ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ಕೋಟೇಶ್ವರ ಕಟ್ಕೆರೆಯಲ್ಲಿ ಕಾರು ಹಾಗೂ ಬೈಕಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಸೋಮವಾರ ಸಂಜೆ ನಡೆದಿದೆ. ಹೊಸನಗರ ತಾಲೂಕಿನ ಹುಂಚದ ಯುವಕ ಹರ್ಷ (35) ಮೃತ ದುರ್ದೈವಿ.
ಹರ್ಷ ಹಾಗೂ ಸ್ನೇಹಿತರು ತನ್ನ ಕುಟುಂಬಿಕರ ಮದುವೆ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಮಲಶಿಲೆಗೆ ಬಂದಿದ್ದರು. ಮದುವೆ ಮುಗಿಸಿ ಕೋಟೇಶ್ವರಕ್ಕೆ ತೆರಳಿ ಹಿಂದಿರುಗುವಾಗ ಈ ಘಟನೆ ನಡೆದಿದೆ.ಕೋಟೇಶ್ವರ ಹಾಲಾಡಿ ರಸ್ತೆಯ ಕಟ್ಕರೆ ಸಮೀಪ ತೆರಳುತ್ತಿದ್ದಾಗ ಓವರ್‌ಟೇಕ್ ಮಾಡುವ ಬರದಲ್ಲಿ ಮೊದಲು ಮುಂಭಾಗದಲ್ಲಿದ್ದ ಕಾರಿಗೆ ಬೈಕ್ ಡಿಕ್ಕಿಯಾಗಿದೆ. ಬಳಿಕ ಓವರ್‌ಟೇಕ್ ಮಾಡಿ ಅಭಿಮುಖವಾಗಿ ಬರುತ್ತಿದ್ದ ಕಾರಿಗೆ ಬೈಕ್ ಡಿಕ್ಕಿಹೊಡೆದಿದೆ ಎನ್ನಲಾಗಿದೆ. ಕಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಕೆಳಕ್ಕೆ ಬಿದ್ದಿದ್ದು, ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.
ಸ್ಥಳಕ್ಕೆ ಕುಂದಾಪುರ ಶಾಸಕ ಕಿರಣ್ ಕೊಡ್ಗಿ ಭೇಟಿ ನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಕುಂದಾಪುರ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಜಯರಾಮ ಡಿ. ಗೌಡ, ಸಂಚಾರ ಠಾಣೆಯ ಅನೂಪ್ ನಾಯಕ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಟಾಫ್ರಿಕ್ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವುಮಾಡಿಕೊಟ್ಟರು. ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











