ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ತೆಕ್ಕಟ್ಟೆಯ ವಿಶ್ವ ವಿನಾಯಕ ಆಂಗ್ಲ ಮಾದ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯನ್ನು ಅತ್ಯಂತ ಸಡಗರ, ಸಂಭ್ರಮ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಶಿಕ್ಷಕರು ವಿವಿಧ ಮನರಂಜನಾ ಆಟಗಳು, ನೃತ್ಯ, ಹಾಡು, ಹಾಸ್ಯಭರಿತ ಸನ್ನಿವೇಶಗಳು ಹಾಗೂ ಮನರಂಜನಾತ್ಮಕ ಸ್ಪರ್ಧೆಗಳನ್ನು ನಡೆಸಿಕೊಟ್ಟರು. ಶಿಕ್ಷಕರೇ ಹಾಡಿ, ಕುಣಿತು ಮಕ್ಕಳನ್ನು ರಂಜಿಸಿದಾಗ ವಿದ್ಯಾರ್ಥಿಗಳ ಸಂತೋಷಕ್ಕೆ ಪಾರವೇ ಇರಲಿಲ್ಲ. ಸದಾ ಪಾಠ ಪ್ರವಚನಗಳಲ್ಲಿ ತೊಡಗಿರುವ ಶಿಕ್ಷಕರು ಈ ದಿನ ಮಕ್ಕಳೊಂದಿಗೆ ಬೆರೆತು ನಕ್ಕು ನಲಿದು ಮಕ್ಕಳಿಗೆ ಅವಿಸ್ಮರಣೀಯ ಕ್ಷಣಗಳನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ಮಂಡಳಿಯವರು, ಶಾಲಾ ಪ್ರಾಂಶುಪಾಲರು, ಶಿಕ್ಷಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಯಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಲಾಯಿತು.












