Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಭಾರತ್ ಜೋಡೊ ಯುವ ಸಂಘ ಸ್ಥಾಪಿಸಿ, ಯುವಜನರನ್ನು ಸಬಲೀಕರಣಗೊಳಿಸಿ: ಜಿಲ್ಲಾಧಿಕಾರಿ
    ಉಡುಪಿ ಜಿಲ್ಲೆ

    ಭಾರತ್ ಜೋಡೊ ಯುವ ಸಂಘ ಸ್ಥಾಪಿಸಿ, ಯುವಜನರನ್ನು ಸಬಲೀಕರಣಗೊಳಿಸಿ: ಜಿಲ್ಲಾಧಿಕಾರಿ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಜಿಲ್ಲೆಯಲ್ಲಿ ಭಾರತ್ ಜೋಡೊ ಯುವ ಸಂಘಗಳ ಸದಸ್ಯತ್ವದ ನೋಂದಣಿ ಪ್ರಕ್ರಿಯೆ ಹಾಗೂ ಸಮಿತಿಗಳನ್ನು ರಚಿಸಿ, ಯುವಜನರನ್ನು ಸಬಲೀಕರಣಗೊಳಿಸಲು ತಳಮಟ್ಟದ ಆಡಳಿತದಲ್ಲಿ ಸಕ್ರೀಯಪಾಲುದಾರರನ್ನಾಗಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು.

    Call us

    Click Here

    ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಇವರ ವತಿಯಿಂದ ಭಾರತ್ ಜೋಡೊ ಯುವ ಸಂಘದ ಮಾರ್ಗದರ್ಶಕರಿಗೆ ಆಯೋಜಿಸಲಾದ ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದರು. ಯುವ ಜನರಲ್ಲಿ ಕ್ರೀಡೆ, ಸಂಸ್ಕೃತಿ, ವೈಜ್ಞಾನಿಕ ಮನೋಭಾವ ಹಾಗೂ ಸಾಮಾಜಿಕ ಸಾಮರಸ್ಯವನ್ನು ಉತ್ತೇಜಿಸಲು, ಗ್ರಾಮ ಪಂಚಾಯತ್ ಹಾಗೂ ನಗರದ ವಾರ್ಡ್ಗಳ ವ್ಯಾಪ್ತಿಯಲ್ಲಿ ಭಾರತ್ ಜೋಡೊ ಯುವ ಸಂಘಗಳನ್ನು ಸ್ಥಾಪಿಸಲಾಗುತ್ತಿದೆ. ಯುವಜನರಲ್ಲಿ ನಾಯಕತ್ವದ ಗುಣ ಬೆಳಿಸಿ, ಅವರುಗಳನ್ನು ಸಬಲೀಕರಣಗೊಳಿಸಿ, ನಾಳಿನ ಸತ್ಪçಜೆಗಳಾಗಿ ರೂಪಿಸುವುದು ಮುಖ್ಯ ಉದ್ದೇಶವಾಗಿದೆ ಎಂದರು.

    ಜಿಲ್ಲೆಯಾದ್ಯಂತ ಗ್ರಾಮ ಪಂಚಾಯತ್ ಹಾಗೂ ನಗರದ ವಾರ್ಡ್ಗಳ ವ್ಯಾಪ್ತಿಯಲ್ಲಿ  ಜನಸಂಖ್ಯೆಗೆ ಅನುಗುಣವಾಗಿ ಸಂಘ ಸ್ಥಾಪಿಸುವ ಗುರಿ ಹೊಂದಲಾಗಿದ್ದು, ಸಂಘಗಳ ನೋಂದಣಿ ಮಾಡುವಲ್ಲಿ ಮಾರ್ಗದರ್ಶಕರ ಜವಾಬ್ದಾರಿ ಹೆಚ್ಚಿದೆ. ಪ್ರತಿ ಯುವ ಸಂಘವೂ ಸರ್ಕಾರದ ಮಾರ್ಗಸೂಚಿ ಅನ್ವಯ ನೋಂದಣಿ ಆಗುವಂತೆ ಅಗತ್ಯ ಕ್ರಮ ವಹಿಸಬೇಕು ಎಂದ ಅವರು, ಈ ಎಲ್ಲಾ ಕಾರ್ಯಗಳನ್ನು ತಹಶೀಲ್ದಾರ್ ಗಳು ಮೇಲ್ವಿಚಾರಣೆ ಮಾಡಬೇಕು ಎಂದರು.

    ಜಿಲ್ಲೆಯಲ್ಲಿ ಈಗಾಗಲೇ ನೋಂದಣಿಯದ ಎಲ್ಲಾ ಭಾರತ್ ಜೋಡೊ ಸಂಘಗಳನ್ನು ಕ್ಯೂ ಅರ್ ಕೋಡ್ ನಲ್ಲಿ ಅಪ್ಲೋಡ್ ಮಾಡಬೇಕು. ಪ್ರತಿ ಸಂಘವು ಪ್ರಜಾಸತ್ತಾತ್ಮಕವಾಗಿ ಆಯ್ಕೆಯಾದ 15 ಜನ ಸದಸ್ಯರನ್ನು ಒಳಗೊಂಡ ಆಂತರಿಕ ಕಾರ್ಯಕಾರಿ ಸಮಿತಿಯನ್ನು ಹೊಂದಿರಲಿದ್ದು, ಇದರಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಖಜಾಂಜಿ ಹಾಗೂ 12 ಜನರ ಕಾರ್ಯಕಾರಿ ಸದಸ್ಯರು ಇರಲಿದ್ದಾರೆ ಎಂದ ಅವರು, ಮೀಸಲಾತಿಗೆ ಅನುಗುಣವಾಗಿ ಸಮಿತಿಗಳನ್ನು ರಚಿಸಲು ಮುಂದಾಗಬೇಕು ಎಂದರು.

    ನಿಯಮನುಸಾರ ನೋಂದಣಿಯಾದ ಭಾರತ್ ಜೋಡೊ ಸಂಘಗಳಿಗೆ ವಾರ್ಷಿಕ ತಲಾ 10 ಲಕ್ಷ ರೂ. ಗಳಂತೆ ಸರಕಾರ ಅನುದಾನ ನೀಡಲಿದ್ದು, ಈ ಅನುದಾನದಲ್ಲಿ ಸಾಮಾಜಿಕ ಸೇವೆ, ಪರಿಸರ ಸಂರಕ್ಷಣೆ, ಜಲ ಸಂರಕ್ಷಣೆ, ಆರೋಗ್ಯ, ಸ್ವಚ್ಛತೆ ಹಾಗೂ ಯುವ ಸಬಲೀಕರಣದಂತಹ ವಿವಿಧ ಸಮಾಜಮುಖಿ ಕಾರ್ಯಗಳಲ್ಲಿ ಯುವಕರನ್ನು ಸಕ್ರಿಯವಾಗಿ ತೊಡಗಿಸಿಕೊಳ್ಳುವಂತಹ ಚಟುವಟಿಕೆಗಳನ್ನು ಪ್ರಾರಂಭಿಸಲಾಗುವುದು ಎಂದ ಅವರು, ಸಂಘಗಳ ನೋಂದಣಿ ಮಾಡಿಸುವುದರೊಂದಿಗೆ ಆ ಸಂಘಗಳಿಗೆ ಸಂಬಂಧಿಸಿದಂತೆ ಬ್ಯಾಂಕ್‌ಗಳಲ್ಲಿ ಖಾತೆ ತೆರೆಯಲು ಅಗತ್ಯ ಕ್ರಮ ವಹಿಸುವಂತೆ ತಿಳಿಸಿದರು.

    Click here

    Click here

    Call us

    ಜಿಲ್ಲೆಯಲ್ಲಿ ಭಾರತ್ ಜೋಡೊ ಯುವ ಸಂಘಗಳ ರಚನೆಗೆ ಸ್ಥಳೀಯಾಡಳಿತ ಸಂಸ್ಥೆಗಳ ಅಧಿಕಾರಿಗಳು, ಸಿಬ್ಬಂದಿ, ಮಾರ್ಗದರ್ಶಕರು, ಮಾಸ್ಟರ್ ತರಬೇತುದಾರರು ಹಾಗೂ ಸಾರ್ವಜನಿಕರು ಸಮನ್ವಯದಿಂದ ಕಾರ್ಯನಿರ್ವಹಿಸುವುದರೊಂದಿಗೆ ಯುವ ಸಂಘಗಳ ಸ್ಥಾಪನೆ ಹಾಗೂ ಸದಸ್ಯತ್ವ ನೋಂದಣಿ ಪ್ರಕ್ರಿಯೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

    ಜಿಲ್ಲಾ ಕೋ ಆರ್ಡಿನೇಟರ್ ಡಾ. ಗಣನಾಥ್ ಶೆಟ್ಟಿ ಎಕ್ಕಾರು ಮಾತನಾಡಿ, ಯಾವುದೇ ಒಂದು ಸಂಘಟನೆಯಲ್ಲಿ ಕೆಲಸ ಮಾಡುವಾಗ ಆ ಸಂಘಟನೆಗಳ ಕಾರ್ಯ ವೈಖರಿಯನ್ನು ಅರ್ಥೈಸಿಕೊಂಡಲ್ಲಿ ಮಾತ್ರ  ಸಮಸ್ಯೆಗಳಿಗೆ ಪರಿಹಾರ ದೊರೆಯಲಿದೆ. ಭಾರತ್ ಜೋಡೊ ಯುವ ಸಂಘ ಸ್ಥಾಪನೆಯಲ್ಲಿ ಮಾರ್ಗದರ್ಶಕರೇ  ಅಡಿಪಾಯದ ಸ್ಥಂಭ ಗಳಿದ್ದಂತೆ. ಅವರುಗಳು ತಮ್ಮ ಕಾರ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು ಎಂದರು.

    ಗ್ರಾಮೀಣ ಮತ್ತು ನಗರದ 16-35 ವರ್ಷ ದೊಳಗಿನ ಯುವಜನರಲ್ಲಿ ಕ್ರೀಡೆ, ಆರೋಗ್ಯಕರ ಜೀವನ ಶೈಲಿ, ಯುವಕರಲ್ಲಿ ನಾಯಕತ್ವ ಗುಣ ಬೆಳೆಸುವುದು ಸೇರಿದಂತೆ ಮತ್ತಿತರ ಸಮಾಜಮುಖಿ ಚಟುವಟಿಕೆ ಕೈಗೊಳ್ಳಲು ಸಂಘಗಳನ್ನು ಸ್ಥಾಪಿಸಲಾಗುತ್ತಿದೆ ಎಂದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎಸ್.ಎಸ್ ಕಾದ್ರೊಳ್ಳಿ, ನಗರಸಭೆ ಆಯುಕ್ತ ಮಹಾಂತೇಶ್ ಹಂಗರಗಿ, ತಹಶೀಲ್ದಾರ್ ಗಳಾದ ಅನಂತ ಶಂಕರ್ ಬಿ, ರಾಕೇಶ್ ಫ್ರಾನ್ಸಿಸ್ ವಿಕ್ಟರ್ ಹಾಗೂ ಅಶೋಕ್ ಭಟ್, ಮಾಸ್ಟರ್ ಟ್ರೈನರ್ ಗಳು ಹಾಗೂ ಮೆಂಟರ್ ಗಳು ಉಪಸ್ಥಿತರಿದ್ದರು.

    ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ನಿರೂಪಿಸಿದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಎಂ.ಎಲ್. ಸಾಮಗ

    19/11/2026

    ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

    19/11/2026

    ಸಂಕಷ್ಟದಲ್ಲಿರುವ ಮಕ್ಕಳ ರಕ್ಷಣೆ ಪ್ರತಿಯೊಬ್ಬರ ಆದ್ಯತೆಯಾಗಲಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್

    19/11/2026
    Leave A Reply Cancel Reply

    three × 3 =

    Call us

    Click Here

    Call us

    Call us

    Call us
    Highest Viewed Recently
    • ನ.22ರಿಂದ ಕುಂದಾಪುರದಲ್ಲಿ ರೋಷನ್‌ ಹೋಮಿಯೋಪಥಿ ನೂತನ ಕ್ಲಿನಿಕ್‌ ಶುಭಾರಂಭ
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ
    • ಜೆಜೆಎಂ ಅವ್ಯವಹಾರದ ಕುರಿತು ಸಂಸದರು ಹಾಗೂ ಶಾಸಕರು ಮೌನ ಮುರಿಯಲಿ: ಕೆ. ವಿಕಾಸ್ ಹೆಗ್ಡೆ
    • ‘ಆವಿರ್ಭವ 2026–27’: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ – ಪಿಯು ವಿಭಾಗದ ವಾರ್ಷಿಕೋತ್ಸವ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.