ಕುಂದಾಪ್ರ ಡಾಟ್ ಕಾಂ ಸುದ್ದಿ.
ಗಂಗೊಳ್ಳಿ: ಸಾಮಾಜಿಕ ಕಳಕಳಿ, ದೂರದೃಷ್ಟಿ ಮತ್ತು ಸೇವಾ ಮನೋಭಾವ ಹೊಂದಿದ್ದ ಸುಬ್ಬರಾವ್ ಪೈ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ದೂರದೃಷ್ಟಿಯ ಫಲವಾಗಿ ಆರಂಭಗೊಂಡ ಕೆನರಾ ಬ್ಯಾಂಕ್ ಇಂದು ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾಗಿ ಬೆಳೆದಿದೆ. ಅಮ್ಮೆಂಬಳ ಸುಬ್ಬರಾವ್ ಪೈ ಅವರ ಜೀವನ ಸಾಧನೆ ಬ್ಯಾಂಕಿಂಗ್ ಕ್ಷೇತ್ರಕ್ಕೆ ಮಾತ್ರವಲ್ಲದೆ, ಸಮಾಜಮುಖಿ ಸೇವೆಗೆ ಮಾದರಿಯಾಗಿದೆ ಎಂದು ಕೆನರಾ ಬ್ಯಾಂಕಿನ ನಿವೃತ್ತ ಉದ್ಯೋಗಿ ಜಿ.ಗಂಗಾಧರ ಪೈ ಹೇಳಿದರು.
ಅವರು ಕೆನರಾ ಬ್ಯಾಂಕ್ ಗಂಗೊಳ್ಳಿ ಶಾಖೆಯಲ್ಲಿ ಗುರುವಾರ ಜರಗಿದ ಕೆನರಾ ಬ್ಯಾಂಕಿನ ಸಂಸ್ಥಾಪಕ ಅಮ್ಮೆಂಬಳ ಸುಬ್ಬರಾವ್ ಪೈ ಅವರ 174ನೇ ಜನ್ಮದಿನಾಚರಣೆ ಅಂಗವಾಗಿ ನಡೆದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಟ್ಟಡದ ಮಾಲೀಕ, ಉದ್ಯಮಿ ಎಂ.ಜಿ. ಅಜಿತ್ ನಾಯಕ್, ಪತ್ರಕರ್ತ ಬಿ. ರಾಘವೇಂದ್ರ ಪೈ, ಕೆನರಾ ಬ್ಯಾಂಕ್ ಸಿಬ್ಬಂದಿಗಳಾದ ಸಾಗರ್ ಕೆ.ಶಿವದಾಸ್, ನವನೀತ್ ಕೃಷ್ಣ, ಜಯಮುರುಕೇಶ್ ಕೆ.ಕೆ., ರಾಘವೇಂದ್ರ ಗಾಣಿಗ, ಗಣೇಶ್, ವಾಣಿ ಶೇರುಗಾರ್ ಮತ್ತು ಬಿ.ಟಿ.ರಾಜೇಂದ್ರ ಅವರು ಅಮ್ಮೆಂಬಳ ಸುಬ್ಬರಾವ್ ಪೈ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.












