Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಪುಟಾಣಿ ಮಕ್ಕಳ ವಾರ್ಷಿಕ ಕ್ರೀಡಾಕೂಟ ಸಂಭ್ರಮ
    ಊರ್ಮನೆ ಸಮಾಚಾರ

    ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಪುಟಾಣಿ ಮಕ್ಕಳ ವಾರ್ಷಿಕ ಕ್ರೀಡಾಕೂಟ ಸಂಭ್ರಮ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ಶಿಕ್ಷಣ ಕ್ಷೇತ್ರದಲ್ಲೇ ಮೊಟ್ಟಮೊದಲ ಬಾರಿಗೆ ಪ್ರೀ ಕೆಜಿ, ಎಲ್‌ಕೆಜಿ ಮತ್ತು ಯುಕೆಜಿ ವಿದ್ಯಾರ್ಥಿಗಳ ವಾರ್ಷಿಕ ಕ್ರೀಡಾಕೂಟವು ಸಂಭ್ರಮದಿಂದ ಜರುಗಿತು.

    Call us

    Click Here

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಗಣೇಶ ಮೊಗವೀರ ಅವರು ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ, “ಮಕ್ಕಳ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತವೆ. ಚಿಕ್ಕ ವಯಸ್ಸಿನಿಂದಲೇ ಮಕ್ಕಳಲ್ಲಿ ಕ್ರೀಡಾಸಕ್ತಿ, ಆತ್ಮವಿಶ್ವಾಸ, ಶಿಸ್ತು, ಸಮಯಪ್ರಜ್ಞೆ ಹಾಗೂ ಸ್ಪರ್ಧಾ ಮನೋಭಾವವನ್ನು ಬೆಳೆಸುವುದು ಅಗತ್ಯ. ಸೋಲು-ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ. ಇಂತಹ ಕ್ರೀಡಾಕೂಟಗಳು ಮಕ್ಕಳ ಪ್ರತಿಭೆಯನ್ನು ಹೊರತರುವುದರ ಜೊತೆಗೆ ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಸಹಕಾರಿಯಾಗುತ್ತವೆ” ಎಂದು ನುಡಿದರು.

    ಜನತಾ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿಗಳಾದ ಶ್ಯಾಮಲಾ ಗಣೇಶ್, ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲಿನ ಮುಖ್ಯ ಶಿಕ್ಷಕಿಯಾದ ದೀಪಿಕಾ ಆಚಾರ್ಯ, ದೈಹಿಕ ಶಿಕ್ಷಣ ಶಿಕ್ಷಕರು, ಶಿಕ್ಷಕ- ಶಿಕ್ಷಕೇತರ ಸಿಬ್ಬಂದಿಗಳು ಹಾಗೂ ಪೋಷಕರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಸಹಶಿಕ್ಷಕಿ ಅನ್ನಪೂರ್ಣ ಕಾರ್ಯಕ್ರಮ ನಿರ್ವಹಿಸಿದರು. ಸಹಶಿಕ್ಷಕಿ ಫಿಲೋಮಿನ ಸ್ವಾಗತಿಸಿದರೆ, ಸಹಶಿಕ್ಷಕಿ ಜ್ಯೋತಿ ವಂದಿಸಿದರು.

    ಉದ್ಘಾಟನಾ ಸಮಾರಂಭದ ನಂತರ ಪುಟಾಣಿ ಮಕ್ಕಳಿಗಾಗಿ ಜಿಗ್‌ಜ್ಯಾಗ್ ರೇಸ್, ಬಾಲ್ ಕಲೆಕ್ಟಿಂಗ್ ಗೇಮ್, ಸಾಫ್ಟ್ ಬಾಲ್ ಥ್ರೋ, 50 ಮೀಟರ್ ಓಟ ಮತ್ತು ಅಡೆತಡೆ ಓಟ ಸೇರಿದಂತೆ ವಿವಿಧ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

    ವಿಶೇಷವಾಗಿ ಪುಟಾಣಿ ಮಕ್ಕಳಿಗಾಗಿಯೇ ಏರ್ಪಡಿಸಲಾಗಿದ್ದ ಈ ಕ್ರೀಡಾಕೂಟದಲ್ಲಿ ಮಕ್ಕಳು ಸಂತಸ-ಸಡಗರದಿಂದ ಪಾಲ್ಗೊಂಡು, ಪ್ರತಿ ಕ್ಷಣವನ್ನೂ ಸಂಭ್ರಮಿಸಿದರು. ಕ್ರೀಡೆಯಲ್ಲಿ ಮಕ್ಕಳು ತೋರಿದ ಸಹಭಾಗಿತ್ವ  ನೆರೆದಿದ್ದ ಪೋಷಕರು, ಶಿಕ್ಷಕರು ಮತ್ತು ಪುಟಾಣಿಗಳಲ್ಲಿ ಸಂತಸ ಮೂಡಿಸಿದವು.

    Click here

    Click here

    Call us

    ಮಕ್ಕಳಲ್ಲಿ ಕ್ರೀಡಾಸಕ್ತಿ ಮತ್ತು ಆತ್ಮವಿಶ್ವಾಸವನ್ನು ಹೆಚ್ಚಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕ್ರೀಡಾಕೂಟವು ಯಶಸ್ವಿಯಾಗಿ ಸಂಪನ್ನಗೊಂಡಿತು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಗಂಗೊಳ್ಳಿ: ಉಚಿತ ಕ್ಯಾನ್ಸರ್, ಕಣ್ಣಿನ ಹಾಗೂ ಆರೋಗ್ಯ ತಪಾಸಣಾ ಶಿಬಿರ

    21/11/2026

    ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ

    21/11/2026

    ಡಾ. ಬಿ.ಬಿ. ಹೆಗ್ಡೆ ಕಾಲೇಜು: ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ

    21/11/2026
    Leave A Reply Cancel Reply

    two + seven =

    Call us

    Click Here

    Call us

    Call us

    Call us
    Highest Viewed Recently
    • ಗಂಗೊಳ್ಳಿ: ಉಚಿತ ಕ್ಯಾನ್ಸರ್, ಕಣ್ಣಿನ ಹಾಗೂ ಆರೋಗ್ಯ ತಪಾಸಣಾ ಶಿಬಿರ
    • ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಪುಟಾಣಿ ಮಕ್ಕಳ ವಾರ್ಷಿಕ ಕ್ರೀಡಾಕೂಟ ಸಂಭ್ರಮ
    • ಹಟ್ಟಿಅಂಗಡಿ ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಮತ್ತು ಕನ್ನಡ ರಾಜ್ಯೋತ್ಸವ
    • ಡಾ. ಬಿ.ಬಿ. ಹೆಗ್ಡೆ ಕಾಲೇಜು: ಮಹಿಳಾ ಆರೋಗ್ಯ ಮತ್ತು ನೈರ್ಮಲ್ಯ ಕುರಿತು ಜಾಗೃತಿ ಕಾರ್ಯಕ್ರಮ
    • ಕುಂದಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು: ನೂತನ ಪ್ರಾಂಶುಪಾಲರಾಗಿ ಡಾ. ಸುಬ್ರಹ್ಮಣ್ಯ ಎ. ನೇಮಕ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.