ಕುಂದಾಪ್ರ ಡಾಟ್ ಕಾಂ ಸುದ್ದಿ.
ಕುಂದಾಪುರ: ತಾಲೂಕಿನ ತೆಕ್ಕಟ್ಟೆ ವಿಶ್ವ ವಿನಾಯಕ ಆಂಗ್ಲ ಮಾಧ್ಯಮ ಶಾಲೆ ಹಾಗೂ ಪಿಯ ಕಾಲೇಜಿನಲ್ಲಿ ಸಾಂಸ್ಕ್ರತಿಕ ಹಾಗೂ ಸಾಹಿತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.
ಮುಖ್ಯ ಅತಿಥಿಗಳಾಗಿ ಕೆದೂರು ಮುಖ್ಯ ಶಿಕ್ಷಕರಾದ ಉದಯ ಕುಮಾರ್ ಶೆಟ್ಟಿ ಹಾಗೂ ಗೌರವ ಉಪಸ್ಥಿತರಾಗಿ ತೆಕ್ಕಟ್ಟೆಯ ಸೇವಾ ಸಂಗಮದ ಮುಖ್ಯ ಶಿಕ್ಷಕ ಹರ್ಷ ಕೋಟೇಶ್ವರ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ, ಮಕ್ಕಳಿಗೆ ಬಹುಮಾನ ವಿತರಣೆಯನ್ನು ಮಾಡಿದರು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶಾಲೆಯ ಉತ್ಕ್ರಷ್ಠ ಸಾಧನೆಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರ ಮೂಲಕ ಮಕ್ಕಳಲ್ಲಿನ ಪ್ರತಿಭೆಗೆ ಪ್ರೋತ್ಸಾಹಿಸಿ ಜೀವನದಲ್ಲಿ ಶಿಸ್ತು, ಕರ್ತವ್ಯ ಪರಿಶ್ರಮವನ್ನು ಬೆಳೆಸಿಕೊಳ್ಳಬೇಕೆಂದು ಕಿವಿಮಾತು ನೀಡಿದರು. ವಿದ್ಯಾರ್ಥಿ ಜೀವನದ ಮಹತ್ವವನ್ನು ವಿವರಿಸುತ್ತಾ ಕಳೆದು ಹೋದ ವಿದ್ಯಾರ್ಥಿ ಜೀವನದ ಸುಂದರ ಕ್ಷಣಗಳನ್ನು ಮತ್ತೆ ಮರಳಿ ಪಡೆಯಲು ಸಾಧ್ಯವಿಲ್ಲ ಆದ್ದರಿಂದ ನಿಮ್ಮ ಗುರಿಯೆಡೆಗೆ ಧೃಡ ಸಂಕಲ್ಪದಿಂದ ಮುನ್ನಡೆಯಿರಿ ಏಕೆಂದರೆ ಪರಿಶ್ರಮಕ್ಕೆ ಪರ್ಯಾಯವಿಲ್ಲ ಮತ್ತು ಯಶಸ್ಸಿಗೆ ಯಾವುದೇ ಅಡ್ಡ ದಾರಿಯಿಲ್ಲ ಎಂಬ ಅಮೂಲ್ಯ ಸಂದೇಶವನ್ನು ನೀಡಿದರು.
ಕಾರ್ಯಕ್ರಮದಲ್ಲಿ ಶಾಲೆಯ ಆಡಳಿತ ನಿರ್ದೇಶಕರು ಎಮ್. ಪ್ರಭಾಕರ ಶೆಟ್ಟಿ, ಆಡಳಿತ ನಿರ್ವಹಣ ಅಧಿಕಾರಿ ವಿವಿರಾಜ್ ಹೆಗ್ಡೆ, ಆಡಳಿತ ಅಧಿಕಾರಿ ಹರೀಶ್ ಮರವಂತೆ, ಪ್ರಾಂಶುಪಾಲರಾದ ಸಂದೀಪ್ ಪುತ್ರನ್, ಶಿಕ್ಷಕ ವೃಂದದವರು, ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.














