ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಬೈಕಿನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಯುವ ಇಂಜಿನಿಯರ್ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪ ನಡೆದಿದೆ. ಚುಂಗಿಗುಡ್ಡೆ ನಿವಾಸಿ ನಾರಾಯಣ ಹೆಬ್ಬಾರ್ ಅವರ ಏಕೈಕ ಪುತ್ರ ಅಕ್ಷಯ್ ಎನ್. ಹೆಬ್ಬಾರ್ (26) ಮೃತ ದುರ್ದೈವಿ. ಟ್ರಕ್ಗೆ ಬೈಕ್ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ.
ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಅಕ್ಷಯ್, ಇಂಜಿನಿಯರಿಂಗ್ ವಿದ್ಯಾಭ್ಯಾಸ ಪೂರ್ಣಗೊಳಿಸಿ ಬೆಂಗಳೂರಿನ ಖಾಸಗಿ ಕಂಪನಿಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ವರ್ಕ್ ಫ್ರಮ್ ಹೋಮ್ನಲ್ಲಿದ್ದ ಅಕ್ಷಯ್, ಭಾನುವಾರ ಕಚೇರಿಗೆ ತೆರಳುವ ಸಲುವಾಗಿ ತಮ್ಮ ಬೈಕ್ನಲ್ಲಿ ಮನೆಯಿಂದ ಬೆಂಗಳೂರಿಗೆ ಹೊರಟಿದ್ದರು.
ಬೆಳಗ್ಗೆ ಸುಮಾರು 4 ಗಂಟೆಗೆ ಚುಂಗಿಗುಡ್ಡೆಯ ಮನೆಯಿಂದ ತೆರಳಿದ್ದರು. ಚನ್ನರಾಯಪಟ್ಟಣ ಸಮೀಪ ಹೆದ್ದಾರಿಯಲ್ಲಿ ತೆರಳುತ್ತಿದ್ದ ಟ್ರಕ್ಗೆ ಬೈಕ್ನ ಹ್ಯಾಂಡಲ್ನ ತಾಕಿದ್ದರಿಂದ, ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ತಲೆಭಾಗಕ್ಕೆ ಗಂಭೀರ ಗಾಯಗಳಾಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎನ್ನಲಾಗಿದೆ.












