Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲೆಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯ: ಜನತಾ ಶನಯ ವಾರ್ಷಿಕ ಸಂಭ್ರಮದಲ್ಲಿ ಹಾಸ್ಯನಟ ಟೆನ್ನಿಸ್ ಕೃಷ್ಣ ಅಭಿಮತ
    ಊರ್ಮನೆ ಸಮಾಚಾರ

    ಕಲೆಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯ: ಜನತಾ ಶನಯ ವಾರ್ಷಿಕ ಸಂಭ್ರಮದಲ್ಲಿ ಹಾಸ್ಯನಟ ಟೆನ್ನಿಸ್ ಕೃಷ್ಣ ಅಭಿಮತ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಪ್ರತಿಯೊಬ್ಬರಿಗೂ ಜೀವನದಲ್ಲಿ ಹಲವಾರು ಅವಕಾಶಗಳು ಸಿಗುತ್ತದೆ, ಸಿಕ್ಕಿದ ಅವಕಾಶ ಸದುಪಯೋಗ ಮಾಡಿಕೊಂಡರೆ ಯಶಸ್ಸು ಗಳಿಸಲು ಸಾಧ್ಯ. ನನ್ನ ಜೀವನದಲ್ಲಿ ನಾನು ಹಂತ ಹಂತವಾಗಿ ಮೇಲೆ ಬಂದವನು ಇಂದು ನನಗೆ ಕಲೆ ಜೀವನ ನಡೆಸಲು ಅವಕಾಶ ಮಾಡಿಕೊಟ್ಟಿದೆ ಎಂದು ಕನ್ನಡ ಚಿತ್ರರಂಗದ ಹಾಸ್ಯನಟ ಟೆನ್ನಿಸ್ ಕೃಷ್ಣ ಅಭಿಪ್ರಾಯಿಸಿದರು.

    Click Here

    Click Here

    Call us

    Click Here

     ಹೆಮ್ಮಾಡಿ ಜನತಾ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜನತಾ ಶನಯ ವಾರ್ಷಿಕ ಸಂಭ್ರಮದ ವಿಶೇಷ ಅತಿಥಿಯಾಗಿ ಮಾತನಾಡಿದ ಅವರು ಚಿತ್ರ ರಂಗದ ಏಳು ಬೀಳು, ಆಧುನಿಕ ಚಿತ್ರರಂಗದ ಅವಕಾಶ ಲಭ್ಯತೆಗಳ ಕುರಿತು ಮಾತನಾಡಿ ಹಾಸ್ಯ ಚಟಾಕಿಗಳನ್ನು ಹಾರಿಸಿದರು.

    ಮಾಜಿ ಶಾಸಕ ಕೆ. ಗೋಪಾಲ ಪೂಜಾರಿ ಅವರು ಮಾತನಾಡಿ, ಇಂದು ಜನತಾ ಹಲವು ಸಾಧನೆಗಳ ಮೂಲಕ ಶೈಕ್ಷಣಿಕ ಕ್ರಾಂತಿ ಮಾಡಿದೆ, ವಿದ್ಯಾರ್ಥಿಗಳು ಇಲ್ಲಿ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದರು.

    ಬೀನಾ ವೈದ್ಯ ಎಜುಕೇಷನಲ್ ಟ್ರಸ್ಟ್ ಮುರ್ಡೇಶ್ವರದ ವ್ಯವಸ್ಥಾಪನ ನಿರ್ದೇಶಕರಾದ ಡಾ. ಪುಷ್ಪಲತಾ ಎಂ ವೈದ್ಯ ಮಾತನಾಡಿ ಶಿಸ್ತು, ಸಂಯಮದ ಕಲಿಕೆ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಹಲವಾರು ವಿಚಾರವನ್ನು ಕಲಿಸುತ್ತದೆ ಎಂದು ಶುಭ ಹಾರೈಸುತ್ತದೆ.

    ಕುಂದಾಪುರ ಹೋಲಿ ರೋಜರಿ ಚರ್ಚ್ ನ ಪ್ರಧಾನ ಧರ್ಮಗುರು ಫೌಲ್ ರೇಗೋ ಮಾತನಾಡಿ, ಜನತಾ ಸಂಸ್ಥೆ ವಿದ್ಯಾರ್ಥಿಗಳಿಗೆ ಹಲವು ಅವಕಾಶ ನೀಡಿ ಜೀವನ ಮಾರ್ಗದರ್ಶನ ಕಲಿಸುತ್ತಿದೆ ಎಲ್ಲರಿಗೂ ಒಳಿತಾಗಲಿ ಎಂದು ಶುಭ ಹಾರೈಸಿದರು.

    Click here

    Click here

    Click here

    Call us

    Call us

    ಚಾರ್ಟರ್ ಅಕೌಂಟೆಡ್ ಸಿಎ ಪದ್ಮನಾಭ ಕಾಂಚನ್ ಮಾತನಾಡಿ ವಿದ್ಯಾರ್ಥಿಗಳು ಕಲಿಕೆಯಲ್ಲಿ ಸ್ಪಷ್ಟ ಗುರಿ, ಪರಿಶ್ರಮವನ್ನು ಅಳವಡಿಸಿಕೊಂಡರೆ ಜೀವನದಲ್ಲಿ ಉನ್ನತವಾದುದನ್ನು ಸಾಧಿಸಬಹುದು ಎಂದರು.

    ಪ್ರಗತಿ ಮಹಿಳಾ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಹೆಮ್ಮಾಡಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಕುಲಾಲ್ ಹೆಮ್ಮಾಡಿ ವಿದ್ಯಾರ್ಥಿಗಳ ಶೈಕ್ಷಣಿಕ, ಕ್ರೀಡಾ ಸಾಧನೆಗಳಿಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

    ಕಾಲೇಜಿನ ಪ್ರಾಂಶುಪಾಲರಾದ ಗಣೇಶ್ ಮೊಗವೀರ ರವರು ವಾರ್ಷಿಕ ವರದಿ ಮಂಡಿಸಿ ವಿದ್ಯಾರ್ಥಿಗಳ ಮುಂದಿನ ಶೈಕ್ಷಣಿಕ ಸಾಧನೆಗಳ ಬಗ್ಗೆ ಸ್ಫೂರ್ತಿಯ ಮಾತುಗಳನ್ನಾಡಿದರು. ಕಾರ್ಯಕ್ರಮದಲ್ಲಿ ಶೈಕ್ಷಣಿಕ ಮತ್ತು ಕ್ರೀಡಾ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಿ ಗೌರವಿಸಲಾಯಿತು.

    ಕಾರ್ಯಕ್ರಮದಲ್ಲಿ ಜನತಾ ಪ್ರೌಢ ಶಾಲೆ ಹೆಮ್ಮಾಡಿಯ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ ನ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ಉಪಸ್ಥಿತರಿದ್ದರು. ಉಪಪ್ರಾಂಶುಪಾಲರಾದ ರಮೇಶ್ ಪೂಜಾರಿ ಸ್ವಾಗತಿಸಿ, ಉಪನ್ಯಾಸಕರಾದ ಅಲ್ತಾರು ನಾಗರಾಜ್ ವಂದಿಸಿ, ಉದಯ ನಾಯ್ಕ ನಿರೂಪಿಸಿದರು. ನಂತರ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕುಂದಾಪುರ: ಡಾ. ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ

    11/11/2026

    ವಕ್ವಾಡಿ ಗುರುಕುಲದಲ್ಲಿ ‘ಗೋಕುಲಂ ಸದ್ಮನʼ ನೂತನ ಗೋಶಾಲೆ ಉದ್ಘಾಟನೆ

    11/11/2026

    ಕರ್ನಾಟಕ ಸಂಘ ಕತಾರ್‌ನ 71ನೇ ಕರ್ನಾಟಕ ರಾಜ್ಯೋತ್ಸವ – ʼಕರುನಾಡ ವೈಭವ-2026ʼ ವೈಭವೋಪೇತ ಆಚರಣೆ

    11/11/2026
    Leave A Reply Cancel Reply

    20 − 13 =

    Call us

    Click Here

    Call us

    Call us

    Call us
    Highest Viewed Recently
    • ಕಲೆಯಿಂದ ಜೀವನ ಕಟ್ಟಿಕೊಳ್ಳಲು ಸಾಧ್ಯ: ಜನತಾ ಶನಯ ವಾರ್ಷಿಕ ಸಂಭ್ರಮದಲ್ಲಿ ಹಾಸ್ಯನಟ ಟೆನ್ನಿಸ್ ಕೃಷ್ಣ ಅಭಿಮತ
    • ಕುಂದಾಪುರ: ಡಾ. ಬಿ.ಬಿ ಹೆಗ್ಡೆ ಕಾಲೇಜಿನಲ್ಲಿ ದೀಪಾವಳಿ ಸಂಭ್ರಮ
    • ವಕ್ವಾಡಿ ಗುರುಕುಲದಲ್ಲಿ ‘ಗೋಕುಲಂ ಸದ್ಮನʼ ನೂತನ ಗೋಶಾಲೆ ಉದ್ಘಾಟನೆ
    • ನ.13ರಂದು ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ
    • ಕರ್ನಾಟಕ ಸಂಘ ಕತಾರ್‌ನ 71ನೇ ಕರ್ನಾಟಕ ರಾಜ್ಯೋತ್ಸವ – ʼಕರುನಾಡ ವೈಭವ-2026ʼ ವೈಭವೋಪೇತ ಆಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.