Close Menu
    Facebook X (Twitter) Instagram
    Videos Join us Watch Live
    Facebook X (Twitter) Instagram WhatsApp
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    • ಮುಖಪುಟ
    • ಬೈಂದೂರು
    • ಸುದ್ದಿ
      • ಕುಂದಾಪ್ರ ಸಿಟಿ ಸಮಾಚಾರ
      • ಬೈಂದೂರು
      • ಕೊಲ್ಲೂರು
      • ಕುಂದಾಪುರ
      • ಗಂಗೊಳ್ಳಿ
      • ಅಮಾಸೆಬೈಲು
      • ಶಂಕರನಾರಾಯಣ
      • ಉಡುಪಿ ಜಿಲ್ಲೆ
      • ಹೊರನಾಡ ಕರಾವಳಿಗ
      • ಅಪಘಾತ-ಅಪರಾಧ ಸುದ್ದಿ
    • ವಿಶೇಷ ವರದಿ
    • ಕುಂದಾಪ್ರ ಕನ್ನಡ
    • ವಿಶೇಷ
      • ವ್ಯಕ್ತಿ – ವಿಶೇಷ
      • ಯುವಜನ
      • ಶಿಕ್ಷಣ
      • ಮಹಿಳಾಮಣಿ
      • ಬೆಳಕಾಗೋಣ ಬನ್ನಿ
      • ಸಂದರ್ಶನ
      • ಉದ್ಯೋಗ ಮಾಹಿತಿ
    • ಅಂಕಣ
      • ಅನುಭವದ ಆಳದಿಂದ
      • ಒಡ್ಡೋಲಗ
      • ಮನಸೇ ಕೇಳು
      • ಕಂಡದ್ ಕೇಂಡದ್
      • ಯಡ್ತರೆ ಕಾಲಂ
      • ಕಚಗುಳಿ
    • ಲೇಖನ
      • ವಿಶೇಷ ಲೇಖನ
      • ಪ್ರಚಲಿತ
      • ತನ್ನಿಮಿತ್ತ
      • ವಿಜ್ಞಾನ
      • ಸೋಶಿಯಲ್ ಟಾಕ್
      • ಕಲೆ-ಸಂಸ್ಕೃತಿ
        • ಯಕ್ಷಲೋಕ
        • ರಂಗಭೂಮಿ
        • ಆಟೋಟ
    Kundapra.com ಕುಂದಾಪ್ರ ಡಾಟ್ ಕಾಂKundapra.com ಕುಂದಾಪ್ರ ಡಾಟ್ ಕಾಂ
    Watch Live
    Home » ಕುಂಭಾಸಿ: ಮಿನಿ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – 30ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು, ಸಣ್ಣಪುಟ್ಟ ಗಾಯ
    ಊರ್ಮನೆ ಸಮಾಚಾರ

    ಕುಂಭಾಸಿ: ಮಿನಿ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – 30ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು, ಸಣ್ಣಪುಟ್ಟ ಗಾಯ

    No Comments
    Facebook Twitter Pinterest LinkedIn WhatsApp Reddit Tumblr Email
    Share
    Facebook Twitter WhatsApp LinkedIn

    Click Here

    Click Here

    Call us

    Call us

    Call us

    Call us

    Click Here

    ಕುಂದಾಪ್ರ ಡಾಟ್ ಕಾಂ ಸುದ್ದಿ.
    ಕುಂದಾಪುರ:
    ತಾಲೂಕಿನ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಿಂದ ತ್ರಾಸಿ ಕಡೆಗೆ ತೆರಳುತ್ತಿದ್ದ ಮಿನಿ ಬಸ್ ಹಾಗೂ ಟ್ಯಾಂಕರ್ ನಡುವಿನ ಅಪಘಾತದಲ್ಲಿ ಪ್ರಯಾಣಿಕರು ಸಣ್ಣಪುಣ್ಣ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಸ್ಸಿನ ಮುಂಭಾಗ ಸಂಪೂರ್ಣ ಹಾನಿಯಾಗಿದೆ. ಮಂಗಳವಾರ ರಾಷ್ಟ್ರೀಯ ಹೆದ್ದಾರಿ 66ರ ಆನೆಗುಡ್ಡೆ ದೇಗುಲದ ಗೋಪುರದ ಎದುರು ಈ ಘಟನೆ ನಡೆದಿದೆ.

    Call us

    Click Here

    ಉಡುಪಿಯಲ್ಲಿ ನಡೆದ ಕಾಂಗ್ರೆಸ್ ಗ್ಯಾರಂಟಿ ಸಮಾವೇಶದಲ್ಲಿ ಭಾಗವಹಿಸಲು ತ್ರಾಸಿಯಿಂದ ಪ್ರವಾಸಿ ಬಸ್ಸಿನಲ್ಲಿ ಸುಮಾರು 30 ಮಂದಿ ತೆರಳಿದ್ದರು. ಸಮಾವೇಶ ಮುಗಿದ ಬಳಿಕ ಹಿಂದಿರುಗುವಾಗ ಆನೆಗುಡ್ಡೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ಊಟ ಮುಗಿಸಿದ್ದರು. ಅಲ್ಲಿಂದ ತ್ರಾಸಿ ತೆರಳಲು ದೇವಸ್ಥಾನದ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿ 66ಕ್ಕೆ ಬಂದು, ಕುಂದಾಪುರದ ಕಡೆಗೆ ತೆರಳಲು ಚಾಲಕ ಬಸ್ಸನ್ನು ತಿರುಗಿಸುತ್ತಿದ್ದಾಗ ಅಪಘಾತ ಸಂಭವಿಸಿದೆ. ಮಂಗಳೂರಿನಿಂದ ಕುಂದಾಪುರದತ್ತ ಬುಲೆಟ್ ವೇಗವಾಗಿ ಬರುತ್ತಿದ್ದರಿಂದ ನಿಯಂತ್ರಣ ತಪ್ಪಿ ಬಸ್ಸಿನ ಬಲಭಾಗಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ.

    ಡಿಕ್ಕಿಯ ರಭಸಕ್ಕೆ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ನಿಂತಿದೆ. ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಟ್ಯಾಂಕರ್ನ ಒಂದು ಭಾಗ ಹಾನಿಯಾಗಿದೆ. ಅದೃಷ್ಟವಶಾತ್ ಬಸ್ಸಿನಲ್ಲಿದ್ದ ಎಲ್ಲಾ 30 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ಕುಂದಾಪುರ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಹೆದ್ದಾರಿಯಲ್ಲಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

    Click here

    Click here

    Call us

    kundapura
    Share. Facebook Twitter Pinterest LinkedIn Tumblr Telegram Email
    ನ್ಯೂಸ್ ಬ್ಯೂರೋ
    • Website
    • Tumblr

    Related Posts

    ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ವಲಯಮಟ್ಟಕ್ಕೆ ಆಯ್ಕೆ

    25/11/2026

    ಡಿ.27ರಂದು ಶ್ರೀ ಶೃಂಗೇರಿ ಶಂಕರ ಮಠ ಕುಂಭಕಾಶಿ ವತಿಯಿಂದ ತಾಲೂಕು ಮಟ್ಟದ ಸ್ಪರ್ಧೆ

    25/11/2026

    ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್: ಎರಡು ವಿಭಾಗದಲ್ಲಿ ಮೊಹಮ್ಮದ್ ಅಝಾನ್‌ ಪ್ರಥಮ

    25/11/2026
    Leave A Reply Cancel Reply

    nineteen − thirteen =

    Call us

    Click Here

    Call us

    Call us

    Call us
    Highest Viewed Recently
    • ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಜನತಾ ನ್ಯೂ ಇಂಗ್ಲೀಷ್ ಮೀಡಿಯಂ ಸ್ಕೂಲ್‌ನ ವಿದ್ಯಾರ್ಥಿಗಳು ವಲಯಮಟ್ಟಕ್ಕೆ ಆಯ್ಕೆ
    • ಕುಂಭಾಸಿ: ಮಿನಿ ಬಸ್ಸಿಗೆ ಟ್ಯಾಂಕರ್ ಡಿಕ್ಕಿ – 30ಕ್ಕೂ ಅಧಿಕ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು, ಸಣ್ಣಪುಟ್ಟ ಗಾಯ
    • ಡಿ.27ರಂದು ಶ್ರೀ ಶೃಂಗೇರಿ ಶಂಕರ ಮಠ ಕುಂಭಕಾಶಿ ವತಿಯಿಂದ ತಾಲೂಕು ಮಟ್ಟದ ಸ್ಪರ್ಧೆ
    • ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್: ಎರಡು ವಿಭಾಗದಲ್ಲಿ ಮೊಹಮ್ಮದ್ ಅಝಾನ್‌ ಪ್ರಥಮ
    • ಗಂಗೊಳ್ಳಿ ಗ್ರಾಪಂಗೆ ಬಾಕಿ ಹಣವನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಜಿಪಂ ಸಿಇಒ ಅವರಿಗೆ ಮನವಿ

    © 2026 ThemeSphere. Designed by ThemeSphere.
    • About portal
    • Our team
    • Privacy policy

    Type above and press Enter to search. Press Esc to cancel.