ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ವಿದ್ಯಾರ್ಥಿಗಳಲ್ಲಿ ಹೆಚ್ಚಿನ ಕೌಶಲ್ಯಾಭಿವೃದ್ಧಿ ಇಮ್ಮಡಿಗೊಳಿಸಲು ಪ್ರತಿಭಾ ಕಾರಂಜಿ ವೇದಿಕೆ ಕಲ್ಪಿಸಲಿದೆ. ಈ ದಿಸೆಯಲ್ಲಿ ವಿದ್ಯಾರ್ಥಿಗಳು ಹೆಚ್ಚು ಭಾಗಿಯಾಗಬೇಕು ಎಂದು ಶಿಕ್ಷಣ ತಜ್ಞ ಗಣೇಶ್ ಜಿ ಹೇಳಿದರು.
ಅವರು ಬುಧವಾರ ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇಲ್ಲಿ ಕರ್ನಾಟಕ ಸರ್ಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ, ಬ್ರಹ್ಮಾವರ ವಲಯದ ಸಹಯೋಗದೊಂದಿಗೆ ಚೇತನಾ ಪ್ರೌಢಶಾಲೆ, ಹಂಗಾರಕಟ್ಟೆ ಇವರ ಸಹಭಾಗಿತ್ವದಲ್ಲಿ ಹಂಗಾರಕಟ್ಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ 2026-27 ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರತಿಭಾ ಕಾರಂಜಿಯಂತಹ ಕಾರ್ಯಕ್ರಮಗಳು ಮಕ್ಕಳಮನೋವಿಕಾಸ ಬಲಗೊಳ್ಳಲು ಸಹಕಾರಿ ಎಂದರಲ್ಲದೆ ಒಂದು ಶಿಕ್ಷಣ ಸಂಸ್ಥೆ ಸಮರ್ಪಕವಾಗಿ ನಡೆಯಬೇಕಾದರೆ ಅಲ್ಲಿನ ಆಡಳಿತ ವ್ಯವಸ್ಥೆ ಅಷ್ಟು ಬಹುಮುಖ್ಯ ಪಾತ್ರ ವಹಿಸಲಿದೆ ಈ ನಿಟ್ಟಿನಲ್ಲಿ ಚೇತನಾ ಪ್ರೌಢಶಾಲೆ ಸಾಮಾಜಿಕ ,ಸಾಂಸ್ಕೃತಿಕ ,ಶೈಕ್ಷಣಿಕವಾಗಿ ಮುಂಚೂಣಿಗೆ ನಿಂತಿದೆ ಎಂದರು.
ಕಾರ್ಯಕ್ರಮವನ್ನು ಫಾರ್ಚುನ ಅಕಾಡೆಮಿಯ ಮುಖ್ಯಸ್ಥ ತಾರಾನಾಥ ಶೆಟ್ಟಿ ಉದ್ಘಾಟಿಸಿ ಶುಭ ಹಾರೈಸಿದರು. ಸಭಾಧ್ಯಕ್ಷತೆಯನ್ನು ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷ ಭರತ್ ಕುಮಾರ್ ಶೆಟ್ಟಿ ವಹಿಸಿದ್ದರು.
ಈ ಸಂದರ್ಭದಲ್ಲಿ ತೀರ್ಪುಗಾರರಿಗೆ ಹಾಗೂ ಕಾರ್ಯಕ್ರಮಕ್ಕೆ ಸಹಕರಾರ ನೀಡಿದ ಹಂಗಾರಕಟ್ಟೆ ರೋಟರಿ ಕ್ಲಬ್ನ ಅಧ್ಯಕ್ಷೆ ಕುಸುಮಾ ಮನೋಜ್, ಫಾರ್ಚುನ್ ಸಂಸ್ಥೆಯ ಮುಖ್ಯಸ್ಥ ತಾರಾನಾಥ ಶೆಟ್ಟಿ, ಖಾದ್ಯ ಮಾರಾಟಗಾರರ ಸಂಘದ ಉಪಾಧ್ಯಕ್ಷ ಸುದೇವ ಶೆಟ್ಟಿ ಇವರುಗಳನ್ನು ವೇದಿಕೆಯಲ್ಲಿ ಗೌರವ ಸಮರ್ಪಿಸಲಾಯಿತು.
ಮುಖ್ಯ ಅಭ್ಯಾಗತರಾಗಿ ಉಡುಪಿ ಜಿಲ್ಲಾ ಬೇಕರಿ ಮತ್ತು ಖಾದ್ಯ ತಿನಿಸುಗಳ ತಯಾರಕರ ಹಾಗೂ ಮಾರಾಟಗಾರರ ಸಂಘ ಉಪಾಧ್ಯಕ್ಷ ಸುದೇವ ಶೆಟ್ಟಿ,ತಾಲೂಕು ಪ್ರಾಥಮಿಕ ಶಾಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀಕಾಂತ್ ಸಾವಂತ್, ಶೈಕ್ಷಣಿಕ ಸಂಪನ್ಮೂಲ ವ್ಯಕ್ತಿ ಆಶಾಕಿರಣ, ಪ್ರತಿಭಾಕಾರಂಜಿ ನೋಡೆಲ್ ಅಧಿಕಾರಿ ಪ್ರವೀಳಾ ಶೆಟ್ಟಿ, ಬ್ರಹ್ಮಾವರ ತಾಲೂಕು ಶಿಕ್ಷಣ ಸಂಯೋಜಕಿ ಅನ್ನಪೂರ್ಣ, ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಕುಸುಮಾ ಮನೋಜ್ ಉಪಸ್ಥಿತರಿದ್ದರು.
ಹಂಗಾರಕಟ್ಟೆ ಕ್ಲಸ್ಟರ್ ಸಿಆರ್ ಪಿ. ಮಾಲಿನಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಶಾಲಾ ಮುಖ್ಯ ಶಿಕ್ಷಕಿ ಕಲ್ಪನಾ ಶೆಟ್ಟಿ ಸ್ವಾಗತಿಸಿದರು. ಕಾರ್ಯಕ್ರಮವನ್ನು ಶಾಲಾ ಶಿಕ್ಷಕ ಫಕೀರಪ್ಪ ನಿರೂಪಿಸಿದರು. ಹಿರಿಯ ಶಿಕ್ಷಕ ಚಂದ್ರ ವಂದಿಸಿದರು.

















