ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಹಿಂದೂ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು, ಸಂಘಟನಾತ್ಮಕ ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಗುರುತಿಸಿಕೊಂಡಿದ್ದ ಪ್ರದೀಪ್ ಸಂಗಮ್ (44) ಅವರು ದೀರ್ಘಕಾಲದ ಅನಾರೋಗ್ಯದಿಂದ ಬುಧವಾರ ನಿಧನರಾಗಿದ್ದಾರೆ.
ಕಳೆದ ಒಂದು ವರ್ಷದಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಬುಧವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾರೆ. ಸಂಘಟನೆಯ ವಿವಿಧ ಚಟುವಟಿಕೆಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದ ಅವರು, ಹಗಲು-ರಾತ್ರಿ ಎನ್ನದೆ ಸಂಘಟನೆಯ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುತ್ತಿದ್ದರು.
ಮೃತರು ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ. ಪ್ರದೀಪ್ ಸಂಗಮ್ ಅವರ ನಿಧನದಿಂದ ಕುಂದಾಪುರ ಭಾಗದ ಹಿಂದೂ ಸಂಘಟನೆಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ. ಅವರ ಸಂಘಟನಾತ್ಮಕ ಬದ್ಧತೆ, ಕಾರ್ಯತತ್ಪರತೆ ಹಾಗೂ ಸಮಾಜಮುಖಿ ಸೇವೆಯನ್ನು ಸಹಪಾಠಿಗಳು ಮತ್ತು ಸಂಘಟನೆಯ ಕಾರ್ಯಕರ್ತರು ಸ್ಮರಿಸಿದ್ದಾರೆ.












