ಕುಂದಾಪ್ರ ಡಾಟ್ ಕಾಂ ಸುದ್ದಿ.
ಕೋಟ: ಧಾರವಾಡದ ಜೆಎಸ್ಎಸ್ ವಿದ್ಯಾಸಂಸ್ಥೆ ವಿದ್ಯಾಗಿರಿಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ವತಿಯಿಂದ ನಡೆದ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಕೋಟದ ವಿವೇಕ ಪ.ಪೂ. ಕಾಲೇಜಿನ ವಿದ್ಯಾರ್ಥಿ ದೃಶ್ಯ ಆರ್., 97 ಕೆ.ಜಿ ವಿಭಾಗದ ಕುಸ್ತಿ ಸ್ಪರ್ಧೆಯಲ್ಲಿ ರಾಜ್ಯಮಟ್ಟದಲ್ಲಿ ದ್ವಿತೀಯ ಸ್ಥಾನವನ್ನು ಗಳಿಸಿದರು.
ವಿದ್ಯಾರ್ಥಿಯ ಸಾಧನೆಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ ಹಾಗೂ ಕಾಲೇಜಿನ ಪ್ರಾಂಶುಪಾಲ ಉಪನ್ಯಾಸಕ ವೃಂದ ಅಭಿನಂದಿಸಿದೆ.











