Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ರಿಜ್ವಾನ್ ಅರ್ಷದ್
    ಉಡುಪಿ ಜಿಲ್ಲೆ

    ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ರಿಜ್ವಾನ್ ಅರ್ಷದ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಪ್ರಜಾಸೇವಾ ಆಂದೋಲನ ಸಭೆಗಳು ಸರಕಾರದ ವಿನೂತನ ಕಾರ್ಯಕ್ರಮವಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳು, ಜನಸಾಮಾನ್ಯರ ಸಮಸ್ಯೆಗಳನ್ನು ಅವರುಗಳ ಮನೆ ಬಾಗಿಲಿನಲ್ಲಿಯೇ ಹೋಗಿ ಆಲಿಸಿ, ನಿಗದಿತ ಸಮಯದಲ್ಲಿ ತ್ವರಿತಗತಿಯಲ್ಲಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸುವುದು ಪ್ರಜಾಸೇವಾ ಆಂದೋಲನದ ಆಶಯವಾಗಿದೆ ಎಂದು ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಹೇಳಿದರು.

    Call us

    Click Here

    ಅವರು ಮಂಗಳವಾರ ಕಾರ್ಕಳದ ಮಂಜುನಾಥ್ ಪೈ ಸಭಾಭವನದಲ್ಲಿ ನಡೆದ ತಾಲೂಕು ಮಟ್ಟದ ಪ್ರಜಾಸೇವಾ ಆಂದೋಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜನಸಾಮಾನ್ಯರ ಸಣ್ಣ-ಪುಟ್ಟ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸಿ, ಅವರುಗಳು ಸರಕಾರಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಿ, ಆ ಮೂಲಕ ಅವರುಗಳ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ವ್ಯವಸ್ಥೆಯನ್ನು ಪ್ರಜಾಸೇವಾ ಆಂದೋಲನ ಸಭೆಗಳ ಮೂಲಕ ಸರಕಾರ ಮಾಡುತ್ತಿದೆ ಎಂದರು.

    ಪ್ರಜಾಸೇವಾ ಆಂದೋಲನ ಸಭೆಗಳಲ್ಲಿ ಸ್ವೀಕೃತವಾಗುವ ಎಲ್ಲಾ ಅಹವಾಲುಗಳನ್ನು ಐ.ಪಿ.ಜಿ.ಆರ್.ಎಸ್ ಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಇದರಿಂದ ಅಹವಾಲುಗಳ ಸ್ಥಿತಿಗತಿಗಳ ಬಗ್ಗೆ ಟ್ರಾಂಯಕ್ ಮಾಡಲು ಅನುಕೂಲವಾಗಲಿದೆ. ಇದು ಜನರಿಗಾಗಿ, ಜನರಿಗೋಸ್ಕರ ಆಯೋಜಿಸಿರುವ ಕಾರ್ಯಕ್ರಮವಾಗಿದೆ. ಸರಕಾರದ ಇಡೀ ಆಡಳಿತ ವ್ಯವಸ್ಥೆ ಜನರ ಅಹವಾಲುಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ, ನಿಗಧಿತ ಕಾಲಾವಧಿಯಲ್ಲಿ ಅವರುಗಳ ಸಮಸ್ಯೆಗೆ ಪರಿಹಾರ ನೀಡಲಿದೆ ಎಂದರು.

    ಜಿಲ್ಲೆಯಲ್ಲಿ ಗ್ರಾಮೀಣ ಭಾಗದ ಜನರಿಗೆ 9/11 ಸಿಗದೇ ತೊಂದರೆಗಳು ಉಂಟಾಗುತ್ತಿವೆ ಎಂದು ಕೇಳಿ ಬರುತ್ತಿವೆ. ಈಗಾಗಲೇ ಸರಕಾರದ ಮಟ್ಟದಲ್ಲಿ ಆದೇಶ ಆಗಿದೆ. ಆದರೆ ಸಾಫ್ಟ್ವೇರ್‌ನ ಇಂಟಿಗ್ರೇಷನ್ ಕಾರ್ಯ ಚಾಲನೆಯಲ್ಲಿದ್ದು, ಇದು ಪೂರ್ಣಗೊಂಡ ನಂತರ ಸಮಸ್ಯೆ ಶೀಘ್ರದಲ್ಲಿಯೇ ಬಗೆಹರಿಯಲಿದೆ ಎಂದರು.

    ಕಾರ್ಕಳ ಶಾಸಕ ವಿ ಸುನಿಲ್ ಕುಮಾರ್ ಮಾತನಾಡಿ, ಪ್ರಜಾಸೇವಾ ಆಂದೋಲನ ಸಭೆಗಳು ಕಳೆದ ಎರಡು ತಿಂಗಳಿನಿಂದ ಪ್ರತೀ ಶನಿವಾರ ನಡೆಯುತ್ತಿದೆ. ಆಡಳಿತ ಜನರ ಬಳಿ ಹೋಗಬೇಕು ಎಂಬ ಕಾರಣಕ್ಕೆ ಎಲ್ಲಾ ಹಂತದ ಅಧಿಕಾರಿಗಳನ್ನು ಒಂಡೆದೆ ಸೇರಿಸಿ ಜನರ ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಬಗೆಹರಿಸುವ ಕೆಲಸ ಮಾಡುತ್ತಿದೆ ಎಂದರು.

    Click here

    Click here

    Call us

    ಜಿಲ್ಲೆಯಲ್ಲಿ 9/11 ಸಮಸ್ಯೆ ಒಂದು ದೊಡ್ಡ ಸಮಸ್ಯೆ ತೀವ್ರಗೊಂಡಿದೆ. ಸರಕಾರದಿಂದ ಆದೇಶವಿದ್ದರೂ ಸಹ ಸುತ್ತೋಲೆಗಳು ಇನ್ನೂ ಜಿಲ್ಲೆಗೆ ಬಂದಿಲ್ಲ. 9/11 ಆದೇಶಗಳಿಗೆ ಸಂಬಂಧಿಸಿದ ಪ್ರಕ್ರಿಯೆಗಳು ವಿಳಂಬವಾಗುತ್ತಿವೆ. ಸಂಬಂಧಪಟ್ಟ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿ, ಈ ಸಮಸ್ಯೆಯನ್ನು ಶೀಘ್ರ ಬಗೆಹರಿಸಬೇಕು ಎಂದು ಸಚಿವರ ಗಮನ ಸೆಳೆದರು.

    ಮಹಾಮಸ್ತಕಾಭಿಷೇಕದ ಹಿನ್ನೆಲೆಯಲ್ಲಿ ಅಗತ್ಯವಿರುವ ಎಲ್ಲ ಮೂಲಸೌಕರ್ಯಗಳನ್ನು ಒದಗಿಸಬೇಕು. ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿಯೂ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡುವ ಅಗತ್ಯವಿದೆ. ಈ ಕುರಿತು ಬೆಳಗಾವಿ ಅಧಿವೇಶನದಲ್ಲಿ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದು ಎಂದರು.

    ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಪ್ರಾಸ್ತಾವಿಕವಾಗಿ ಮಾತನಾಡಿ, ಸೆಪ್ಟಂಬರ್ ಮಾಹೆಯಿಂದ ಪ್ರಜಾಸೇವಾ ಆಂದೋಲನ ಸಭೆಗಳನ್ನು ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ಸಾರ್ವಜನಿಕರ ಸಮಸ್ಯೆಗಳನ್ನು ಕಾಲಮಿತಿಯಲ್ಲಿ ಬಗೆಹರಿಸಲು ಒತ್ತು ನೀಡುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ಸಾರ್ವಜನಿಕರು ಒಂದು ಕಚೇರಿಯಿಂದ ಇನ್ನೊಂದು ಕಛೇರಿಗೆ ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ಅಲೆದಾಡುತ್ತಾರೆ. ಇದನ್ನು ತಪ್ಪಿಸಿ, ಸರಕಾರವೇ ಜನಸಾಮಾನ್ಯರ ಮನೆ ಬಾಗಿಲಿಗೆ ತಲುಪಿ ಅವರುಗಳ ಸಮಸ್ಯೆ/ ಅಹವಾಲುಗಳಿಗೆ ಆದಷ್ಟು ಸ್ಥಳದಲ್ಲಿಯೇ ಪರಿಹಾರ ನೀಡುವುದು ಈ ಸಭೆಯ ಉದ್ದೇಶವಾಗಿದೆ ಎಂದರು.

    ಸೆಪ್ಟಂಬರ್ ನಿಂದ ಈವರೆಗೆ ಸುಮಾರು 3,308 ಕ್ಕೂ ಅರ್ಜಿಗಳು ಸಭೆಗಳಲ್ಲಿ ಸ್ವೀಕೃತವಾಗಿದ್ದು, ಅದರಲ್ಲಿ 1898 ವಿಲೇವಾರಿ ಮಾಡಲಾಗಿದೆ. ಬಾಕಿ ಉಳಿದ ಅರ್ಜಿಗಳಲ್ಲಿ ಸುಮಾರು 971 ರಷ್ಟು ಅರ್ಜಿಗಳಿಗೆ ಅಧಿಕಾರಿಗಳು ಸಮಂಜಸ ಪರಿಹಾರ ನೀಡದಿರುವುದರಿಂದ ವಾಪಾಸು ಹಾಕಲಾಗಿದೆ ಎಂದ ಅವರು, ಸಾರ್ವಜನಿಕರ ಅಹವಾಲುಗಳಿಗೆ ಗುಣನಾತ್ಮಕವಾಗಿ ಸ್ಫಂದಿಸುವುದು ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದ ಅವರು, ಪ್ರಜಾಸೇವೆಯ ಪ್ರತಿಯೊಂದು ಅಹವಾಲುಗಳನ್ನು ಈಗ ಸಕಾಲದ ಅಡಿಯಲ್ಲಿ ತರಲಾಗಿದೆ. ಸಕಾಲದ ಅಡಿಯಲ್ಲಿ ನಿಗಧಿತ ಅವಧಿಯೊಳಗೆ ಅಹವಾಲುಗಳಿಗೆ ಉತ್ತರ ನೀಡದಿದ್ದಲ್ಲಿ ಅಧಿಕಾರಿಗಳಿಗೆ ದಂಡ ವಿಧಿಸುವ ಸಾಧ್ಯತೆ ಇದೆ. ಸರಕಾರವೇ ಸಾರ್ವಜನಿಕರ ಬಳಿಗೆ ಬಂದು ಸಮಸ್ಯೆಗಳಿಗೆ ಸ್ಪಂದಿಸುವ ಈ ವ್ಯವಸ್ಥೆಯಲ್ಲಿ ಅಧಿಕಾರಿಗಳ ಸೇವಾ ಮನೋಭಾವ ಮತ್ತು ತ್ವರಿತ ಸ್ಪಂದನೆ ಮುಖ್ಯವಾಗಿದೆ. ಜನರ ಸಮಸ್ಯೆಗಳಿಗೆ ಆದ್ಯತೆ ನೀಡಿ ಗುಣನಾತ್ಮಕ ಹಾಗೂ ಸಕಾರಾತ್ಮಕ ಪರಿಹಾರ ನೀಡಬೇಕು ಎಂದು ಅಧಿಕಾರಿಗಳಿಗೆ ಕರೆ ನೀಡಿದರು.

    ಸಭೆಯಲ್ಲಿ ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳಿಗೆ ಸಂಬಂಧಿಸಿದಂತೆ 116 ಕ್ಕೂ ಹೆಚ್ಚು ಅರ್ಜಿಗಳು ಸ್ವೀಕೃತವಾಗಿದ್ದವು.

    ಸಭೆಯಲ್ಲಿ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಕರಾವಳಿ ಅಭಿವೃದ್ಧಿಯ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಕಾರ್ಕಳ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಜಿತ್ ಹೆಗ್ಡೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಡಿ.ಎಫ್.ಓ ರುಥ್ರೇನ್ ಪಿ, ಕುದುರೆಮುಖ ವಲಯ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ, ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಶಾಸ್ರ್ತೀಯ ಶಿಸ್ತು ಜಾನಪದ ಸ್ವಾತಂತ್ರ್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಸಾಮಗ

    21/11/2026

    ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ: ಅರ್ಜಿ ಆಹ್ವಾನ

    21/11/2026

    ಭಾರತ್ ಜೋಡೊ ಯುವ ಸಂಘ ಸ್ಥಾಪಿಸಿ, ಯುವಜನರನ್ನು ಸಬಲೀಕರಣಗೊಳಿಸಿ: ಜಿಲ್ಲಾಧಿಕಾರಿ

    20/11/2026
    Leave A Reply Cancel Reply

    10 − three =

    Call us

    Click Here

    Call us

    Call us

    Call us
    Highest Viewed Recently
    • ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ರಿಜ್ವಾನ್ ಅರ್ಷದ್
    • ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಸಂಭ್ರಮದ ದೀಪಾವಳಿ ಹಾಗೂ ತುಳಸಿ ಪೂಜೆ ಆಚರಣೆ
    • ಕೊಡಿ ಹಬ್ಬ: ಕೋಟೇಶ್ವರ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ಮನ್ಮಹಾರಥೋತ್ಸವ ಸಂಪನ್ನ
    • ಉಡುಪಿ ವಿದ್ಯಾರ್ಥಿ ಕವಿಗೋಷ್ಠಿಗೆ ಐಎಂಜೆಐಎಸ್‌ಸಿ ವಿದ್ಯಾರ್ಥಿ ವಿಕಾಸ್‌ ಎಸ್.ಆರ್. ಕವನ ಆಯ್ಕೆ
    • ಶಿರೂರು: ಜಿ.ಎಸ್‌.ಬಿ ಸಮುದಾಯದ ವಾರ್ಷಿಕ ವನಭೋಜನ ಕಾರ್ಯಕ್ರಮ ಸಂಪನ್ನ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.