ಕುಂದಾಪ್ರ ಡಾಟ್ ಕಾಂ ಸುದ್ದಿ
ಕುಂದಾಪುರ: ಸಿದ್ದಾಪುರದ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆದ 14 ಮತ್ತು 17 ವರ್ಷ ವಯೋಮಾನದ ಬಾಲಕ ಹಾಗೂ ಬಾಲಕಿಯರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಗಂಗೊಳ್ಳಿಯ ಎಸ್.ವಿ. ಆಂಗ್ಲ ಮಾಧ್ಯಮ ಶಾಲೆಯ 17 ವರ್ಷ ವಯೋಮಾನದ ಬಾಲಕರ ತಂಡವು ಪ್ರಥಮ ಸ್ಥಾನ ಗಳಿಸುವ ಮೂಲಕ ಉಡುಪಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
ಪಂದ್ಯಾಟದಲ್ಲಿ ಶಾಲೆಯ ವಿದ್ಯಾರ್ಥಿಗಳಾದ ನಿಕೇಶ್ ಖಾರ್ವಿ ಅವರು ಅತ್ಯುತ್ತಮ ಸವಾಂಗೀಣ ಆಟಗಾರ ಪ್ರಶಸ್ತಿಯನ್ನು ಹಾಗೂ ನಮನ್ ಕುಮಾರ ಅವರು ಅತ್ಯುತ್ತಮ ಆಕ್ರಮಣಕಾರಿ ಆಟಗಾರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿ, ಶುಭ ಹಾರೈಸಿದ್ದಾರೆ.












