Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಗುಣಮಟ್ಟದೊಂದಿಗೆ ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ರಿಜ್ವಾನ್ ಅರ್ಷದ್
    ಉಡುಪಿ ಜಿಲ್ಲೆ

    ಗುಣಮಟ್ಟದೊಂದಿಗೆ ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ರಿಜ್ವಾನ್ ಅರ್ಷದ್

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಉಡುಪಿ:
    ಬಜಗೋಳಿಯ ತೆಂಕಬೆಟ್ಟು ರಾಜ್ಯ ಹೆದ್ದಾರಿ ರಸ್ತೆಯ 5 ಕೋಟಿ ರೂ. ವೆಚ್ಚದಲ್ಲಿ ಪೆರ್ಡೂರು -ಬೈರಂಪಳ್ಳಿ- ಅಣ್ಣಾಲು ಸಂಪರ್ಕ ಸೇತುವೆಯ ಕಾಮಗಾರಿಯನ್ನು ಗುಣಮಟ್ಟದೊಂದಿಗೆ ನಿಗಧಿತ ಕಾಲಾವಧಿಯ ಒಳಗೆ ಪೂರ್ಣಗೊಳಿಸಿ, ಸಾರ್ವಜನಿಕರ ಉಪಯೋಗಕ್ಕೆ ಅನುಕೂಲ ಮಾಡಿಕೊಡಬೇಕೆಂದು ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಕರೆ ನೀಡಿದರು.

    Call us

    Click Here

    ಅವರು ಮಂಗಳವಾರ ಉಡುಪಿ ತಾಲೂಕಿನ ಪೆರ್ಡೂರು -ಬೈರಂಪಳ್ಳಿ- ಅಣ್ಣಾಲು ಸಂಪರ್ಕ ಸೇತುವೆ ಕಾಮಗಾರಿಗೆ ಗುದ್ದಲಿಪೂಜೆ (ಶಿಲಾನ್ಯಾಸ) ನೆರವೇರಿಸಿ ಮಾತನಾಡಿದರು. ಉಡುಪಿ ಜಿಲ್ಲಾ ವ್ಯಾಪ್ತಿಯಲ್ಲಿ 9 ಸೇತುವೆಗಳ ನಿರ್ಮಾಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಈಗಾಗಲೇ ಟೆಂಡರ್ ಅನ್ನು ಕರೆಯಲಾಗಿದ್ದು, ಅದರಲ್ಲಿ ಪೆರ್ಡೂರು-ಬೈರಂಪಳ್ಳಿ-ಅಣ್ಣಾಲು ಸಂಪರ್ಕ ಸೇತುವೆಯು ಒಂದಾಗಿದೆ. ಇಂದಿನಿಂದಲೇ ಸೇತುವೆ ನಿರ್ಮಾಣ ಕಾಮಗಾರಿಗಳನ್ನು ಪ್ರಾರಂಭಿಸಿ, ತ್ವರಿತವಾಗಿ ಗುಣಮಟ್ಟದೊಂದಿಗೆ ಕೈಗೊಂಡು ಪೂರ್ಣಗೊಳಿಸಲು ಮುಂದಾಗಬೇಕು ಎಂದರು.

    ಗ್ರಾಮೀಣ ಪ್ರದೇಶಗಳ ರಸ್ತೆ ಸೇರಿದಂತೆ ಮತ್ತಿತರ ಮೂಲ ಸೌಲಭ್ಯಗಳನ್ನು ಒದಗಿಸಲು ಮಾನ್ಯ ಮುಖ್ಯಮಂತ್ರಿಗಳು ವಿಶೇಷ ಅನುದಾನವನ್ನು ನೀಡಿದ್ದಾರೆ. ಈಗಾಗಲೇ ಪ್ರತೀ ವಿಧಾನಸಭಾ ಕ್ಷೇತ್ರಕ್ಕೆ ತಲಾ 25 ಕೋಟಿ ರೂ. ಅನುದಾನ ನೀಡುವುದರೊಂದಿಗೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗುತ್ತಿದೆ ಎಂದ ಅವರು, ಜಿಲ್ಲೆಯ ಅಭಿವೃದ್ಧಿ ಕಾರ್ಯಗಳ ಪ್ರಗತಿಯ ವೇಗವನ್ನು ಹೆಚ್ಚಿಸಲಾಗುವುದು ಎಂದರು.

    ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ, ಮಾನ್ಯ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಪೆರ್ಡೂರು -ಬೈರಂಪಳ್ಳಿ- ಅಣ್ಣಾಲು ಸಂಪರ್ಕ ಸೇತುವೆ ನಿರ್ಮಾಣ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿ ಸಹಕಾರ ನೀಡಿದ್ದಾರೆ. ಮಳೆಗಾಲದ ಒಳಗಾಗಿ ಸೇತುವೆ ಕಾಮಗಾರಿ ಪೂರ್ಣಗೊಳ್ಳಬೇಕಾಗಿದೆ ಎಂದರು.

    ಜಿಲ್ಲೆಯ ಭೌಗೋಳೀಕ ಪರಿಸರ ಆದರಿಸಿ ಹಾಗೂ ಹೆಚ್ಚು ಮಳೆಯಿಂದಾಗಿ ರಸ್ತೆಗಳು ಹಾಳಾಗಿವೆ. ಇವುಗಳ ದುರಸ್ಥಿ ಹಾಗೂ ಮರು ನಿರ್ಮಾಣಕ್ಕೆ ಸರಕಾರ ಸಹಕರಿಸಬೇಕು ಎಂದರು.

    Click here

    Click here

    Call us

    ಈ ಸಂದರ್ಭದಲ್ಲಿ ಕರಾವಳಿ ಅಭಿವೃದ್ಧಿಯ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಮುಖಂಡರಾದ ವಿನಯ್ ಕುಮಾರ್ ಸೊರಕೆ, ಜಯಾನಂದ ಹೆಗ್ಡೆ, ಕಿಶನ್ ಹೆಗ್ಡೆ ಕೊಳ್ಕೆಬೈಲು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ರಿಜ್ವಾನ್ ಅರ್ಷದ್

    25/11/2026

    ಶಾಸ್ರ್ತೀಯ ಶಿಸ್ತು ಜಾನಪದ ಸ್ವಾತಂತ್ರ್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಸಾಮಗ

    21/11/2026

    ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ: ಅರ್ಜಿ ಆಹ್ವಾನ

    21/11/2026
    Leave A Reply Cancel Reply

    20 − nineteen =

    Call us

    Click Here

    Call us

    Call us

    Call us
    Highest Viewed Recently
    • ಮಾದಕ ದ್ರವ್ಯ ಮುಕ್ತ ಭಾರತ ನಿರ್ಮಾಣಕ್ಕೆ ಜಾಗೃತಿ ಅಗತ್ಯ: ಡಾ. ಮಹಾಬಲ ಶೆಟ್ಟಿ
    • ಗುಣಮಟ್ಟದೊಂದಿಗೆ ತ್ವರಿತವಾಗಿ ಸೇತುವೆ ಕಾಮಗಾರಿ ಪೂರ್ಣಗೊಳಿಸಿ: ರಿಜ್ವಾನ್ ಅರ್ಷದ್
    • ಶ್ರೀ ಸಿದ್ಧಿವಿನಾಯಕ ವಸತಿ ಶಾಲೆಯಲ್ಲಿ ಎಐಸಿಎಸ್ ಅಂತರ್‌ ಶಾಲಾ ಮಟ್ಟದ ಹ್ಯಾಂಡ್ ಬಾಲ್ ಟೂರ್ನಮೆಂಟ್
    • ಜನರ ಸಮಸ್ಯೆಗಳಿಗೆ ತ್ವರಿತ ಪರಿಹಾರವೇ ಪ್ರಜಾಸೇವಾ ಆಂದೋಲನದ ಉದ್ದೇಶ: ಸಚಿವ ರಿಜ್ವಾನ್ ಅರ್ಷದ್
    • ಕಾರ್ಕಳ ಕ್ರಿಯೇಟಿವ್ ಕಾಲೇಜಿನಲ್ಲಿ ಸಂಭ್ರಮದ ದೀಪಾವಳಿ ಹಾಗೂ ತುಳಸಿ ಪೂಜೆ ಆಚರಣೆ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.