ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಇಲ್ಲಿನ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಸಂಸ್ಥೆಯ ಕಾರ್ಯದರ್ಶಿಯವರಾದ ಕೆ. ರಾಧಾಕೃಷ್ಣ ಶೆಣೈ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ನಿಟ್ಟೆ ಎನ್.ಎಮ್.ಎ.ಎಮ್ ಇಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಕೆ. ಕೀರ್ತಿ ಶೆಟ್ಟಿ ಅವರು ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿ, ಕ್ರೀಡಾಜ್ಯೋತಿಯನ್ನು ಬೆಳಗಿಸುತ್ತಾ ವಿದ್ಯಾರ್ಥಿಗಳಲ್ಲಿ ಸ್ಪರ್ಧಾತ್ಮಕ ಮನೋಭಾವವಿರಬೇಕು, ಸೋಲೇ ಗೆಲುವಿನ ಸೋಪಾನ ಎಂಬ ನುಡಿಯಂತೆ ಪ್ರತಿಯೊಬ್ಬರು ಸ್ಪರ್ಧೆಯಲ್ಲಿ ಭಾಗವಹಿಸಬೇಕು. ಸೋಲು ಮತ್ತು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ನುಡಿಯುತ್ತಾ ವಿದ್ಯಾರ್ಥಿಗಳಿಗೆ ಕ್ರೀಡಾಸ್ಪರ್ಧೆಯಲ್ಲಿ ಭಾಗವಹಿಸುವಂತೆ ಪ್ರೆರೇಪಿಸಿದರು.
ಶ್ರೀ ವೆಂಕಟರಮಣ ಪದವಿಪೂರ್ವಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪಪ್ರಾಂಶುಪಾಲರಾದ ಸುಜಯ್ ಕೋಟೆಗಾರ್, ಪ್ರೌಢಶಾಲಾ ಮುಖ್ಯೋಪಾಧ್ಯಾಯರಾದ ಕೃಷ್ಣ ಅಡಿಗ, ಪ್ರಾಥಮಿಕ ವಿಭಾಗ ಮುಖ್ಯೋಪಾಧ್ಯಾಯಿನಿ ರೇಷ್ಮಾ ಡಿಸೋಜಾ ಮತ್ತು ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯಿನಿ ಪ್ರಮೀಳಾ ಡಿಸೋಜಾ ಅವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಮಾರಂಭದಲ್ಲಿ ಶಾಲೆಯ ವಿದ್ಯಾರ್ಥಿಗಳು, ದೈಹಿಕ ಶಿಕ್ಷಣ ಶಿಕ್ಷಕರು, ಬೋಧಕ, ಬೋಧಕೇತರ ಸಿಬ್ಬಂದಿ ಹಾಗೂ ಪೋಷಕರು ಭಾಗವಹಿಸಿದ್ದರು. ವಿದ್ಯಾರ್ಥಿನಿ ಜೀವಿಕಾ ಕಾರ್ಯಕ್ರಮ ನಿರೂಪಿಸಿ, ರಿಶಿಕಾ ನಾವಡ ಸ್ವಾಗತಿಸಿ, ಸನ್ಮಯ್ ನಂದೀಶ್ ದೇವಾಡಿಗ ವಂದಿಸಿದರು.
ಮುಖ್ಯ ಅತಿಥಿಗಳ ಸಮ್ಮುಖದಲ್ಲಿ ಮಕ್ಕಳು ನಡೆಸಿದ ದೈಹಿಕ ಕಸರತ್ತು ಎಲ್ಲರ ಮನಸೂರೆಗೊಂಡಿತು.














