Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಸೆಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ: ವಾರ್ಷಿಕ ಕ್ರೀಡಾಕೂಟ
    ಊರ್ಮನೆ ಸಮಾಚಾರ

    ಸೆಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ: ವಾರ್ಷಿಕ ಕ್ರೀಡಾಕೂಟ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಸೆಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಕ್ಷರ ಪರ್ವ-2026ರ ಅಂಗವಾಗಿ ವಾರ್ಷಿಕ ಕ್ರೀಡೋತ್ಸವವು ನಡೆಯಿತು.

    Click Here

    Click Here

    Call us

    Click Here

    ಕೊಲ್ಲೂರು ಪೊಲೀಸ್ ಠಾಣೆಯ ಎ.ಎಸ್.ಐ ನರೇಶ್ ಅವರು ಪಥಸಂಚಲನದ ಗೌರವ ರಕ್ಷೆ ಸ್ವೀಕರಿಸಿ, ಗ್ರಾಮೀಣ ಪ್ರದೇಶದ ಈ ಶಾಲೆಯಲ್ಲಿ ಅತ್ಯಂತ ವ್ಯವಸ್ಥಿತವಾಗಿ ಕ್ರೀಡಾಚಟುವಟಿಕೆಗಳನ್ನು ಆಯೋಜಿಸಿ ವಿದ್ಯಾರ್ಥಿಗಳ ಕ್ರೀಡಾಪ್ರತಿಭೆಯನ್ನು ಪ್ರೋತ್ಸಾಹಿಸುತ್ತಿರುವುದು ಶ್ಲಾಘನಾರ್ಹ ಕಾರ್ಯ ಎಂದರು.

    ಕ್ರೀಡಾಜ್ಯೋತಿಯನ್ನು ಪ್ರಜ್ವಲಿಸಿದ ಚಿತ್ತೂರು ಪಿಎಂಶ್ರೀ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಬಾಲಕೃಷ್ಣ ಶೆಟ್ಟಿ ಮಾತನಾಡಿ, ಶಾಲಾ ವಾರ್ಷಿಕ ಕ್ರೀಡಾಕೂಟಗಳು ವಿದ್ಯಾರ್ಥಿಗಳಿಗೆ ಮಹತ್ವವಾದುದು. ವಿದ್ಯಾರ್ಥಿಗಳಲ್ಲಿ ಕ್ರೀಡಾಸ್ಪೂರ್ತಿಯನ್ನು ವೃದ್ಧಿಸಲು ಅನುಕೂಲ ಎಂದು ಶುಭ ಹಾರೈಸಿದರು.

    ಮೂಕಾಂಬಿಕಾ ದೇವಳ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರಾದ  ಬಡಿಯ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿದರು. ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಸುಬ್ಬಯ್ಯ ನಾಯ್ಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

    ಸಮೂಹ ಸಂಪನ್ಮೂಲ ವ್ಯಕ್ತಿ ಶೈಲಜಾ, ಸುವರ್ಣನಿಧಿ ಯೋಜನೆಯ ಅಧ್ಯಕ್ಷ ನೇತ್ರಾಡಿ ಸುರೇಂದ್ರ ನಾಯ್ಕ, ಸಭಾಭವನ ಸಮಿತಿ ಅಧ್ಯಕ್ಷೆ ಪ್ರೇಮಾ ಎಸ್ ನಾಯ್ಕ್, ಎಸ್,ಡಿ,ಎಂ.ಸಿ ಉಪಾಧ್ಯಕ್ಷೆ ನಾಗರತ್ನ ಶೆಟ್ಟಿ, ಮೂಕಾಂಬಿಕಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಸತೀಶ, ಮೂಕಾಂಬಿಕಾ ಪ್ರೌಢಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ರಾಜೀವ ಶೆಟ್ಟಿ, ವಿದ್ಯಾರ್ಥಿ ನಾಯಕಿ ತನುಶ್ರೀ ಶೆಟ್ಟಿ ಉಪಸ್ಥಿತರಿದ್ದರು.

    Click here

    Click here

    Click here

    Call us

    Call us

    ಶಾಲಾ ಮುಖ್ಯೋಪಾಧ್ಯಾಯರಾದ ಎಂ.ನಾಗರಾಜ ಶೆಟ್ಟಿ ಅವರು ಮಾತನಾಡಿ, ಮಕ್ಕಳ ದಿನಾಚರಣೆಯ ದಿನದಂದೇ ಕ್ರೀಡಾಕೂಟವನ್ನು ಆಚರಿಸಲಾಗುತ್ತಿದೆ.   ವಿದ್ಯಾರ್ಥಿಗಳು ಕೇವಲ ಕಲಿಕೆಯ ಜೊತೆಯಲ್ಲಿ ಕ್ರೀಡೆ ಹಾಗೂ ಸಾಂಸ್ಕೃತಿಕ ಚಟುವಟಿಕೆಯಲ್ಲಿಯೂ ತೊಡಗಿಸಿಕೊಳ್ಳಲು ಶಾಲೆಯಲ್ಲಿ ನಿರಂತರ ಕಾರ್ಯಚಟುವಟಿಕೆಗಳನ್ನು ಆಯೋಜಿಸಲಾಗುತ್ತಿದೆ. ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ನಿರಂತರ ಕಾರ್ಯಕ್ರಮ ಶಾಲೆಯಲ್ಲಿ ನಡೆಯುತ್ತಿದೆ ಎಂದರು.

    ಹಿರಿಯ ಶಿಕ್ಷಕ ಭಾಸ್ಕರ ನಾಯ್ಕ್ ಶಾಲೆಯ ಬಗ್ಗೆ ಹಿನ್ನೋಟ ನೀಡಿ, ತೀರಾ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ವ್ಯಾಸಂಗ ಮಾಡುತ್ತಿರುವ ಈ ಶಾಲೆಯಲ್ಲಿ  ೨೦೧೬ರಿಂದ ವಾರ್ಷಿಕ ಕ್ರೀಡಾಕೂಟ, ವಾರ್ಷಿಕೋತ್ಸವ ನಡೆಸಿಕೊಂಡು ಬರಲಾಗುತ್ತಿದೆ. ಎಸ್.ಡಿ.ಎಂ.ಸಿ, ದಾನಿಗಳ ಸಹಕಾರ, ಶಿಕ್ಷಕವೃಂದ ತಂಡವಾಗಿ ಕಾರ್ಯನಿರ್ವಹಿಸುತ್ತಿದೆ. ಈ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟ, ವಿಭಾಗ ಮಟ್ಟವನ್ನು ಪ್ರತಿನಿಧಿಸಿದ್ದಾರೆ ಎಂದರು.

    ಇದೇ ಸಂದರ್ಭದಲ್ಲಿ ಲಾಲ್ ಬಹದ್ದೂರ್ ಶಾಸ್ತ್ರೀಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಲಾಯಿತು. ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ ಪೂಜಾರಿ ಸ್ವಾಗತಿಸಿದರು. ಸಹ ಶಿಕ್ಷಕ ಉದಯ ವಂದಿಸಿದರು. ಶಿಕ್ಷಕ ಸತೀಶ ದೇವಾಡಿಗ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಕರಾದ ಗಿರೀಶ, ಗೀತಪ್ರಿಯ, ಷೀಜಾ, ಸುಜಾತ, ಸೌಮ್ಯ ಕಾರ್ಯಕ್ರಮಕ್ಕೆ ಸಹಕರಿಸಿದರು.

    ಪಥ ಸಂಚಲನದಲ್ಲಿ ಪ್ರಥಮ ಸ್ಥಾನ ಪಡೆದ ಪಿಂಕ್ ಹೌಸ್, ದ್ವಿತೀಯ ಸ್ಥಾನ ಪಡೆದ ಗ್ರೀನ್ ಹೌಸ್ ತಂಡಗಳಿಗೆ ಬಹುಮಾನ ವಿತರಿಸಲಾಯಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ

    20/11/2026

    ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ

    20/11/2026

    ಜೆಜೆಎಂ ಅವ್ಯವಹಾರದ ಕುರಿತು ಸಂಸದರು ಹಾಗೂ ಶಾಸಕರು ಮೌನ ಮುರಿಯಲಿ: ಕೆ. ವಿಕಾಸ್ ಹೆಗ್ಡೆ

    20/11/2026
    Leave A Reply Cancel Reply

    20 + 4 =

    Call us

    Click Here

    Call us

    Call us

    Call us
    Highest Viewed Recently
    • ಡಾ. ಬಿ.ಬಿ. ಹೆಗ್ಡೆ ಕಾಲೇಜಿನ ಕಿರಣ್ ಕುಮಾರ್ ಎನ್. ಅವರಿಗೆ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್ ಸ್ವಯಂಸೇವಕ ಪ್ರಶಸ್ತಿ
    • ಬ್ರಹ್ಮಾವರ ರುಡ್‌ಸೆಟ್ ಸಂಸ್ಥೆಯಲ್ಲಿ ಕೆನರಾ ಬ್ಯಾಂಕ್ ಸಂಸ್ಥಾಪಕರ ಜನ್ಮದಿನಾಚರಣೆ
    • ಜೆಜೆಎಂ ಅವ್ಯವಹಾರದ ಕುರಿತು ಸಂಸದರು ಹಾಗೂ ಶಾಸಕರು ಮೌನ ಮುರಿಯಲಿ: ಕೆ. ವಿಕಾಸ್ ಹೆಗ್ಡೆ
    • ‘ಆವಿರ್ಭವ 2026–27’: ಮದರ್ ತೆರೆಸಾ ಶಿಕ್ಷಣ ಸಂಸ್ಥೆಯ ಪ್ರೌಢಶಾಲಾ – ಪಿಯು ವಿಭಾಗದ ವಾರ್ಷಿಕೋತ್ಸವ
    • ಸೆಳ್ಕೋಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ: ವಾರ್ಷಿಕ ಕ್ರೀಡಾಕೂಟ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.