ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕರ್ನಾಟಕ ರಾಜ್ಯ ಅರ್ಹತಾ ಪರೀಕ್ಷೆ (KSET) – 2026ರಲ್ಲಿ ಇಲ್ಲಿನ ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಿದ್ಯಾರ್ಥಿನಿ ರಶ್ಮಿ ಅವರು ವಾಣಿಜ್ಯ (Commerce) ವಿಷಯದಲ್ಲಿ ಕರ್ನಾಟಕ ರಾಜ್ಯಕ್ಕೆ ಐದನೇ ಅತ್ಯಧಿಕ ಅಂಕಗಳನ್ನು ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದಾರೆ. ಅಷ್ಟೇ ಅಲ್ಲದೇ, ಇವರು ಜೂನ್ 2026ರಲ್ಲಿ ನಡೆದ UGC NTA NET ಪರೀಕ್ಷೆಯಲ್ಲಿ ಕೂಡ ತೇರ್ಗಡೆ ಹೊಂದಿರುತ್ತಾರೆ.
ಜೊತೆಗೆ ಕಾಲೇಜಿನ ಒಟ್ಟು 6 ವಿದ್ಯಾರ್ಥಿಗಳು KSET ಪರೀಕ್ಷೆಯಲ್ಲಿ ತೇರ್ಗಡೆಯಾಗಿರುತ್ತಾರೆ. ವಿದ್ಯಾ, ಪ್ರತಿಮಾ, ವಿದ್ಯಾವತಿ, ಪ್ರತಿಮಾ ಹಾಗೂ ರಕ್ಷಿತಾ ಕ್ರಮವಾಗಿ ರಾಜ್ಯಕ್ಕೆ 14, 21, 23, 25 ಹಾಗೂ 27ನೇ ಅತ್ಯಧಿಕ ಅಂಕಗಳನ್ನು ಗಳಿಸಿ ಕಾಲೇಜಿನ ಇತರ ವಿದ್ಯಾರ್ಥಿಗಳಿಗೂ ಸ್ಫೂರ್ತಿಯಾಗಿದ್ದು, ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದೆ.
ಇದು ಕಾಲೇಜಿನ ಶೈಕ್ಷಣಿಕ ಗುಣಮಟ್ಟ ಹಾಗೂ ವಿದ್ಯಾರ್ಥಿಗಳ ಪರಿಶ್ರಮಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಇವರ ಈ ಯಶಸ್ಸಿಗೆ ಕಾಲೇಜಿನ ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿ, ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಮುಂದಿನ ಶೈಕ್ಷಣಿಕ ಮತ್ತು ವೃತ್ತಿ ಜೀವನದಲ್ಲಿ ಅವರು ಇನ್ನಷ್ಟು ಉನ್ನತ ಸಾಧನೆಗಳನ್ನು ಮಾಡಲಿ ಎಂದು ಶುಭ ಹಾರೈಸಿದ್ದಾರೆ.











