ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಬೆಂಗಳೂರಿನ ಬಿಡದಿ ಸಮೀಪ ಸಂಭವಿಸಿದ ಬೈಕ್ಗಳ ಮುಖಾಮುಖಿ ಡಿಕ್ಕಿಯಲ್ಲಿ ಕೋಟ ಪಡುಕರೆ ನಿವಾಸಿ, ಹೋಟೆಲ್ ಉದ್ಯಮಿ ವಿಶ್ವನಾಥ ಎಚ್.(55) ಅವರು ಮೃತಪಟ್ಟಿದ್ದಾರೆ.
ಮಣೂರು- ಪಡುಕರೆಯ ಜಟ್ಟಿಗೇಶ್ವರ ದೈವಸ್ಥಾನದ ಸಮೀಪದ ನಿವಾಸಿಯಾಗಿದ್ದರು. ಬೆಂಗಳೂರಿನಲ್ಲಿ ಹೋಟೆಲ್ ಉದ್ಯಮ ನಡೆಸುತ್ತಿದ್ದ ಅವರು, ಇತ್ತೀಚೆಗೆ ಬೆಂಗಳೂರಿನ ಬಿಡದಿಯಲ್ಲಿ ಕರಾವಳಿ ಕಿಚನ್ ಹೆಸರಿನ ಹೋಟೆಲ್ ನಡೆಸುತ್ತಿದ್ದರು.
ಗುರುವಾರ ರಾತ್ರಿ ಹೋಟೆಲ್ನ ದೈನಂದಿನ ವ್ಯವಹಾರ ಮುಗಿಸಿ ಮನೆಗೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿತ್ತು. ಅವರು ಚಲಾಯಿಸುತ್ತಿದ್ದ ಬೈಕ್ಗೆ ಮತ್ತೊಂದು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದ ಪರಿಣಾಮ ವಿಶ್ವನಾಥ್ ಅವರು ಗಂಭೀರವಾಗಿ ಗಾಯಗೊಂಡಿದ್ದರು. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ.
ಮೃತರು ಪತ್ನಿಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಇದ್ದಾರೆ.














