ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಪ್ರತಿಷ್ಠಾನ ಕೋಟ, ಕೋಟತಟ್ಟು ಗ್ರಾಮ ಪಂಚಾಯತ್ ಶ್ರೀ ವೇಣುಗೋಪಾಲ ಕೃಷ್ಣ ಎಜುಕೇಶನಲ್ ಸೊಸೈಟಿ ಮೂಡುಕೇರಿ ಬಾರ್ಕೂರು, ಗೀತಾನಂದ ಫೌಂಢೇಶನ್ ಮಣೂರು ಪಡುಕರೆ, ಉಸಿರು ಕೋಟ, ಶ್ರೀ ಚಂದು ಪೂಜಾರಿ ದತ್ತಿನಿಧಿ ಸಾಸ್ತಾನ, ಅರಿವು ಕೇಂದ್ರ ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ ಕೋಟತಟ್ಟು ಇವರ ಆಸರೆಯಲ್ಲಿ ನಡೆಯುವ 6ನೇ ವರ್ಷದ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷೆಯಾಗಿ ವಿವೇಕ ಬಾಲಕಿಯರ ಫ್ರೌಢಶಾಲೆ ಕೋಟದ ಐಶ್ವರ್ಯ ಜೆ ನಾರಿ ಆಯ್ಕೆಯಾಗಿದ್ದಾರೆ.
ಬರಹಗಾರ್ತಿಯಾಗಿ ಗುರುತಿಸಿಕೊಂಡು ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ಹಲವಾರು ಪ್ರಬಂಧ ಸ್ಪರ್ದೆಯಲ್ಲಿ ಭಾಗವಹಿಸಿ ಬಹುಮಾನ ಪಡೆದಿರುವ ಅವರು ಜನಾರ್ಧನ ಹಾಗೂ ಸುಜಾತ ಅವರ ಪುತ್ರಿಯಾಗಿರುತ್ತಾರೆ.
ಬಹುಮುಖ ಪ್ರತಿಭೆಯಾಗಿರುವ ಇವರು ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯೆಕ್ಷೆಯಾಗಿ ಆಯ್ಕೆಯಾಗಿರುತ್ತಾರೆ ಎಂದು ಪ್ರತಿಷ್ಠಾನದ ಗೌರವ ಅಧ್ಯಕ್ಷರಾದ ಆನಂದ ಸಿ ಕುಂದರ್, ಕಾರ್ಯದರ್ಶಿ ನರೇಂದ್ರಕುಮಾರ್ ಕೋಟ, ಪಿಡಿಓ ರವೀಂದ್ರ ರಾವ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












