Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಲ್ಯಾಣಪುರ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    ಊರ್ಮನೆ ಸಮಾಚಾರ

    ಕಲ್ಯಾಣಪುರ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕೋಟ:
    ಮಿಲಾಗ್ರೀಸ್ ಪದವಿ ಪೂರ್ವ ಕಾಲೇಜು ಕಲ್ಯಾಣಪುರ, ಲಯನ್ಸ್ ಕ್ಲಬ್ ಕೆಮ್ಮಣ್ಣು, ಲಯನ್ಸ್ ಕ್ಲಬ್ ಕಲ್ಯಾಣಪುರ ಹಾಗೂ ಮೂಲತ್ವ ಫೌಂಡೇಶನ್ ಟ್ರಸ್ಟ್ ರಿ., ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮವು ಬುಧವಾರದಂದು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ಜರುಗಿತು.

    Click Here

    Click Here

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಲಯನ್ಸ್ ಕ್ಲಬ್ ಕೆಮ್ಮಣ್ಣಿನ ಅಧ್ಯಕ್ಷರಾದ ಶ್ರೀ ಲಯನ್ ಜಗದೀಶ್ ಕೆಮ್ಮಣ್ಣು ಅವರು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಪ್ರಾರ್ಥನೆ ಸಲ್ಲಿಸಿದರು. ಮಿಲಾಗ್ರೀಸ್  ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಫಾದರ್ ಮೆಲ್ವಿನ್ ಎಂ. ಮೊಂಡೋನ್ಸ ಎಸ್.ಜೆ. ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಮೂಲತ್ವ ಫೌಂಡೇಶನ್ ಟ್ರಸ್ಟ್ ರಿ., ಮಂಗಳೂರು ಇದರ ಸಂಸ್ಥಾಪಕರಾದ ಪ್ರಕಾಶ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮೂಲತ್ವ ಫೌಂಡೇಶನ್ ವತಿಯಿಂದ ನಡೆಯುತ್ತಿರುವ ವಿವಿಧ ಸಮಾಜಮುಖಿ ಸೇವಾ ಕಾರ್ಯಗಳ ಬಗ್ಗೆ ಸವಿಸ್ತಾರವಾಗಿ ವಿವರಿಸಿದರು.

    ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಡಾ. ಕುಸುಮ್ ಡಿ-ಅಡಿಕ್ಷನ್ ಕೌನ್ಸಿಲರ್, ಥೆರಪಿಸ್ಟ್ ಹಾಗೂ ಎಜುಕೇಶನ್ ಕನ್ಸಲ್ಟೆಂಟ್ ಅವರು ಮಾದಕ ದ್ರವ್ಯ ವ್ಯಸನದಿಂದ ಉಂಟಾಗುವ ಅಪಾಯಗಳು, ಅದರ ದುಷ್ಪರಿಣಾಮಗಳು ಹಾಗೂ ಮಾದಕ ವ್ಯಸನದಿಂದ ದೂರವಿರಲು ಅನುಸರಿಸಬೇಕಾದ ಮಾರ್ಗಗಳ ಬಗ್ಗೆ ವಿದ್ಯಾರ್ಥಿಗಳಿಗೆ ಮನಮುಟ್ಟುವಂತೆ ಮಾಹಿತಿ ನೀಡಿದರು.

    ಲಯನ್ ಎಸ್. ಅನಂತ್ ನಾಯಕ್, ಲಯನ್ಸ್ ಜಿಲ್ಲಾ ಸಂಯೋಜಕರು, ಸರ್ವಿಸ್ ಟು ಸ್ಪೆಶಲ್ ಸ್ಮೈಲ್  ಅವರು ಮಾದಕ ದ್ರವ್ಯ ವ್ಯಸನದ ದುಷ್ಪರಿಣಾಮಗಳ ಬಗ್ಗೆ ವಿವರಿಸುವುದರ ಜೊತೆಗೆ, ಇಂತಹ ಜಾಗೃತಿ ಕಾರ್ಯಕ್ರಮಗಳನ್ನು ಎಲ್ಲಾ ಕಾಲೇಜುಗಳಲ್ಲಿಯೂ ಆಯೋಜಿಸುವ ಅಗತ್ಯತೆಯನ್ನು ಒತ್ತಿ ಹೇಳಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮದಲ್ಲಿ ಗಣಪತಿ ವ್ಯವಸಾಯ ಸಹಕಾರಿ ಸಂಘ, ಕೆಮ್ಮಣ್ಣು ಇದರ ಅಧ್ಯಕ್ಷರಾದ ಶ್ರೀ ಸತೀಶ್ ಶೆಟ್ಟಿ, ಮಿಲಾಗ್ರಿಸ್ ಕಾಲೇಜಿನ 1984ನೇ ಬಿ.ಕಾಂ. ಬ್ಯಾಚ್‌ನ ಹಳೆಯ ವಿದ್ಯಾರ್ಥಿ ಹಾಗೂ ಕಾರ್ಯಕ್ರಮದ ಸಂಯೋಜಕರಾದ ನವೀನ್ ಗುಳಿಬೆಟ್ಟು, 1987ನೇ ಬ್ಯಾಚ್‌ನ ಹಳೆಯ ವಿದ್ಯಾರ್ಥಿ ಹಾಗೂ ಸಹ ಸಂಯೋಜಕರು ಮತ್ತು ಲಯನ್ಸ್ ಕ್ಲಬ್ ಕಲ್ಯಾಣಪುರದ ಉಪಾಧ್ಯಕ್ಷ ಲಾನ್ಸಿ ಡಿಸಿಲ್ವ ಉಪಸ್ಥಿತರಿದ್ದರು.

    ಲಯನ್ಸ್ ಕ್ಲಬ್ ಕಲ್ಯಾಣಪುರದ ಕಾರ್ಯದರ್ಶಿ ಸುಧಾಕರ್ ಕೋಟ್ಯಾನ್ ಅವರು ವಂದನಾರ್ಪಣೆ ಸಲ್ಲಿಸಿದರು. ವಿದ್ಯಾರ್ಥಿಗಳಲ್ಲಿ ಮಾದಕ ದ್ರವ್ಯ ಸೇವನೆಯ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮವು ಅರ್ಥಪೂರ್ಣವಾಗಿ ಹಾಗೂ ಯಶಸ್ವಿಯಾಗಿ ನೆರವೇರಿತು.

    Kota
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಕನ್ನಡ ಸಿರಿ ಕಾರ್ಯಕ್ರಮ

    19/11/2026

    ನೂಜಾಡಿ ಆಂಗ್ಲ ಮಾಧ್ಯಮ ಶಾಲೆ – ಕಾನೂನು ಅರಿವು ಕಾರ್ಯಕ್ರಮ

    19/11/2026

    ಕೆದೂರು ಹೊಸಮಠ ಧರ್ಮಗೋಳಿ ದೈವಸ್ಥಾನದ ತಾಮ್ರದ ಪಾತ್ರೆಗಳು ಕಳವು

    19/11/2026
    Leave A Reply Cancel Reply

    eighteen + 7 =

    Call us

    Click Here

    Call us

    Call us

    Call us
    Highest Viewed Recently
    • ಕಲ್ಯಾಣಪುರ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ
    • ಗಂಗೊಳ್ಳಿ ಸರಸ್ವತಿ ವಿದ್ಯಾಲಯದಲ್ಲಿ ಕನ್ನಡ ಸಿರಿ ಕಾರ್ಯಕ್ರಮ
    • ನೂಜಾಡಿ ಆಂಗ್ಲ ಮಾಧ್ಯಮ ಶಾಲೆ – ಕಾನೂನು ಅರಿವು ಕಾರ್ಯಕ್ರಮ
    • ಕೆದೂರು ಹೊಸಮಠ ಧರ್ಮಗೋಳಿ ದೈವಸ್ಥಾನದ ತಾಮ್ರದ ಪಾತ್ರೆಗಳು ಕಳವು
    • ರೈಲಿನಲ್ಲಿ ಪ್ರಯಾಣಿಕರ ಮೊಬೈಲ್‌ ಕಳವು ಮಾಡಿ ಯುಪಿಐ ಮೂಲಕ ಹಣ ವರ್ಗಾವಣೆ – ಆರೋಪಿ ಬಂಧನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.