ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ಕನ್ನಡ ಶಿಕ್ಷಕರೇ ಒಂದು ಸಂಘ ಮಾಡಿಕೊಂಡು ಕನ್ನಡಪರ ಕಾರ್ಯಕ್ರಮ ಮಾಡುವುದು ಭಾಷಾ ಬೆಳವಣಿಗೆ ದೃಷ್ಟಿಯಲ್ಲಿ ಒಂದು ಉತ್ತಮ ಹೆಜ್ಜೆ ಎಂದು ಗೀತಾನಂದ ಫೌಂಡೇಶನ್ ಮಣೂರು ಪಡುಕೆರೆ ಪ್ರವರ್ತಕರಾದ ಆನಂದ್ ಸಿ. ಕುಂದರ್ ಹೇಳಿದರು.
ಅವರು ಸರಕಾರಿ ಪದವಿಪೂರ್ವ ಕಾಲೇಜು ಬೋರ್ಡ್ ಹೈಸ್ಕೂಲ್ ಶ್ರೀ ಲಕ್ಷ್ಮೀನರಸಿಂಹ ಕಲಾಮಂದಿರದಲ್ಲಿ ನಡೆದ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘ ಉಡುಪಿ ಜಿಲ್ಲೆ ಅವರು ಹಮ್ಮಿಕೊಂಡ ಜಿಲ್ಲೆಯ ಕನ್ನಡ ಭಾಷಾ ಸಾಧಕ ಶಿಕ್ಷಕರ ಅಭಿನಂದನಾ ಕಾರ್ಯಕ್ರಮ ಮತ್ತು ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ಶಿಕ್ಷಕರ ಸಾಧನೆಯನ್ನು ಗುರುತಿಸಿ ಪ್ರೋತ್ಸಾಹಿಸಿದಾಗ ಅದು ಮಕ್ಕಳ ಕಲಿಕೆಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇಂತಹ ಉತ್ತಮ ಕಾರ್ಯಕ್ರಮ ಆಯೋಜಿಸಿ ಕನ್ನಡ ಸೇವೆ ಮಾಡುವ ಸಂಘದ ಕಾರ್ಯ ಚಟುವಟಿಕೆಗಳನ್ನು ಶ್ಲಾಘಿಸಿದರು.
ಮುಖ್ಯ ಅತಿಥಿ ಉಡುಪಿ ಡಯಟ್ ಉಪನಿರ್ದೇಶಕರು ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರಾಂಶುಪಾಲರಾದ ಡಾ. ಅಶೋಕ ಕಾಮತ್, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶೋಭಾ ಶೆಟ್ಟಿ , ಕುಂದಾಪುರ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದಅಧ್ಯಕ್ಷ ಅಶೋಕ್ ಪೂಜಾರಿ ಬೀಜಾಡಿ, ರಾಧಾಕೃಷ್ಣ ಕ್ರಮಧಾರಿ ಅಧ್ಯಕ್ಷರು ನೆರಳು ಚಾರಿಟೇಬಲ್ ಟ್ರಸ್ಟ್ ಅರಸಮ್ಮಕಾನು ಶೇಡಿಮನೆ ಸಾಧಕ ಶಿಕ್ಷಕರನ್ನು ಅಭಿನಂದಿಸಿ ಶುಭಾಶಯ ಕೋರಿದರು.
ವಿಜಯ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲಿಮಿಟೆಡ್ ಕುಂದಾಪುರ ಇವರ ಸಹಕಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರು, ಜಿಲ್ಲಾ ರಾಜ್ಯ ಪ್ರಶಸ್ತಿ ಪಡೆದ ಶಿಕ್ಷಕರು ಹಾಗೂ ಕನ್ನಡದಲ್ಲಿ ಪೂರ್ಣಾಂಕ ಪಡೆಯಲು ಸಹಕರಿಸಿದ ಶಿಕ್ಷಕರನ್ನು ಗೌರವಿಸಲಾಯಿತು.
ಅಧ್ಯಕ್ಷತೆ ವಹಿಸಿದ ಉಡುಪಿ ಜಿಲ್ಲಾ ಪ್ರೌಢಶಾಲಾ ಕನ್ನಡ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ ವಿ ಆನಂದ ಸಾಲಿಗ್ರಾಮ ಕನ್ನಡ ಭಾಷೆ ಉಳಿದು ಬೆಳೆಯಬೇಕಾದರೆ ಕನ್ನಡ ಸಂಘಗಳು ಅಗತ್ಯ, ಶಿಕ್ಷಕರೆಲ್ಲ ಈ ನಿಟ್ಟಿನಲ್ಲಿ ಒಗ್ಗಟ್ಟಾಗ ಬೇಕು ಎಂದರು.
ಕನ್ನಡ ಜ್ಞಾನ ನೇಸರ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಸುರೇಂದ್ರ ನಾಯ್ಕ್ , ಮುಖ್ಯ ಶಿಕ್ಷಕರು ಹಿರೇ ಎಮ್ಮಿಗನೂರು, ಚಿತ್ರದುರ್ಗ ಇವರು ಪರಿಣಾಮಕಾರಿ ಭಾಷಾ ಬೋಧನೆ ಕುರಿತು ಕಾರ್ಯಾಗಾರ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಕೊಂಡಳ್ಳಿ ಪ್ರಭಾಕರ ಶೆಟ್ಟಿ, ಕುಂದಾಪುರ ತಾಲೂಕು ಅಧ್ಯಕ್ಷರಾದ ರಮೇಶ್ ಕುಲಾಲ್ ಎನ್ ಉಪಸ್ಥಿತರಿದ್ದರು.
ತಾಲೂಕು ಅಧ್ಯಕ್ಷರಾದ, ಗಣೇಶ್ ಜಾಲ್ಸೂರು, ಮಹೇಶ್ ಹೈಕಾಡಿ, ಗಣೇಶ್ ದೇವಾಡಿಗ, ಮಾಲತಿ ವಕ್ವಾಡಿ, ಶಕುಂತಲಾ, ಜ್ಯೋತಿ ಕೃಷ್ಣ ಪೂಜಾರಿ ಹಾಗೂ ಜಿಲ್ಲಾ ಪದಾಧಿಕಾರಿಗಳಾದ ಮಂಜುನಾಥ ಕೆ ಶಿವಪುರ, ಸುಭಿಕ್ಷಾ ಶೆಟ್ಟಿ, ರವಿರಾಜ ಶೆಟ್ಟಿ, ಅರ್ಪಣಾಬಾಯಿ ಕೆ, ಸವಿತಾ ನಾಯಕ್ ಕಾರ್ಯದರ್ಶಿ ರಾಜೀವ ಪೂಜಾರಿ ಎಸ್. ಉಪಸ್ಥಿತರಿದ್ದು ಸಹಕರಿಸಿದರು. ರಮೇಶ್ ಕುಲಾಲ್ ಎನ್. ಸ್ವಾಗತಿಸಿ, ಕೊಂಡಳ್ಳಿ ಪ್ರಭಾಕರ ಶೆಟ್ಟಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ರಾಜೀವ ಪೂಜಾರಿ ಎಸ್ ಕಾರ್ಯಕ್ರಮ ನಿರೂಪಿಸಿದರು. ರಮಾನಂದ ನಾಯಕ್ ವಂದಿಸಿದರು.














