ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಓದು ಬಳಗ, ಉಡುಪಿ ವತಿಯಿಂದ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ ‘ವಿದ್ಯಾರ್ಥಿ ಕವಿಗೋಷ್ಠಿ’ ಕಾರ್ಯಕ್ರಮಕ್ಕೆ ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನ ತೃತೀಯ ಬಿ.ಸಿ.ಎ. ವಿದ್ಯಾರ್ಥಿ ವಿಕಾಸ್ ಎಸ್. ಆರ್. ಅವರ ಕವನ ಆಯ್ಕೆಯಾಗಿದೆ.
ವಿವಿಧ ಕಾಲೇಜುಗಳ ವಿದ್ಯಾರ್ಥಿಗಳಿಂದ ಆಹ್ವಾನಿಸಲಾಗಿದ್ದ ಕವನಗಳಲ್ಲಿ ವಿಕಾಸ್ ಅವರ ಕವನ ಆಯ್ಕೆಯಾಗಿರುವುದು ಕಾಲೇಜಿಗೆ ಹೆಮ್ಮೆಯ ವಿಷಯವಾಗಿದೆ. ವಿಕಾಸ್ ಎಸ್. ಆರ್. ಅವರ ಈ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಾಹಿತ್ಯ ಸಂಘದ ವತಿಯಿಂದ ಅಭಿನಂದನೆ ಸಲ್ಲಿಸಲಾಗಿದೆ.











