ಕುಂದಾಪುರ: ಯುವಕಾರ್ಯ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವಕೇಂದ್ರ ಉಡುಪಿ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ರೋಟರಿ ಕ್ಲಬ್ ಕುಂದಾಪುರ, ಕೆ.ಎಸ್.ಎಸ್. ಪ್ರೌಢಶಾಲೆ ಹಕ್ಲಾಡಿ ಹಾಗೂ ಸ್ಪಂದನ ಯುವಕ ಮಂಡಲ ಗುಜ್ಜಾಡಿ ಇವರ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಸಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಕಾರ್ಯಕ್ರಮ ಬುಧವಾರ ಹಕ್ಲಾಡಿಯ ಕೆ.ಎಸ್.ಎಸ್. ಪ್ರೌಢಶಾಲೆಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಮಂಗೇಶ ಶೆಣೈ ಉದ್ಘಾಟಿಸಿದರು. ಕಿಶೋರ ಕುಮಾರ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕುಂದಾಫುರ ರೋಟರಿ ಕ್ಲಬ್‌ನ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ, ಕಾರ್ಯದರ್ಶಿ ಸಂತೋಷ ಕೋಣಿ, ಉಡುಪಿ ನೆಹರು ಯುವಕೇಂದ್ರದ ಜಿಲ್ಲಾ ಸಲಹೆಗಾರ ನರಸಿಂಹ ಗಾಣಿಗ, ಗುಜ್ಜಾಡಿ ಸ್ಪಂದನ ಯುವಕ ಮಂಡಲದ ಅಧ್ಯಕ್ಷ ರಾಘವೇಂದ್ರ ಮೊದಲಾದವರು ಉಪಸ್ಥಿತರಿದ್ದರು. ವಸುಧಾ ಎಸ್.ಎಸ್. ಸ್ವಾಗತಿಸಿದರು. ಸುಜಾತಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಯೋಗೇಶ ಹೆಬ್ಬಾರ್ ವಂದಿಸಿದರು.