ಕುಂದಾಪ್ರ ಡಾಟ್ ಕಾಂ ಸುದ್ದಿ.
ಉಡುಪಿ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗದಲ್ಲಿ ಪ್ರಸಕ್ತ ಶೈಕ್ಷಣಿಕ ಸಾಲಿನ ಯುಜಿ ಲ್ಯಾಟರಲ್ ಎಂಟ್ರಿ ಕೋಟಾದಡಿ ಅಂತಿಮ ಸುತ್ತಿನ ಪ್ರವೇಶಾತಿ ಪ್ರಕ್ರಿಯೆಯ ನಂತರವೂ ಭರ್ತಿಯಾಗದೇ ಉಳಿದಿರುವ ವಿವಿಧ ಸ್ನಾತಕ ಪದವಿ ಕಾರ್ಯಕ್ರಮಗಳ ಪ್ರವರ್ಗವಾರು ಸೀಟುಗಳನ್ನು ನವೆಂಬರ್ 24ರಂದು ಮುಕ್ತ ಕೌನ್ಸೆಲಿಂಗ್ ಆಯ್ಕೆ ಪ್ರಕ್ರಿಯೆ ಮೂಲಕ ಭರ್ತಿ ಮಾಡಲಾಗುತ್ತದೆ.
ಈ ಮುಕ್ತ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಪ್ರವೇಶಾತಿ ಬಯಸುವ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆಯನ್ನು ವಿಶ್ವವಿದ್ಯಾಲಯದ ಜಾಲತಾಣ www.uahs.edu.in ನಲ್ಲಿ ಡೌನ್ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸೂಕ್ತ ದಾಖಲೆಗಳ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ, ಖುದ್ದಾಗಿ ಕುಲಸಚಿವರ ಕಾರ್ಯಾಲಯ, ಶರಾವತಿ ಆಡಳಿತ ಭವನ, 2ನೇ ಮಹಡಿ, ಇರುವಕ್ಕಿ-577412 ಶಿವಮೊಗ್ಗ ಜಿಲ್ಲೆ ಇಲ್ಲಿಗೆ ನವೆಂಬರ್ 24 ರ ಬೆಳಗ್ಗೆ 11 ಗಂಟೆಯೊಳಗಾಗಿ ಸಲ್ಲಿಸಬಹುದಾಗಿದೆ. ನಿಗದಿತ ಸಮಯ ಮೀರಿದ ಅಭ್ಯರ್ಥಿಯ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.
ಲಭ್ಯವಿರುವ ಸೀಟುಗಳಿಗೆ ಮುಕ್ತ ಕೌನ್ಸೆಲಿಂಗ್ ಆಯ್ಕೆ ಪ್ರಕ್ರಿಯೆಗಳನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ, ಇರುವಕ್ಕಿ ಮುಖ್ಯ ಆವರಣದಲ್ಲಿ ನಡೆಸಲಾಗುತ್ತದೆ. ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಸ್ನಾತಕ ಪದವಿಗಳಿಗೆ ನಡೆಸಿದ ಯುಜಿ ಲ್ಯಾಟರಲ್ ಎಂಟ್ರಿ-2026 ಕೋಟಾದ ಪ್ರವೇಶ ಪರೀಕ್ಷೆಯನ್ನು ಬರೆದು ರ್ಯಾಂಕ್ ಪಡೆದ ಅಭ್ಯರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ.
ಹೆಚ್ಚಿನ ಮಾಹಿತಿ ವಿಶ್ವವಿದ್ಯಾಲಯದ ವೆಬ್ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.

















