ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೊಲ್ಲೂರು: ಇಲ್ಲಿನ ಪ್ರಸಿದ್ಧ ಯಾತ್ರಾಸ್ಥಳ ಶ್ರೀ ಮೂಕಾಂಬಿಕಾ ದೇಗುಲಕ್ಕೆ ಕೇಂದ್ರ ಸಚಿವ, ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಭಾನುವಾರ ಭೇಟಿ ನೀಡಿದರು.
ಈ ವೇಳೆ ಅವರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕುಟುಂಬಿಕರೊಂದಿಗೆ ಚಂಡಿಕಾಹೋಮದಲ್ಲಿ ಪಾಲ್ಗೊಂಡರು. ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಸೊಸೆ ಮೊಮ್ಮಗ ಜೊತೆಗಿದ್ದರು. ವಿಧಾನ ಪರಿಷತ್ ಸದಸ್ಯ ಭೋಜೇಗೌಡ ಅವರು ದೇವಸ್ಥಾನ ಭೇಟಿಯ ವೇಳೆ ಜೊತೆಗಿದ್ದರು.












