Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂದಾಪುರ: ಮಹಿಳಾ ಮೋರ್ಚಾ ವತಿಯಿಂದ ಗೋ ಪೂಜಾ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕುಂದಾಪುರ: ಮಹಿಳಾ ಮೋರ್ಚಾ ವತಿಯಿಂದ ಗೋ ಪೂಜಾ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ, ನ.10:
    ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾ ಕುಂದಾಪುರ ಮಂಡಲ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಿಳಯ್ಯನ್ ಕೆ. ಗೋವಿಂದ ಶೇರಿಗಾರ್ ಮನೆ, ಒಂಬತ್ತು ದಂಡಿಗೆ ಪಡುಕೇರಿ, ಕುಂದಾಪುರದಲ್ಲಿ ಗೋ ಪೂಜಾ ಕಾರ್ಯಕ್ರಮವು ಇಂದು ಭಕ್ತಿ-ಶ್ರದ್ಧೆಯಿಂದ ನಡೆಯಿತು.

    Click Here

    Click Here

    Call us

    Click Here

    ಉಡುಪಿ-ಚಿಕ್ಕಮಗಳೂರು ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಕಾರ್ಯಕ್ರಮದಲ್ಲಿ ಮಾತನಾಡಿ, ಗೋವು ಕೇವಲ ಪ್ರಾಣಿಯಲ್ಲ ಅದು ನಮ್ಮ ಸಂಸ್ಕೃತಿ, ನಮ್ಮ ಶ್ರದ್ಧೆ, ನಮ್ಮ ಜೀವನದ ಅವಿಭಾಜ್ಯ ಅಂಗ. ಗೋವನ್ನು ಪೂಜಿಸುವುದೆಂದರೆ ಪ್ರಕೃತಿಯನ್ನು ಪೂಜಿಸಿದಂತೆ. ದೀಪಾವಳಿಯ ಈ ಪವಿತ್ರ ಸಂದರ್ಭದಲ್ಲಿ ಗೋಮಾತೆಯ ಆರಾಧನೆ ಮಾಡುವುದರಿಂದ ಸಮಾಜದಲ್ಲಿ ಸುಖ, ಶಾಂತಿ, ಸಮೃದ್ಧಿ ನೆಲೆಸುತ್ತದೆ. ಗೋ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಮಹಿಳಾ ಮೋರ್ಚಾ ಇಂತಹ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಶ್ಲಾಘನೀಯ ಎಂದರು.

    ಕುಂದಾಪುರ ಮಂಡಲ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಗೋಪಾಡಿ ಅವರು ಮಾತನಾಡಿ, ಮಹಿಳಾ ಮೋರ್ಚಾ ಸಂಘಟನೆಯೊಂದಿಗೆ ಸಂಸ್ಕೃತಿ ಉಳಿಸುವ ಕೆಲಸವನ್ನೂ ಮಾಡುತ್ತಿದೆ. ಗೋ ಪೂಜೆಯಂತಹ ಕಾರ್ಯಕ್ರಮಗಳು ಮುಂದಿನ ಪೀಳಿಗೆಗೆ ನಮ್ಮ ಪರಂಪರೆಯನ್ನು ಪರಿಚಯಿಸುತ್ತವೆ ಎಂದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸೌರಭಿ ಪೈ ಅವರು ವಹಿಸಿ ಸರ್ವರನ್ನು ಸ್ವಾಗತಿಸಿದರು. ಇದೇ ವೇಳೆ ಕುಂದಾಪುರ ಮಂಡಲ ಪ್ರಧಾನ ಕಾರ್ಯದರ್ಶಿ ಸುಧೀರ್ ಕೆ.ಎಸ್, ಜಿಲ್ಲಾ ಕಾರ್ಯದರ್ಶಿಗಳಾದ ಸದಾನಂದ ಬಳ್ಕೂರು, ಅನಿತಾ ಶ್ರೀಧರ್, ಕುಂದಾಪುರ ಪುರಸಭಾ ಮಾಜಿ ಅಧ್ಯಕ್ಷ ಮೋಹನ್ ದಾಸ್ ಶೆಣೈ, ಮಾಜಿ ಉಪಾಧ್ಯಕ್ಷ ರಾಜೇಶ್ ಕಾವೇರಿ ಶಕ್ತಿ ಕೇಂದ್ರದ ಅಧ್ಯಕ್ಷ ಗಣೇಶ್ ಶೇರಿಗಾರ್, ಬೂತ್ ಅಧ್ಯಕ್ಷರಾದ ಜಯರಾಜ್, ಹಿರಿಯರಾದ ಅನ್ನಪೂರ್ಣೇಶ್ವರಿ ಶೇರಿಗಾರ್, ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಮಹಿಳಾ ಮೋರ್ಚ ಪದಾಧಿಕಾರಿಗಳು, ಪುರಸಭೆಯ ಮಾಜಿ ಸದಸ್ಯರು ಪಕ್ಷದ ಪ್ರಮುಖರು ಹಾಗೂ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.

    ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ವಿದ್ಯಾ ಸಾಲಿಯಾನ್ ಕಾರ್ಯಕ್ರಮವನ್ನು ನಿರೂಪಿಸಿದರು. ಶ್ವೇತಾ ಶ್ರೀನಿಧಿ ಉಪಾಧ್ಯಾಯ ಅವರು ಧನ್ಯವಾದ ಸಮರ್ಪಿಸಿದರು.

    Click here

    Click here

    Click here

    Call us

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ನವೀನಚಂದ್ರ ಮರವಂತೆ ಸ್ಮಾರಕ ಚಾರಿಟೇಬಲ್‌ ಟ್ರಸ್ಟ್: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

    10/11/2026

    ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ – ತಾಲೂಕು ಮಟ್ಟಕ್ಕೆ ಆಯ್ಕೆ

    10/11/2026

    ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಂದ ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಗೆ ಭೇಟಿ

    10/11/2026
    Leave A Reply Cancel Reply

    4 × five =

    Call us

    Click Here

    Call us

    Call us

    Call us
    Highest Viewed Recently
    • ಕುಂದಾಪುರ: ಮಹಿಳಾ ಮೋರ್ಚಾ ವತಿಯಿಂದ ಗೋ ಪೂಜಾ ಕಾರ್ಯಕ್ರಮ
    • ಅರಿತು ಆಚರಿಸುವುದೇ ಬೆಳಕಿನ ಹಬ್ಬದ ನಿಜವಾದ ಅರ್ಥ: ಮುನಿರಾಜ್ ರೆಂಜಾಳ
    • ನವೀನಚಂದ್ರ ಮರವಂತೆ ಸ್ಮಾರಕ ಚಾರಿಟೇಬಲ್‌ ಟ್ರಸ್ಟ್: ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ
    • ಪ್ರತಿಭಾ ಕಾರಂಜಿಯಲ್ಲಿ ಶ್ರೀ ವೆಂಕಟರಮಣ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ – ತಾಲೂಕು ಮಟ್ಟಕ್ಕೆ ಆಯ್ಕೆ
    • ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳಿಂದ ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಗೆ ಭೇಟಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.