ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ, ಕುಂದಾಪುರ ವಲಯ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್, ಕುಂದಾಪುರ ಇವರ ಸಹಭಾಗಿತ್ವದಲ್ಲಿ ನಡೆದ ಕುಂದಾಪುರ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಾಧನೆಗೈದು ತಾಲೂಕು ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಕಾಲೇಜಿನ ವಿದ್ಯಾರ್ಥಿಗಳಾದ ಸಾತ್ವಿಕ್ ಭಟ್ ಮತ್ತು ಪ್ರಸ್ತುತ್ ಶೆಟ್ಟಿ ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸುಹಾ ಶೇಖ್ ಗಝಲ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಆರ್ಷಿಯಾ ಸಯ್ಯದ್ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ.
ಅದೇ ರೀತಿ ಕವ್ವಾಲಿ (Qawwali) ಯಲ್ಲಿ ವಿದ್ಯಾರ್ಥಿಗಳಾದ ಅಮ್ರಾ ಫಾತಿಮಾ, ಆಯಿಷಾ ಅಕ್ಸಾ, ಆಯಿಷಾ ಸಲಿಹಾ, ಆಮಿನಾ ಝಾರಾ, ಮಾಝ್ ಉಮ್ಮರ್, ಮೊಹಮ್ಮದ್ ಸಾಹಿಲ್ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ, ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ವಿದ್ಯಾರ್ಥಿಗಳ ಪ್ರತಿಭೆ, ಪರಿಶ್ರಮ ಮತ್ತು ಸಾಧನೆ ಕಾಲೇಜಿನ ಹೆಮ್ಮೆಯನ್ನು ಹೆಚ್ಚಿಸಿದ್ದು, ಮುಂದಿನ ಹಂತದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಗಳಿಸಲಿ ಎಂದು ಶುಭ ಹಾರೈಸಿದ್ದಾರೆ.

















