ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ದಿ. ದಿನಕರ ಶೆಟ್ಟಿ ನಿಡೂಟಿ ಹಿತೈಷಿ ಮತ್ತು ಅಭಿಮಾನಿ ಬಳಗ, ಸ್ಪೂರ್ತಿ ಯುವ ವೇದಿಕೆ ಹೊಸೂರು, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಉಡುಪಿ, ಸಾರ್ವಜನಿಕ ಗಣೇಶೋತ್ಸವ ಸಮಿತಿ ಜಡ್ಕಲ್ ಕಾನ್ಕಿ, ಲಯನ್ಸ್ ಕ್ಲಬ್ ಹಂಗಳೂರು ಹಾಗೂ ವಿವಿಧ ಸಂಘಟನೆಗಳ ಸಹಕಾರದಲ್ಲಿ ಹೊಸೂರು ಹರ್ಲಾಡಿಕೆರೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಸಭಾಭವನದಲ್ಲಿ ಇತ್ತೀಚಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ನಡೆಯಿತು.
ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಉಡುಪಿ ಅಭಯಹಸ್ತ ಚಾರಿಟೇಬಲ್ ಟ್ರಸ್ಟ್ ರಿ. ಅಧ್ಯಕ್ಷರಾದ ಸತೀಶ್ ಸಾಲ್ಯಾನ್ ಮಣಿಪಾಲ್, ಹಂಗಳೂರು ಲಯನ್ಸ್ ಕ್ಲಬ್ ಅಧ್ಯಕ್ಷರಾದ ಹಂಸರಾಜ್ ಶೆಟ್ಟಿ, ಕುಂದಾಪುರ ಭಾರತೀಯ ರೆಡ್ ಕ್ರಾಸ್ ಸೊಸೈಟಿ ರಿ. ಕಾರ್ಯದರ್ಶಿ ಸತ್ಯನಾರಾಯಣ ಪುರಾಣಿಕ್, ರಕ್ತದಾನಿ ವಿಜಯ್ ಪೂಜಾರಿ ಕುಂದಾಪುರ, ಹರ್ಲಾಡಿಕೆರೆ ಮಹಾಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷರಾದ ನಾಗರಾಜ್ ಶೆಟ್ಟಿ, ಬಾಸ್ಕರ್ ಶೆಟ್ಟಿ, ಜಯರಾಮ್ ಶೆಟ್ಟಿ, ನಾರಾಯಣ ಶೆಟ್ಟಿ, ಶಾಲಿಕಾ ಶೆಟ್ಟಿ, ಸುಂದರ ಶೆಟ್ಟಿ, ಪ್ರವೀಣ್ ಶೆಟ್ಟಿ ಮೇಲ್ ಹೊಸೂರು ಹಾಗೂ ಪ್ರಶಾಂತ್ ತಲ್ಲೂರು, ಸುಧಾಕರ್ ಶೆಟ್ಟಿ, ಶರತ್ ಶೆಟ್ಟಿ ಹಾಗೂ ಇತರರು ಉಪಸ್ಥಿತ್ತರಿದ್ದರು.












