಗಳಾಗಿರಬೇಕು. ಯಾವುದೇ ಸವಾಲುಗಳಿಗೆ ಹೆದರದೆ ಧೈರ್ಯದಿಂದ ಮುನ್ನುಗ್ಗಬೇಕು ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಆಟ ಮತ್ತು ವಿವಿಧ ಚಟುವಟಿಕೆಗಳ ಮೂಲಕ ಮಕ್ಕಳಿಗೆ ಪಾಠ ಕಲಿಸುವುದರಿಂದ ಅವರಲ್ಲಿ ಆತ್ಮವಿಶ್ವಾಸ ಹಾಗೂ ಜೀವನ ಕೌಶಲಗಳು ವೃದ್ಧಿಯಾಗುತ್ತವೆ ಎಂದರು. ಪಂದ್ಯಾವಳಿಯನ್ನು ಯಶಸ್ವಿಯಾಗಿ ಆಯೋಜಿಸಿದ ದೈಹಿಕ ಶಿಕ್ಷಣ ಶಿಕ್ಷಕರು, ತೀರ್ಪುಗಾರರು ಹಾಗೂ ಸ್ಪರ್ಧಾಳುಗಳನ್ನು ಅಭಿನಂದಿಸಿದರು.

    ಶಾಲೆಯ ಪ್ರಾಂಶುಪಾಲರಾದ ರೆವರೆಂಡ್ ಫಾದರ್ ಫಿಲಿಪ್ ನೆಲ್ಲಿವಿಲ್ಲಾ ಅವರು ಅತಿಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ, ಪರಿಚಯಿಸಿ ಹಿತನುಡಿಗಳನ್ನಾಡಿದರು. ಸ್ಪರ್ಧಾಳುಗಳನ್ನು ಹುರಿದುಂಬಿಸಿ, ಕ್ರೀಡೆಯಲ್ಲಿ ಉತ್ಸಾಹದಿಂದ ಪಾಲ್ಗೊಳ್ಳುವಂತೆ ಪ್ರೇರೇಪಿಸಿದರು. ಉಪಪ್ರಾಂಶುಪಾಲರಾದ ಸಿಸ್ಟರ್ ಕಾರ್ಮೆಲ್ ಅವರು ಉಪಸ್ಥಿತರಿದ್ದರು.

    ಬಲೂನ್‌ಗಳನ್ನು ಹಾರಿಸುವ ಮೂಲಕ ಪಂದ್ಯಾವಳಿಗೆ ಚಾಲನೆ ನೀಡಲಾಯಿತು. ಉದ್ಘಾಟನಾ ಸಂದರ್ಭದಲ್ಲಿ ಅತಿಥಿಗಳು ಆಟದಲ್ಲಿ ಪಾಲ್ಗೊಂಡು ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡಿದರು.

    Click here

    Click here

    Click here

    Call us

    Call us

    ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಡುಪಿ ಜಿಲ್ಲಾ ಪಂಚಾಯತ್‌ನ ಮಾಜಿ ಅಧ್ಯಕ್ಷರಾದ ರಾಜು ಪೂಜಾರಿ ಹಾಗೂ ಗೌರವ ಅತಿಥಿಗಳಾಗಿ ಉಡುಪಿಯ ಎಸ್‌ಎಂಎಸ್ ಶಾಲೆಯ ಪ್ರಾಂಶುಪಾಲರಾದ ಅಭಿಲಾಷಾ ಎಸ್. ಮತ್ತು ತ್ರಾಸಿಯ ಡಾನ್ ಬಾಸ್ಕೋ ಶಾಲೆಯ ಪ್ರಾಂಶುಪಾಲರು ಹಾಗೂ ಕರಾವಳಿ ಸಹೋದಯದ ಅಧ್ಯಕ್ಷರಾದ ರೆವರೆಂಡ್ ಫಾದರ್ ಮ್ಯಾಕ್ಸಿಮ್ ಡಿ’ಸೋಜಾ ಅವರು ಉಪಸ್ಥಿತರಿದ್ದರು.

    ರಾಜು ಪೂಜಾರಿ ಅವರು ಮಾತನಾಡಿ, ಕ್ರೀಡೆಯು ವಿದ್ಯಾರ್ಥಿಗಳಲ್ಲಿ ಏಕತೆ, ಶಿಸ್ತು, ಪರಿಶ್ರಮ ಹಾಗೂ ನಾಯಕತ್ವ ಗುಣಗಳನ್ನು ಬೆಳೆಸುತ್ತದೆ. ಕ್ರೀಡೆಯಲ್ಲಿ ಸಾಧನೆ ಮಾಡಲು ನಿರಂತರ ಅಭ್ಯಾಸ ಮತ್ತು ಆತ್ಮವಿಶ್ವಾಸ ಅಗತ್ಯ ಎಂದು ಹೇಳಿದರು.

    ಅಭಿಲಾಷಾ ಎಸ್. ಅವರು ಮಾತನಾಡಿ, ಕ್ರೀಡೆಯು ಗೆಲುವಿಗಾಗಿ ಮಾತ್ರವಲ್ಲದೆ ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗಿದೆ. ವಿದ್ಯಾರ್ಥಿಗಳು ಕ್ರೀಡಾಸ್ಫೂರ್ತಿ, ಪರಸ್ಪರ ಗೌರವ ಹಾಗೂ ತಂಡದ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ತಿಳಿಸಿದರು.

    ರೆವರೆಂಡ್ ಫಾದರ್ ಮ್ಯಾಕ್ಸಿಮ್ ಡಿ’ಸೋಜಾ ಅವರು ಉಪಸ್ಥಿತರಿದ್ದು ಸ್ಪರ್ಧಾಳುಗಳಿ ಗೆ ಚಾಂಪಿಯನ್ ಟ್ರೋಫಿ ಹಾಗೂ ಬಹುಮಾನಗಳನ್ನು ವಿತರಿಸಿ, ಸ್ಪರ್ಧಾಳುಗಳನ್ನು ಅಭಿನಂದಿಸಿದರು.

    ಪಂದ್ಯಾವಳಿಯ ಯಶಸ್ವಿ ಆಯೋಜನೆಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಮಾಸ್ಟರ್ ಕಿಶೋರ್ ಕುಮಾರ್ ಮತ್ತು ಸೌಮ್ಯ ಅವರು ಪ್ರಮುಖ ಪಾತ್ರ ವಹಿಸಿ, ಕಾರ್ಯಕ್ರಮವನ್ನು ಅತ್ಯಂತ ಅಚ್ಚುಕಟ್ಟಾಗಿ ಹಾಗೂ ವ್ಯವಸ್ಥಿತವಾಗಿ ನಡೆಸಿಕೊಟ್ಟರು. ಶಿಕ್ಷಕರು, ಶಾಲಾ ಸಹಾಯಕರು, ಸಿಬ್ಬಂದಿ ವರ್ಗ, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದು ಪಂದ್ಯಾವಳಿಗೆ ಮೆರುಗು ನೀಡಿದರು.

    ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಫೂರ್ತಿ, ಸ್ನೇಹಭಾವ, ಶಿಸ್ತು ಮತ್ತು ಆತ್ಮವಿಶ್ವಾಸವನ್ನು ಬೆಳೆಸುವ ಉದ್ದೇಶ ಹೊಂದಿದ್ದ ಈ ಅಂತರ ಶಾಲಾ ಥ್ರೋಬಾಲ್ ಪಂದ್ಯಾವಳಿ ಯಶಸ್ವಿಯಾಗಿ ಸಂಪನ್ನಗೊಂಡಿತು.

    Byndoor
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಹೋಲಿ ಕ್ರಾಸ್ ಶಾಲೆಯಲ್ಲಿ ದೀಪಾವಳಿ ಸಂಭ್ರಮ

    10/11/2026

    ಸಾಸ್ತಾನದಲ್ಲಿ ಸ್ಕೂಟರ್‌ ಡಿಕ್ಕಿಯಾಗಿ ಪಾದಚಾರಿ ಸಾವು

    10/11/2026

    ಕೋಟ ಪಂಚವರ್ಣ ಸಂಘಟನೆಯಿಂದ ಸಾಮೂಹಿಕ ಗೋ ಪೂಜೆ

    10/11/2026
    Leave A Reply Cancel Reply

    eighteen + three =

    Call us

    Click Here

    Call us

    Call us

    Call us
    Highest Viewed Recently
    • ಸೈಂಟ್ ಥಾಮಸ್ ಕಪ್–2026 ಅಂತರ ಶಾಲಾ ಥ್ರೋಬಾಲ್ ಪಂದ್ಯಾವಳಿ ಸಂಪನ್ನ
    • ಹೋಲಿ ಕ್ರಾಸ್ ಶಾಲೆಯಲ್ಲಿ ದೀಪಾವಳಿ ಸಂಭ್ರಮ
    • ಸಾಸ್ತಾನದಲ್ಲಿ ಸ್ಕೂಟರ್‌ ಡಿಕ್ಕಿಯಾಗಿ ಪಾದಚಾರಿ ಸಾವು
    • ಕೋಟ ಪಂಚವರ್ಣ ಸಂಘಟನೆಯಿಂದ ಸಾಮೂಹಿಕ ಗೋ ಪೂಜೆ
    • ವೇಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಕೋಟ ವಿವೇಕ ಪ.ಪೂ ಕಾಲೇಜಿನ ವಿದ್ಯಾರ್ಥಿ ನಿಹಾನ್‌ಗೆ ದ್ವಿತೀಯ ಸ್ಥಾನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.