ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸ್ನಾತಕೋತ್ತರ ಅಧ್ಯಯನ ವಿಭಾಗದ ವತಿಯಿಂದ ಎಂಬಿಎ ಪ್ರಥಮ ಮತ್ತು ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಉಪ್ಪುಂದದ ಸುಮುಖ ಸರ್ಜಿಕಲ್ ಹಾಗೂ ಯಳಜಿತ್ನ ಕಾಲ್ತೋಡದಲ್ಲಿರುವ ಅಡ್ಕ್ರೀಟ್ ಕನ್ಸ್ಟ್ರಕ್ಷನ್ ಟೆಕ್ನಾಲಜಿ ಸಂಸ್ಥೆಗಳಿಗೆ ಕೈಗಾರಿಕಾ ಭೇಟಿ ಆಯೋಜಿಸಲಾಯಿತು.
ಈ ಭೇಟಿಯ ಉದ್ದೇಶ ವಿದ್ಯಾರ್ಥಿಗಳಿಗೆ ಕೈಗಾರಿಕೆಗಳ ಕಾರ್ಯವೈಖರಿ, ಉತ್ಪಾದನಾ ಪ್ರಕ್ರಿಯೆ, ನಿರ್ವಹಣಾ ವಿಧಾನಗಳು ಹಾಗೂ ಉದ್ಯಮಗಳ ಪ್ರಾಯೋಗಿಕ ಕಾರ್ಯಚಟುವಟಿಕೆಗಳ ಕುರಿತು ಅರಿವು ಮೂಡಿಸುವುದಾಗಿತ್ತು. ಇಂತಹ ಕೈಗಾರಿಕಾ ಭೇಟಿಗಳು ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ಕಲಿತ ಸೈದ್ಧಾಂತಿಕ ಜ್ಞಾನವನ್ನು ಪ್ರಾಯೋಗಿಕವಾಗಿ ಅರ್ಥಮಾಡಿಕೊಳ್ಳಲು ಮತ್ತು ಕೈಗಾರಿಕಾ ಕ್ಷೇತ್ರದ ಅನುಭವವನ್ನು ಪಡೆಯಲು ಸಹಕಾರಿಯಾಗುತ್ತವೆ.
ಈ ಸಂದರ್ಭದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥರಾದ ಡಾ. ಸುಚಿತ್ರಾ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಪ್ರಥಮ ಮತ್ತು ದ್ವಿತೀಯ ವರ್ಷದ ಎಂಬಿಎ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.












