ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಇಲ್ಲಿನ ಕೋಟದ ಸಹಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕರ್ಣಾಟಕ ಬ್ಯಾಂಕ್ ವತಿಯಿಂದ ಶಾಲಾ ವಾಹನವನ್ನು ಗುರುವಾರ ಜರಗಿತು.
ಶಾಲಾ ಮುಖ್ಯ ಶಿಕ್ಷಕಿ ಶೀಲಾ ಅವರಿಗೆ ಕರ್ಣಾಟಕ ಬ್ಯಾಂಕ್ ಉಡುಪಿ ಪ್ರಾದೇಶಿಕ ಕಛೇರಿಯ ಪ್ರಬಂಧಕ ರಾಮಚಂದ್ರ ವೈದ್ಯ ಕೀ ನೀಡುವ ಮೂಲಕ ಮೂಲಕ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಕರ್ಣಾಟಕ ಬ್ಯಾಂಕ್ ಉಡುಪಿ ಚೀಫ್ ಮ್ಯಾನೇಜರ್ ಪ್ರಕಾಶ್ಚಂದ್ರ ಶೆಟ್ಟಿ,ಕೋಟ ಶಾಖಾ ಪ್ರಭಂಧಕ ಗುರುರಾ ಸರಳಾಯ, ಅತಿಥಿಗಳಾಗಿ ಕೋಟ ವಿವೇಕ ವಿದ್ಯಾಸಂಸ್ಥೆಯ ಪ್ರೌಢಶಾಲಾ ವಿಭಾದ ಮುಖ್ಯ ಶಿಕ್ಷಕರಾದ ಪ್ರೇಮಾನಂದ, ರತಿ, ಶಿಕ್ಷಕ ಗಣೇಶ್ ಶೆಟ್ಟಿ, ಶಾಲಾ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರಮೋದ್ ಹಂದೆ,ಶಾಲಾ ವಾಹನ ಸಮಿತಿ ಅಧ್ಯಕ್ಷ ಉಪೇಂದ್ರ ಸೋಮಯಾಜಿ,ಎಸ್ಡಿಎಂಸಿ ಅಧ್ಯಕ್ಷೆ ಮಹಾಲಕ್ಷ್ಮಿ ಸೋಮಯಾಜಿ,ಮಾಜಿ ಪ್ರಾಂಶುಪಾಲ ರಾಘವೇಂದ್ರ ಭಟ್, ಕರ್ಣಾಟಕ ಬ್ಯಾಂಕ್ ನಿವೃತ್ತ ಪ್ರಭಂಧಕ ಕೋಡಿ ಚಂದ್ರಶೇಖರ್ ನಾವಡ ಮತ್ತಿತರರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಶಿಕ್ಷಕಿ ಪುಷ್ಭಾವತಿ ಹೊಳ್ಳ ನಿರೂಪಿಸಿದರು. ಶಿಕ್ಷಕಿ ವಿನಯ ಕುಮಾರಿ ವಂದಿಸಿದರು.












