ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ ಕಿರಣ್ ಕುಮಾರ್ ಎನ್. ಅವರು ಮಂಗಳೂರು ವಿಶ್ವವಿದ್ಯಾನಿಲಯವನ್ನು ಪ್ರತಿನಿಧಿಸಿ 2023-24ನೇ ಸಾಲಿನ ಕರ್ನಾಟಕ ರಾಜ್ಯದ ಅತ್ಯುತ್ತಮ ಎನ್.ಎಸ್.ಎಸ್. ಸ್ವಯಂಸೇವಕ ಪ್ರಶಸ್ತಿಯನ್ನು ಪಡೆದಿದ್ದಾರೆ.
ಹಿಂದೆ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಿ ಅತ್ಯುತ್ತಮ ಸಾಂಸ್ಕೃತಿಕ ಪ್ರತಿಭೆ ಎಂಬ ಮನ್ನಣೆ ಪಡೆದ ಇವರು ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ವಳಗೆರೆ ಗ್ರಾಮದ ಹಿನ್ಸೋಡಿಯ ನಾಗರಾಜ ಮತ್ತು ಲಕ್ಷ್ಮೀ ದಂಪತಿಯ ಪುತ್ರ.
ಇವರಿಗೆ ಕಾಲೇಜಿನ ಅಧ್ಯಕ್ಷ ಬಿ.ಎಮ್ . ಸುಕುಮಾರ್ ಶೆಟ್ಟಿ, ಪ್ರಾಂಶುಪಾಲ ಡಾ. ಕೆ. ಉಮೇಶ್ ಶೆಟ್ಟಿ, ಮಾರ್ಗದರ್ಶನ ನೀಡಿದ ಎನ್.ಎಸ್.ಎಸ್ ಕಾರ್ಯಕ್ರಮಾಧಿಕಾರಿಗಳಾದ ಡಾ. ಚೇತನ್ ಶೆಟ್ಟಿ ಕೋವಾಡಿ ಹಾಗೂ ದೀಪಾ ಪೂಜಾರಿ ಅಭಿನಂದನೆ ಸಲ್ಲಿಸಿದ್ದಾರೆ.












