Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾದ ಅರ್ಜಿಗಳನ್ನು ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾದ ಅರ್ಜಿಗಳನ್ನು ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಜಾಸೇವಾ ಆಂದೋಲನದಲ್ಲಿ ಸಾರ್ವಜನಿಕರು ನೀಡಿರುವ ತಮ್ಮ ಸಮಸ್ಯೆಗಳ ಅಹವಾಲುಗಳನ್ನು ಅಧಿಕಾರಿಗಳು ನಿಗಧಿತ ಕಾಲಾವಧಿಯಲ್ಲಿ ಸ್ಪಂದಿಸಿ ಅರ್ಜಿಗಳನ್ನು ನಿಯಮಾನುಸಾರ ವಿಲೇವಾರಿ ಮಾಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು.

    Click Here

    Click Here

    Call us

    Click Here

    ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ತಮ್ಮ ಕಚೇರಿ ಸಭಾಂಗಣದಲ್ಲಿ ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾದ ಅರ್ಜಿಗಳ ವಿಲೇವಾರಿಯ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರ ಅಹವಾಲುಗಳನ್ನು ಅವರುಗಳಿದ್ದಲ್ಲಿಯೇ ಹೋಗಿ ಬಗೆಹರಿಸುವ ಉದ್ದೇಶದಿಂದ ಸರಕಾರ ಪ್ರಜಾಸೇವಾ ಆಂದೋಲನವನ್ನು ನಡೆಸುತ್ತಿದೆ. ಈ ಆಂದೋಲನದಲ್ಲಿ ಜನರು ನೀಡಿದ ಅಹವಾಲುಗಳನ್ನು ಕೂಲಂಕುಷವಾಗಿ ಪರಿಶೀಲಿಸಿ ನಿಯಮಾನುಸಾರ ಸಮಸ್ಯೆಗಳನ್ನು ಕಡ್ಡಾಯವಾಗಿ ಅನಗತ್ಯ ವಿಳಂಬ ಮಾಡದೇ ಪ್ರಾಮಾಣಿಕವಾಗಿ ಬಗೆಹರಿಸಿ ಹಿಂಬರಹವನ್ನು ನೀಡಬೇಕು ಎಂದರು.

    ಸಭೆಯಲ್ಲಿ ಸಾರ್ವಜನಿಕರ ಅಹವಾಲುಗಳು ಬಂದಾಗ ವಿಷಯಾಧಾರಿತವಾಗಿ ಯಾವ ಇಲಾಖೆ ಬರುತ್ತದೆ ಎಂದು ಮನಗಂಡು ಅವುಗಳನ್ನು ವಿಲೇವಾರಿಗೆ ಮುಂದಾಗಬೇಕು. ಒಂದೊಮ್ಮೆ ಅವು ತಮ್ಮ ವ್ಯಾಪ್ತಿಯ ಇಲಾಖೆಗೆ ಬರುವುದಿಲ್ಲ ಅಥವಾ ಇತರೆ ತಾಲೂಕಿಗೆ ಬರುತ್ತದೆ ಎಂದು ಕಂಡುಬಂದಲ್ಲಿ ತಕ್ಷಣವೇ ಸಂಬಂಧಪಟ್ಟ ತಾಲೂಕು ಅಥವಾ ಇಲಾಖೆಗೆ ಹಂಚಿಕೆಮಾಡಬೇಕು. ಅದಕ್ಕೆ ಹೆಚ್ಚು ಸಮಯ ತೆಗೆದುಕೊಳ್ಳದೇ ಸಭೆಯಲ್ಲಿಯೇ ತಿಳಿಸುವುದು ಸೂಕ್ತ ಎಂದರು.

    ಸಾರ್ವಜನಿಕ ಸಮಸ್ಯೆಗಳನ್ನು ಕೆಳ ಹಂತದಲ್ಲಿಯೇ ಬಗೆಹರಿಸುವಂತದ್ದು ಇದ್ದಲ್ಲಿ ಕೂಡಲೇ ಸ್ಪಂದಿಸಿ, ಪರಿಹಾರ ಕಂಡುಕೊಂಡು ಅವರಿಗೆ ಹಿಂಬರಹವನ್ನು ಆದ್ಯತೆಯ ಮೇಲೆ ನೀಡಬೇಕು. ಐ.ಪಿ.ಜಿ.ಆರ್.ಎಸ್ ಪೋರ್ಟಲ್‌ನಲ್ಲಿ ಅದನ್ನು ನಮೂದು ಮಾಡಬೇಕು. ಒಂದೊಮ್ಮೆ ನಿಯಮಾನುಸಾರ ಕೆಲವು ಬಗೆಹರಿಸದೇ ಇರುವಂತಹವುಗಳಿಗೆ ಸಕಾರಾತ್ಮಕವಾಗಿ ಉತ್ತರವನ್ನು ನೀಡಬೇಕು, ಅಸಂಬದ್ಧ ಉತ್ತರ ನೀಡುವುದು ಸರಿಯಲ್ಲ ಎಂದರು.

    ಜನಸಾಮಾನ್ಯರು ಒಂದೇ ಅರ್ಜಿಯಲ್ಲಿ ತಮ್ಮ ಅನೇಕ ಸಮಸ್ಯೆಗಳನ್ನು ನಮೂದು ಮಾಡಿ, ನೀಡಿರುವುದು ಕಂಡು ಬರುತ್ತಿದೆ. ಆದಷ್ಟು ಅರ್ಜಿಗಳನ್ನು ಪಡೆಯುವಾಗ ಪ್ರತಿಯೊಂದು ಸಮಸ್ಯೆಗಳಿಗೂ ಪ್ರತ್ಯೇಕ ಅರ್ಜಿಯನ್ನು ಪಡೆದು ಸಂಬಂಧಪಟ್ಟ ಇಲಾಖೆಗಳಿಗೆ ಅವುಗಳನ್ನು ನೀಡಿ, ಬಗೆಹರಿಸಲು ಕ್ರಮಕೈಗೊಳ್ಳಬೇಕು. ಈ ಬಗ್ಗೆ ಕಂದಾಯ ಇಲಾಖೆಯ ಅಧಿಕಾರಿಗಳು ಎಚ್ಚರವಹಿಸಬೇಕು ಎಂದರು.

    Click here

    Click here

    Click here

    Call us

    Call us

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಎಎಸ್‌ಪಿ ಸುಧಾಕರ್ ನಾಯಕ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಸಹಾಯಕ ಕಮೀಷನರ್ ಮಹೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರ್‌ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟ

    12/11/2026

    ನ.13ರಂದು ಬೆಂಗಳೂರು-ಮಂಗಳೂರು-ಮಡಗಾಂವ್ ವಂದೇ ಭಾರತ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

    11/11/2026

    ಮಾದಕ ವ್ಯಸನ ಮುಕ್ತ ಸಮಾಜಕ್ಕಾಗಿ ಪ್ರತಿಯೊಬ್ಬರೂ ಕೈ ಜೋಡಿಸಿ: ಜಿಲ್ಲಾಧಿಕಾರಿ

    07/11/2026
    Leave A Reply Cancel Reply

    6 + thirteen =

    Call us

    Click Here

    Call us

    Call us

    Call us
    Highest Viewed Recently
    • ಡಿಜಿಟಲ್ ಸಾಕ್ಷಾರತೆ ಮತ್ತು ಸೈಬರ್ ಸುರಕ್ಷತೆ ಕುರಿತು ಅತಿಥಿ ಉಪನ್ಯಾಸ
    • ಪ್ರಜಾಸೇವಾ ಆಂದೋಲನದಲ್ಲಿ ಸ್ವೀಕೃತವಾದ ಅರ್ಜಿಗಳನ್ನು ನಿಯಮಾನುಸಾರ ತ್ವರಿತವಾಗಿ ವಿಲೇವಾರಿ ಮಾಡಿ: ಜಿಲ್ಲಾಧಿಕಾರಿ
    • ಐರೋಡಿ: ಆಡಳಿತಾಧಿಕಾರಿ ಚಲುವರಾಜು ಪದೋನ್ನತಿ, ಬಿಳ್ಕೋಡುಗೆ, ಸನ್ಮಾನ
    • ಜನತಾ ಸಮೂಹ ಸಂಸ್ಥೆಯಲ್ಲಿ ಸಂಭ್ರಮದ ಹಬ್ಬ – 2026 ಆಚರಣೆ
    • ವಿಶೇಷ ಚೇತನ ವಿದ್ಯಾರ್ಥಿಗಳ ಅಥ್ಲೆಟಿಕ್ಸ್ ಕ್ರೀಡಾಕೂಟ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.