Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ – ಹದಿಹರೆಯದ ಸಮಸ್ಯೆ ಮತ್ತು ಸವಾಲುಗಳ ಕುರಿತು ಮಾಹಿತಿ ಕಾರ್ಯಾಗಾರ
    ಊರ್ಮನೆ ಸಮಾಚಾರ

    ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್ – ಹದಿಹರೆಯದ ಸಮಸ್ಯೆ ಮತ್ತು ಸವಾಲುಗಳ ಕುರಿತು ಮಾಹಿತಿ ಕಾರ್ಯಾಗಾರ

    Updated:25/11/2026No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್‌ ಕಾಂ ಸುದ್ದಿ.
    ಕುಂದಾಪುರ:
    ವಿದ್ಯಾರ್ಥಿಗಳಲ್ಲಿ ಹದಿಹರೆಯದ ವಯಸ್ಸಿನಲ್ಲಿ ಎದುರಾಗುವ ದೈಹಿಕ, ಮಾನಸಿಕ ಹಾಗೂ ಸಾಮಾಜಿಕ ಬದಲಾವಣೆಗಳ ಕುರಿತು ಅರಿವು ಮೂಡಿಸುವ ಉದ್ದೇಶದಿಂದ ಕಿರಿಮಂಜೇಶ್ವರದ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನಲ್ಲಿ ಹದಿಹರೆಯದ ಸಮಸ್ಯೆ ಮತ್ತು ಸವಾಲುಗಳ ಕುರಿತು ಮಾಹಿತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.

    Call us

    Click Here

    ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಬೈಂದೂರು ತಾಲ್ಲೂಕು ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕರಾದ ವಸಂತಿ ಅವರು ವಿದ್ಯಾರ್ಥಿಗಳಿಗೆ ಹದಿಹರೆಯದ ಸಮಸ್ಯೆಗಳು ಮತ್ತು ಅವುಗಳನ್ನು ಸಮರ್ಥವಾಗಿ ಎದುರಿಸುವ ವಿಧಾನಗಳ ಕುರಿತು ಮಾಹಿತಿ ನೀಡಿದರು.

    ಹದಿಹರೆಯವು ಜೀವನದ ಅತ್ಯಂತ ಸೂಕ್ಷ್ಮ ಹಾಗೂ ಮಹತ್ವದ ಹಂತವಾಗಿದ್ದು, ಈ ಅವಧಿಯಲ್ಲಿ ಉಂಟಾಗುವ ದೈಹಿಕ ಬದಲಾವಣೆಗಳು, ಮಾನಸಿಕ ಗೊಂದಲಗಳು, ಭಾವನಾತ್ಮಕ ಏರಿಳಿತಗಳು ಮತ್ತು ಆತ್ಮವಿಶ್ವಾಸದ ಕೊರತೆಯನ್ನು ಸಮತೋಲನದಿಂದ ನಿಭಾಯಿಸಬೇಕು. ಯಾವುದೇ ಸಮಸ್ಯೆಗಳಿದ್ದರೂ ಅವುಗಳನ್ನು ಮುಚ್ಚಿಡದೆ ಪೋಷಕರು, ಶಿಕ್ಷಕರು ಅಥವಾ ತಜ್ಞರೊಂದಿಗೆ ಮುಕ್ತವಾಗಿ ಚರ್ಚಿಸಬೇಕು ಎಂದು ತಿಳಿಸಿದರು.

    ಏಡ್ಸ್‌ನಂತಹ ಮಾರಕ ರೋಗಗಳ ಕುರಿತು ಮಾಹಿತಿ ನೀಡಿದ ಅವರು, ಎಚ್‌ಐವಿ ಸೋಂಕು ಹರಡುವ ವಿಧಾನಗಳು, ಮುನ್ನೆಚ್ಚರಿಕೆ ಕ್ರಮಗಳು ಹಾಗೂ ಸೋಂಕಿತರ ಬಗ್ಗೆ ತಾರತಮ್ಯವಿಲ್ಲದೆ ಮಾನವೀಯತೆಯಿಂದ ವರ್ತಿಸುವ ಅಗತ್ಯವನ್ನು ವಿವರಿಸಿದರು.

    ಇಂದಿನ ಡಿಜಿಟಲ್ ಯುಗದಲ್ಲಿ ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆಯಿಂದ ವಿದ್ಯಾರ್ಥಿಗಳ ಏಕಾಗ್ರತೆ, ಮಾನಸಿಕ ಆರೋಗ್ಯ ಮತ್ತು ಶೈಕ್ಷಣಿಕ ಪ್ರಗತಿಯ ಮೇಲೆ ಉಂಟಾಗುವ ದುಷ್ಪರಿಣಾಮಗಳ ಕುರಿತು ಎಚ್ಚರಿಸಿದರು. ಮೊಬೈಲ್ ಮತ್ತು ಇಂಟರ್‌ನೆಟ್‌ಗಳನ್ನು ಮಿತವಾಗಿ ಹಾಗೂ ಜವಾಬ್ದಾರಿಯುತವಾಗಿ ಬಳಸಬೇಕು. ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿಯನ್ನು ಹಂಚಿಕೊಳ್ಳಬಾರದು ಎಂದರು.

    Click here

    Click here

    Call us

    ವ್ಯಕ್ತಿತ್ವ ವಿಕಸನದ ಕುರಿತು ಮಾತನಾಡಿದ ಅವರು, ಆತ್ಮವಿಶ್ವಾಸ, ಶಿಸ್ತು, ಸಮಯಪ್ರಜ್ಞೆ, ಸಕಾರಾತ್ಮಕ ಚಿಂತನೆ, ಉತ್ತಮ ಸಂವಹನ ಕೌಶಲ ಹಾಗೂ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಬೆಳೆಸಿಕೊಳ್ಳಬೇಕು. ಜೀವನದಲ್ಲಿ ಎದುರಾಗುವ ಸೋಲು-ಗೆಲುವುಗಳನ್ನು ಸಮಾನವಾಗಿ ಸ್ವೀಕರಿಸಿ, ಉತ್ತಮ ಗುರಿಯೊಂದಿಗೆ ಮುನ್ನಡೆಯಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

    ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಶಿಕ್ಷಕಿ ದೀಪಿಕಾ ಆಚಾರ್ಯ ವಹಿಸಿದ್ದರು. ಶಾಲಾ ಸಂಯೋಜಕರಾದ ಸುಬ್ರಮಣ್ಯ ಮರಾಟಿ ಅವರು ಸ್ವಾಗತಿಸಿ, ಕಾರ್ಯಕ್ರಮವನ್ನು ನಿರ್ವಹಿಸಿ, ವಂದಿಸಿದರು.

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ವಲಯಮಟ್ಟಕ್ಕೆ ಆಯ್ಕೆ

    25/11/2026

    ಕುಂಭಾಸಿ: ಮಿನಿ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – 30ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು, ಸಣ್ಣಪುಟ್ಟ ಗಾಯ

    25/11/2026

    ಡಿ.27ರಂದು ಶ್ರೀ ಶೃಂಗೇರಿ ಶಂಕರ ಮಠ ಕುಂಭಕಾಶಿ ವತಿಯಿಂದ ತಾಲೂಕು ಮಟ್ಟದ ಸ್ಪರ್ಧೆ

    25/11/2026
    Leave A Reply Cancel Reply

    five − three =

    Call us

    Click Here

    Call us

    Call us

    Call us
    Highest Viewed Recently
    • ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ವಲಯಮಟ್ಟಕ್ಕೆ ಆಯ್ಕೆ
    • ಕುಂಭಾಸಿ: ಮಿನಿ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – 30ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು, ಸಣ್ಣಪುಟ್ಟ ಗಾಯ
    • ಡಿ.27ರಂದು ಶ್ರೀ ಶೃಂಗೇರಿ ಶಂಕರ ಮಠ ಕುಂಭಕಾಶಿ ವತಿಯಿಂದ ತಾಲೂಕು ಮಟ್ಟದ ಸ್ಪರ್ಧೆ
    • ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್: ಎರಡು ವಿಭಾಗದಲ್ಲಿ ಮೊಹಮ್ಮದ್ ಅಝಾನ್‌ ಪ್ರಥಮ
    • ಗಂಗೊಳ್ಳಿ ಗ್ರಾಪಂಗೆ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಜಿಪಂ ಸಿಇಒ ಅವರಿಗೆ ಮನವಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.