ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಕೋಟೇಶ್ವರದ ಎಂ. ವರದರಾಜ ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ನೂತನ ಗ್ರೇಡ್ – 1 ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಎ. ಬಳಸು ಅವರು ನೇಮಕಗೊಂಡಿದ್ದಾರೆ.
ಸುಬ್ರಹ್ಮಣ್ಯ ಅವರು ಈ ಹಿಂದೆ ಕೊಟೇಶ್ವರದ ಹಾಗೂ ಕೋಟ ಪಡುಕೆರೆ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಹಾಯಕ ಪ್ರಾದ್ಯಾಪಕ ಹಾಗೂ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು. ‘ಖಜಾನೆ ಹೊಣೆಗಾರಿಕೆ ಮತ್ತು ಆಯವ್ಯಯ ನಿರ್ವಹಣೆ ಮಸೂದೆ – 2003 ನಂತರದಲ್ಲಿ ಕೇಂದ್ರ ಸರಕಾರದ ಖಜಾನೆ ನೀತಿ ಪರಿಪಾಲನೆ: ಒಂದು ಸಮಗ್ರ ಅಧ್ಯಯನ’ ಎಂಬ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿಎಚ್ಡಿ ಪದವಿ ಪಡೆದಿದ್ದರು.
ಸುಬ್ರಹ್ಮಣ್ಯ ಅವರು ಬೈಂದೂರು ಪಡುವರಿಯ ಅಪ್ಪಯ್ಯನ ಮನೆ ದಿ. ವೆಂಕಟರಮಣ ಹಾಗೂ ಲಕ್ಷ್ಮೀ ಅವರ ಪುತ್ರ.











