Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಪೋಷಕರು, ಸರ್ಕಾರದ ಸಹಭಾಗಿತ್ವ ಅಗತ್ಯ: ಡಾ. ಸುಧಾರಾಣಿ
    alvas nudisiri

    ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಪೋಷಕರು, ಸರ್ಕಾರದ ಸಹಭಾಗಿತ್ವ ಅಗತ್ಯ: ಡಾ. ಸುಧಾರಾಣಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಮೂಡುಬಿದಿರೆ:
    ಕನ್ನಡ ಭಾಷೆಯ ಉಳಿವಿನ ಬಗ್ಗೆ ಮಾತನಾಡುವುದರ ಜೊತೆಗೆ ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೂ ಸಮಾಜ ಕಾಳಜಿ ವಹಿಸಬೇಕು. ಆಂಗ್ಲ ಮಾಧ್ಯಮದ ಮೇಲಿನ ಹೆಚ್ಚುತ್ತಿರುವ ಒಲವಿನಿಂದ ಕನ್ನಡ ಮಾಧ್ಯಮ ಶಾಲೆಗಳು ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದ್ದು, ಅವುಗಳ ಉಳಿವಿಗೆ ಪೋಷಕರು, ಸರ್ಕಾರ ಹಾಗೂ ಶಿಕ್ಷಣ ಸಂಸ್ಥೆಗಳ ಸಹಭಾಗಿತ್ವ ಅಗತ್ಯ ಎಂದು ಆಳ್ವಾಸ್ ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಸುಧಾರಾಣಿ ಹೇಳಿದರು.

    Click Here

    Click Here

    Call us

    Click Here

    ಅವರು ಆಳ್ವಾಸ್ ಕನ್ನಡ ಮಾಧ್ಯಮ ಶಾಲೆಯಲ್ಲಿ ಮಂಗಳವಾರ ನಡೆದ ‘ಕನ್ನಡ  ನುಡಿ ಹಬ್ಬ ಸಂಭ್ರಮ–2026’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಕನ್ನಡ ಭಾಷೆ ಕೇವಲ ಸಂವಹನದ ಸಾಧನವಲ್ಲ. ಅದು ನಾಡಿನ ಇತಿಹಾಸ, ಸಂಸ್ಕೃತಿ ಮತ್ತು ಪರಂಪರೆಯ ಪ್ರತಿಬಿಂಬ. ಆಧುನಿಕ ಜಗತ್ತಿನಲ್ಲಿ ಇತರ ಭಾಷೆಗಳನ್ನು ಕಲಿಯುವುದು ಅಗತ್ಯವಾದರೂ ಮಾತೃಭಾಷೆಯನ್ನು ಮರೆಯಬಾರದು. ವಿದ್ಯಾರ್ಥಿಗಳು ಕನ್ನಡ ಸಾಹಿತ್ಯ ಓದುವ, ಕನ್ನಡದಲ್ಲಿ ಮಾತನಾಡುವ ಹಾಗೂ ಬರೆಯುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಕನ್ನಡದ ಮೇಲಿನ ಅಭಿಮಾನ ಘೋಷಣೆಗಳಿಗೆ ಸೀಮಿತವಾಗದೆ ದೈನಂದಿನ ಬದುಕಿನಲ್ಲೂ ವ್ಯಕ್ತವಾಗಬೇಕು ಎಂದರು.

    ಆಳ್ವಾಸ್ ಕನ್ನಡ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಶ್ರೀನಿಧಿ ಎಳಚಿತ್ತಾಯ ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ರಾಜ್ಯೋತ್ಸವದ ಆಚರಣೆಯ ಆಶಯವನ್ನು ವಿದ್ಯಾರ್ಥಿಗಳು ಅರ್ಥಮಾಡಿಕೊಳ್ಳಬೇಕು. ಒಂದು ದಿನ ಕನ್ನಡದ ಬಾವುಟ, ಶಾಲು ಧರಿಸಿ ಸಂಭ್ರಮಿಸುವುದರಿಂದ ಭಾಷೆಯ ಬೆಳವಣಿಗೆ ಸಾಧ್ಯವಿಲ್ಲ. ದೈನಂದಿನ ಮಾತುಕತೆ, ಬರವಣಿಗೆ, ವ್ಯವಹಾರ ಹಾಗೂ ಶಿಕ್ಷಣದಲ್ಲಿ ಕನ್ನಡಕ್ಕೆ ಆದ್ಯತೆ ನೀಡುವ ಮೂಲಕ ಭಾಷಾಭಿಮಾನವನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.

    ಅಧ್ಯಕ್ಷತೆ ವಹಿಸಿದ್ದ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಪ್ರಶಾಂತ್ ಮಾತನಾಡಿ, ಭಾಷೆಯ ಬೆಳವಣಿಗೆ ಅದರ ನಿರಂತರ ಬಳಕೆಯಲ್ಲಿದೆ. ವಿದ್ಯಾರ್ಥಿಗಳಲ್ಲಿ ಕನ್ನಡ ಸಾಹಿತ್ಯ ಓದುವ ಹವ್ಯಾಸ ಹಾಗೂ ಕನ್ನಡದಲ್ಲಿ ತಮ್ಮ ಆಲೋಚನೆಗಳನ್ನು ವ್ಯಕ್ತಪಡಿಸುವ ಆತ್ಮವಿಶ್ವಾಸ ಬೆಳೆಸಬೇಕು. ಮಾತೃಭಾಷೆಯ ಜ್ಞಾನ ಇತರ ಭಾಷೆಗಳ ಕಲಿಕೆಗೆ ಅಡ್ಡಿಯಾಗದೆ, ಆಲೋಚನಾ ಸಾಮರ್ಥ್ಯ ಮತ್ತು ಅಭಿವ್ಯಕ್ತಿಗೆ ಬಲ ನೀಡುತ್ತದೆ ಎಂದರು.

    ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ನಡೆಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಶ್ರೀನಿಧಿ ಸ್ವಾಗತಿಸಿ, ಶಂಕರ್ ಮತ್ತು ಸುಶ್ಮಿತಾ ನಿರೂಪಿಸಿ, ಶ್ರೇಯಸ್‌ ವಂದಿಸಿದರು.

    Click here

    Click here

    Click here

    Call us

    Call us

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ವೈವಿಧ್ಯಮಯ ಕಲಾಪ್ರಕಾರಗಳ ಅನಾವರಣ, ಸಂಪ್ರದಾಯದ ವೈಭವದೊಂದಿಗೆ ಆಳ್ವಾಸ್ ದೀಪಾವಳಿ ಸಂಭ್ರಮ

    18/11/2026

    ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ: ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

    17/11/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನಲ್ಲಿ ಯಕ್ಷಗಾನ ಕಲಾವಿದರ ಕುರಿತ ಸರಣಿ ಉಪನ್ಯಾಸ ಮಾಲಿಕೆ ಉದ್ಘಾಟನೆ

    17/11/2026
    Leave A Reply Cancel Reply

    19 − 14 =

    Call us

    Click Here

    Call us

    Call us

    Call us
    Highest Viewed Recently
    • ಕನ್ನಡ ಮಾಧ್ಯಮ ಶಾಲೆಗಳ ಉಳಿವಿಗೆ ಪೋಷಕರು, ಸರ್ಕಾರದ ಸಹಭಾಗಿತ್ವ ಅಗತ್ಯ: ಡಾ. ಸುಧಾರಾಣಿ
    • ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯೆಕ್ಷೆಯಾಗಿ ಐಶ್ವರ್ಯ ಜೆ ನಾರಿ ಆಯ್ಕೆ
    • ಗುಜ್ಜಾಡಿ ಶಾಲೆಯಲ್ಲಿ ಆಯೋಜಿಸಲಾಗಿರುವ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಪೂರ್ವಭಾವಿ ಸಭೆ
    • ಕೃಷಿ, ತೋಟಗಾರಿಕೆ ವಿ.ವಿ: ಸ್ನಾತಕ ಪದವಿ ಸೀಟುಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ
    • ರೋಟರಿ ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಸ್ಪರ್ಧೆ: ಬೈಂದೂರು ರೋಟರಿ ಸತತ ನಾಲ್ಕನೇ ಬಾರಿ ಚಾಂಪಿಯನ್‌

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.