Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸುಜ್ಞಾನ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ದೀಪಾವಳಿ ಸಂಭ್ರಮ
    ಊರ್ಮನೆ ಸಮಾಚಾರ

    ಸುಜ್ಞಾನ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ದೀಪಾವಳಿ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ಮಕ್ಕಳಿಗೆ ಆಸ್ತಿ-ಪಾಸ್ತಿ ನೀಡುವುದಕ್ಕಿಂತ ಉತ್ತಮ ಸಂಸ್ಕಾರ ನೀಡುವುದು ಅತ್ಯಂತ ಶ್ರೇಷ್ಠ. ಸಂಸ್ಕಾರವೇ ಮಕ್ಕಳ ಬದುಕಿನ ನಿಜವಾದ ಆಸ್ತಿ ಎಂದು ಯಡೂರು ಹೊಸನಗರ ತಾಲೂಕು ಸಮೂಹ ಸಂಪನ್ಮೂಲ ವ್ಯಕ್ತಿ, ಶಿಕ್ಷಕಿ ಹಾಗೂ ಸಾಹಿತಿ ರೇಖಾ ಪ್ರಭಾಕರ್ ಹೇಳಿದರು.

    Click Here

    Click Here

    Call us

    Click Here

    ಅವರು ಇಲ್ಲಿನ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ವತಿಯಿಂದ ಯಡಾಡಿ- ಮತ್ಯಾಡಿ ವಿದ್ಯಾರಣ್ಯ ಕ್ಯಾಂಪಸ್‌ನಲ್ಲಿ ಆಯೋಜಿಸಿದ್ದ ‘ಸುಜ್ಞಾನ ದೀಪಾವಳಿ-2026’ ಸಂಭ್ರಮವನ್ನು ಉದ್ಘಾಟಿಸಿ ಮಾತನಾಡಿದರು.

    ದೀಪಾವಳಿ ಕೇವಲ ದೀಪ ಹಚ್ಚಿ ಸಂಭ್ರಮಿಸುವ ಹಬ್ಬವಲ್ಲ. ಅದರ ಹಿಂದೆ ಪೌರಾಣಿಕ ಪರಂಪರೆ, ಕೃಷಿ ಸಂಸ್ಕೃತಿ, ಪ್ರಕೃತಿ ಆರಾಧನೆ ಮತ್ತು ಕೃತಜ್ಞತೆಯ ಭಾವನೆ ಅಡಕವಾಗಿದೆ. ಕರಾವಳಿ ಭಾಗದಲ್ಲಿ ಬಲಿಂದ್ರನ ಸ್ವಾಗತ, ಗದ್ದೆಗಳಿಗೆ ದೀಪವಿಡುವುದು, ನೆಣೆಕೋಲು, ಹೊಲಿರಾಶಿ ಪೂಜೆ, ಧನಲಕ್ಷ್ಮಿ ಆರಾಧನೆ, ತುಳಸಿ ಹಾಗೂ ಗೋ ಪೂಜೆಯಂತಹ ಆಚರಣೆಗಳು ಕೃಷಿ ಬದುಕು ಮತ್ತು ಪ್ರಕೃತಿಯೊಂದಿಗಿನ ನಂಟನ್ನು ಸಾರುತ್ತವೆ. ಆಧುನಿಕ ಜೀವನಶೈಲಿಯಲ್ಲಿ ಮರೆಯಾಗುತ್ತಿರುವ ಇಂತಹ ಸಂಪ್ರದಾಯಗಳ ಹಿಂದಿನ ಮಹತ್ವವನ್ನು ಮಕ್ಕಳಿಗೆ ತಿಳಿಸಿ ಮುಂದಿನ ಪೀಳಿಗೆಗೆ ತಲುಪಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

    ದೀಪವು ಜ್ಞಾನದ ಸಂಕೇತವಾಗಿದ್ದು, ಒಂದು ದೀಪದಿಂದ ಮತ್ತೊಂದು ದೀಪ ಹಚ್ಚಿದರೂ ಮೊದಲ ದೀಪದ ಬೆಳಕು ಕಡಿಮೆಯಾಗುವುದಿಲ್ಲ. ಅದೇ ರೀತಿ ಜ್ಞಾನ ಮತ್ತು ಪ್ರೀತಿಯನ್ನು ಹಂಚಿದಷ್ಟು ಅವು ಹೆಚ್ಚುತ್ತವೆ. ಅಜ್ಞಾನ, ಅಸೂಯೆ ಹಾಗೂ ದ್ವೇಷದ ಕತ್ತಲೆಯನ್ನು ದೂರಮಾಡಿ ಪ್ರೀತಿ ಮತ್ತು ಸಹಕಾರದ ಬೆಳಕು ಹರಡುವುದೇ ದೀಪಾವಳಿಯ ನಿಜವಾದ ಸಂದೇಶ ಎಂದು ತಿಳಿಸಿದರು.

    ವಿದ್ಯಾರ್ಥಿಗಳು ತಂದೆ-ತಾಯಿಯ ತ್ಯಾಗ ಮತ್ತು ಪರಿಶ್ರಮವನ್ನು ಅರಿತು ಶ್ರದ್ಧೆಯಿಂದ ವಿದ್ಯಾಭ್ಯಾಸ ಮಾಡಿ ಜೀವನದಲ್ಲಿ ಸಾಧನೆ ಮಾಡಬೇಕು. ಬಡ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡುವುದರೊಂದಿಗೆ ಸಾಧಕ ವಿದ್ಯಾರ್ಥಿಗಳ ಮುಂದಿನ ವಿದ್ಯಾಭ್ಯಾಸಕ್ಕೂ ನೆರವಾಗುತ್ತಿರುವ ಸುಜ್ಞಾನ ಸಂಸ್ಥೆಯ ಸೇವೆ ಶ್ಲಾಘನೀಯ. ಸಂಸ್ಥೆಯು ಜ್ಞಾನದ ಬೆಳಕಿನ ಮೂಲಕ ಅನೇಕ ಕುಟುಂಬಗಳ ಬದುಕನ್ನು ಬೆಳಗಿಸುತ್ತಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    Click here

    Click here

    Click here

    Call us

    Call us

    ಕಾರ್ಯಕ್ರಮದ ಸ್ವಾಗತ ಮತ್ತು ಪ್ರಾಸ್ತಾವಿಕ ಭಾಷಣ ಮಾಡಿದ ಸಂಸ್ಥೆಯ ಕೋಶಾಧಿಕಾರಿ ಭರತ್ ಶೆಟ್ಟಿ, ದೀಪಾವಳಿ ತ್ಯಾಗ, ಪ್ರೀತಿ, ಸಂಸ್ಕೃತಿ ಮತ್ತು ಜೀವನ ಮೌಲ್ಯಗಳನ್ನು ಸಾರುವ ಹಬ್ಬವಾಗಿದೆ. ವಿದ್ಯಾರ್ಥಿಗಳು ತಮ್ಮ ತಂದೆ-ತಾಯಿಯೊಂದಿಗೆ ಹಬ್ಬ ಆಚರಿಸಲು ಈ ಬಾರಿ ರಜೆ ನೀಡಲಾಗಿದ್ದರೂ, ಕ್ಯಾಂಪಸ್‌ನ ದೀಪಾವಳಿ ಸಂಭ್ರಮದಿಂದ ಅವರು ವಂಚಿತರಾಗಬಾರದು ಎಂಬ ಉದ್ದೇಶದಿಂದ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.

    ದೀಪಾವಳಿಯ ಹಣತೆ ತಾನು ಉರಿದು ಸುತ್ತಲಿನ ಕತ್ತಲೆಯನ್ನು ದೂರಮಾಡುವಂತೆ, ತಂದೆ-ತಾಯಿಯರೂ ತಮ್ಮ ಆಸೆ-ಆಕಾಂಕ್ಷೆಗಳನ್ನು ಬದಿಗಿಟ್ಟು ಮಕ್ಕಳ ಭವಿಷ್ಯಕ್ಕಾಗಿ ತ್ಯಾಗ ಮಾಡುತ್ತಾರೆ. ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಸನ್ನಡತೆ ಮತ್ತು ಸಂಸ್ಕಾರ ಬೆಳೆಸಿಕೊಂಡು ಪೋಷಕರ ಕನಸುಗಳನ್ನು ನನಸಾಗಿಸಬೇಕು ಎಂದು ಕಿವಿಮಾತು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸುಜ್ಞಾನ ಎಜುಕೇಶನಲ್ ಟ್ರಸ್ಟ್ ಅಧ್ಯಕ್ಷ ಡಾ. ರಮೇಶ್ ಶೆಟ್ಟಿ ಮಾತನಾಡಿ, ಶಿಕ್ಷಣ ಸಂಸ್ಥೆಯ ಉದ್ದೇಶ ಕೇವಲ ಪಠ್ಯ ಶಿಕ್ಷಣ ನೀಡುವುದಕ್ಕೆ ಸೀಮಿತವಾಗಬಾರದು. ವಿದ್ಯಾರ್ಥಿಗಳಲ್ಲಿ ಉತ್ತಮ ಮನಸ್ಸು, ಸಂಸ್ಕಾರ, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಅರಿವು ಬೆಳೆಸುವುದರ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಹಾಗೂ ಕ್ರೀಡಾ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುವುದು ಸುಜ್ಞಾನ ಸಂಸ್ಥೆಯ ಆಶಯವಾಗಿದೆ ಎಂದರು.

    ಕ್ಯಾಂಪಸ್‌ನಲ್ಲಿ ನಾಗರ ಪಂಚಮಿ, ಗಣೇಶ ಚತುರ್ಥಿ, ಕೃಷ್ಣಾಷ್ಟಮಿ, ವಿಜಯದಶಮಿ, ಸ್ವಾತಂತ್ರ್ಯ ದಿನಾಚರಣೆ, ದೀಪಾವಳಿ ಹಾಗೂ ಗಣರಾಜ್ಯೋತ್ಸವದಂತಹ ಕಾರ್ಯಕ್ರಮಗಳನ್ನು ಆಯೋಜಿಸುವುದು ಕೇವಲ ಆಚರಣೆಗೆ ಸೀಮಿತವಲ್ಲ. ಇವುಗಳ ಮೂಲಕ ವಿದ್ಯಾರ್ಥಿಗಳಲ್ಲಿ ಸಂಘಟನಾ ಕೌಶಲ, ಜವಾಬ್ದಾರಿ ಮತ್ತು ನಾಯಕತ್ವ ಗುಣಗಳನ್ನು ಬೆಳೆಸುವ ಪರೋಕ್ಷ ಶಿಕ್ಷಣ ನೀಡಲಾಗುತ್ತಿದೆ. ಮುಂದೆ ಅವರು ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿದಾಗ ಇಂತಹ ಅನುಭವಗಳು ಸಹಕಾರಿಯಾಗಲಿವೆ ಎಂದು ಹೇಳಿದರು.

    ಹಾಸ್ಟೆಲ್‌ನಲ್ಲಿ ವಾಸಿಸುವ ವಿದ್ಯಾರ್ಥಿಗಳಿಗೆ ಮನೆಯ ಹಬ್ಬದ ವಾತಾವರಣದ ಅನುಭವ ನೀಡುವುದೂ ಸಂಸ್ಥೆಯ ಉದ್ದೇಶವಾಗಿದೆ. ಸಂಸ್ಥೆಯ ಬೆಳವಣಿಗೆಯಲ್ಲಿ ಪೋಷಕರು, ಪಾಲಕರು, ಸ್ಥಳೀಯರು ಹಾಗೂ ಹಿತೈಷಿಗಳ ಸಹಕಾರ ಮಹತ್ವದ್ದಾಗಿದ್ದು, ಮುಂದೆಯೂ ಎಲ್ಲರ ಬೆಂಬಲ ಅಗತ್ಯ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಪ್ರತಾಪಚಂದ್ರ ಶೆಟ್ಟಿ, ಕೋಶಾಧಿಕಾರಿ ಭರತ್ ಶೆಟ್ಟಿ, ಮುಖ್ಯ ಅತಿಥಿ ರೇಖಾ ಪ್ರಭಾಕರ್, ಗಣ್ಯರು, ಹಿತೈಷಿಗಳು, ಪ್ರಾಂಶುಪಾಲರು, ಉಪನ್ಯಾಸಕರು, ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಗೂ ಪೋಷಕರು ಉಪಸ್ಥಿತರಿದ್ದರು. ರಜತ್ ಭಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ

    20/11/2026

    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ

    20/11/2026

    ಜೆಜೆಎಂ ಅವ್ಯವಹಾರದ ಕುರಿತು ಸಂಸದರು ಹಾಗೂ ಶಾಸಕರು ಮೌನ ಮುರಿಯಲಿ: ಕೆ. ವಿಕಾಸ್ ಹೆಗ್ಡೆ

    20/11/2026
    Leave A Reply Cancel Reply

    2 × 2 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ
    • ಜೆಜೆಎಂ ಅವ್ಯವಹಾರದ ಕುರಿತು ಸಂಸದರು ಹಾಗೂ ಶಾಸಕರು ಮೌನ ಮುರಿಯಲಿ: ಕೆ. ವಿಕಾಸ್ ಹೆಗ್ಡೆ
    • ‘ಆವಿರ್ಭವ 2026–27’: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ – ಪಿಯು ವಿಭಾಗದ ವಾರ್ಷಿಕೋತ್ಸವ
    • ಸೆಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ: ವಾರ್ಷಿಕ ಕ್ರೀಡಾಕೂಟ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.